ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಪಿಲ್ ಶರ್ಮಾ, ಹೀನಾ ಖಾನ್, ಹುಮಾ ಖುರೇಷಿಗೆ ಇ ಡಿ ನೋಟಿಸ್

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಕಪಿಲ್ ಶರ್ಮಾ, ಹೀನಾ ಖಾನ್, ಹುಮಾ ಖುರೇಷಿಗೆ ಇ ಡಿ ನೋಟಿಸ್

ದೆಹಲಿ: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಾಲಿವುಡ್ ಹಾಸ್ಯನಟ ಕಪಿಲ್ ಶರ್ಮಾ, ನಟಿಯರಾದ ಹುಮಾ ಖುರೇಷಿ ಮತ್ತು ಹೀನಾ ಖಾನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಸಮನ್ಸ್ ಜಾರಿ ಮಾಡಿದೆ.

ಖ್ಯಾತ ನಟ ರಣಬೀರ್ ಕಪೂರ್ ಅವರಿಗೆ ಸಮನ್ಸ್ ಜಾರಿಯಾದ ಮರುದಿನವೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹ. ಕಪಿಲ್ ಶರ್ಮಾ, ಹುಮಾ ಖುರೇಷಿ ಮತ್ತು ಹೀನಾ ಖಾನ್ ಅವರನ್ನು ಬೇರೆ ಬೇರೆ ದಿನಾಂಕಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಮೂವರು ಈ ಪ್ರಕರಣದಲ್ಲಿ ಆರೋಪಿಗಳಲ್ಲ ಎಂದು ವರದಿಯಾಗಿದ್ದು, ಹವಾಲಾ ಪ್ರಕರಣದಲ್ಲಿ ಹಣ ಪಾವತಿ ಹೇಗೆ ನಡೆದಿದೆ ಎಂಬುದನ್ನು ಪತ್ತೆ ಹಚ್ಚಲು ವಿಚಾರಣೆ ನಡೆಸಲಾಗುವುದು. ಏತನ್ಮಧ್ಯೆ, ರಣಬೀರ್ ಶುಕ್ರವಾರ (6) ರಾಯ್‌ಪುರದಲ್ಲಿರುವ ಇಡಿ ಪ್ರಾದೇಶಿಕ ಕಚೇರಿಗೆ ಹಾಜರಾಗಬೇಕಿತ್ತು, ಆದರೆ ಅವರು ಎರಡು ವಾರಗಳ ಸಮಯ ಕೇಳಿದ್ದಾರೆಂದು ಹೇಳಲಾಗುತ್ತಿದೆ.

ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಆಪ್ ಪ್ರಮೋಟರ್‌ ಆಗಿರುವ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಭಾರತದಲ್ಲಿ 4 ಸಾವಿರ ಆಪರೇಟರ್‌ಗಳನ್ನು ನೇಮಿಸಿಕೊಂಡಿದ್ದಾರೆ. ಪ್ರತಿ ಆಪರೇಟರ್ ಸುಮಾರು 200 ಗ್ರಾಹಕರನ್ನು ಹೊಂದಿದ್ದಾರೆ. ಆ ಲೆಕ್ಕಾಚಾರದ ಪ್ರಕಾರ ಪ್ರತಿದಿನ ರೂ.200 ಕೋಟಿ ಕೈ ಬದಲಾಗುತ್ತಿದೆ. 70-30 ಅನುಪಾತದಲ್ಲಿ ಲಾಭವನ್ನು ಹಂಚಿಕೊಳ್ಳಲು ವಿವಿಧ ದೇಶಗಳಲ್ಲಿ ಬೀಟರ್‌ಗಳನ್ನು ನೇಮಿಸಲಾಗಿತ್ತು. ಈ ಆ್ಯಪ್‌ನ ಚಟುವಟಿಕೆಗಳು ಯುಎಇಯಲ್ಲಿ ಮುಖ್ಯ ಕೇಂದ್ರವಾಗಿ ನಡೆಯುತ್ತಿವೆ ಎಂದು ಇಡಿ ತನಿಖೆಯು ಕಂಡುಹಿಡಿದಿದೆ. ಸೌರಭ್ ಮತ್ತು ರವಿ ಸದ್ಯ ತಲೆಮರೆಸಿಕೊಂಡಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು