ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜುಲೈ ಮತ್ತು ಸೆಪ್ಟೆಂಬರ್ ನಡುವೆ ಎಲ್ ನಿನೋ ಪರಿಣಾಮ ತೀವ್ರ: ವಿಶ್ವಸಂಸ್ಥೆ ಎಚ್ಚರಿಕೆ

PPeepal Media

Peepal Media ದೇಶ

• 1 ನಿಮಿಷದ ಓದು

ಜುಲೈ ಮತ್ತು ಸೆಪ್ಟೆಂಬರ್ ನಡುವೆ ಎಲ್ ನಿನೋ ಪರಿಣಾಮ ತೀವ್ರ: ವಿಶ್ವಸಂಸ್ಥೆ ಎಚ್ಚರಿಕೆ

ಜುಲೈ ಮತ್ತು ಸೆಪ್ಟೆಂಬರ್ ನಡುವೆ ಎಲ್ ನಿನೋ ತೀವ್ರ ರೂಪ ಪಡೆದುಕೊಳ್ಳಲಿದ್ದು, ಇದರಿಂದಾಗಿ ಹವಾಮಾನದ ತೀವ್ರ ವೈಪರೀತ್ಯಗಳು ಉಂಟಾಗುವ ಸಾಧ್ಯತೆಗಳು ಹೆಚ್ಚಾಗಲಿವೆ ಎಂದು ವಿಶ್ವಸಂಸ್ಥೆಯ ಹವಾಮಾನ ಸಂಸ್ಥೆ ಶುಕ್ರವಾರ ಎಚ್ಚರಿಸಿದೆ.

ಎಲ್ ನಿನೋ ಈಗಾಗಲೇ ಪ್ರಾರಂಭವಾಗಿದ್ದು, ಮುಂಬರುವ ತಿಂಗಳುಗಳಲ್ಲಿ ಇದು ವೇಗವಾಗಿ ಬಲಗೊಳ್ಳಲಿದೆ, ಆದ್ದರಿಂದ ದೇಶಗಳು ಇದರ ಪರಿಣಾಮವನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯೂಎಂಒ) ತಿಳಿಸಿದೆ. ಹಲವು ಪ್ರದೇಶಗಳಲ್ಲಿ ಬರಗಾಲ, ಭಾರಿ ಮಳೆ, ಭೂಭಾಗಗಳಲ್ಲಿ ಬಿಸಿಗಾಳಿ ಮತ್ತು ಸಮುದ್ರಗಳಲ್ಲಿ ಉಷ್ಣ ಅಲೆಗಳ ಅಪಾಯ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದೆ.

ಡಬ್ಲ್ಯೂಎಂಒ ಎಲ್ ನಿನೋ ವಿದ್ಯಮಾನಗಳನ್ನು ದುರ್ಬಲ, ಸಾಧಾರಣ, ಪ್ರಬಲ ಮತ್ತು ಅತ್ಯಂತ ಪ್ರಬಲ ಎಂದು ನಾಲ್ಕು ಹಂತಗಳಾಗಿ ವರ್ಗೀಕರಿಸಿದೆ. ಪ್ರಸ್ತುತ ಇದು ಮೂರನೇ ಅತ್ಯುನ್ನತ ಹಂತವನ್ನು ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಜಿನೀವಾ ಮೂಲದ ಈ ಸಂಸ್ಥೆ ನೀಡಿರುವ ವಿವರಗಳ ಪ್ರಕಾರ.. ಉತ್ತರ ಗೋಳಾರ್ಧದಲ್ಲಿ ಶರತ್ಕಾಲದ ಸಮಯದಲ್ಲಿ ಎಲ್ ನಿನೋ ಮತ್ತಷ್ಟು ಬಲಗೊಳ್ಳಲಿದ್ದು, ಅದರ ಪರಿಣಾಮವು ಪ್ರಪಂಚದ ಹಲವು ಭಾಗಗಳಿಗೆ ವ್ಯಾಪಿಸಲಿದೆ ಎಂದು ಅಂದಾಜಿಸಲಾಗಿದೆ. ಅದೇ ಸಮಯದಲ್ಲಿ ಭೂಮಧ್ಯರೇಖೆಯ ಅಟ್ಲಾಂಟಿಕ್ ಸಾಗರ ಪ್ರದೇಶವು ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಾಗಿರುವ ಸಾಧ್ಯತೆಯಿದೆ.

ಜುಲೈ ಮತ್ತು ಸೆಪ್ಟೆಂಬರ್ ನಡುವೆ 60 ಡಿಗ್ರಿ ದಕ್ಷಿಣ ಅಕ್ಷಾಂಶದಿಂದ 60 ಡಿಗ್ರಿ ಉತ್ತರ ಅಕ್ಷಾಂಶದವರೆಗಿನ ಭೂಭಾಗಗಳಲ್ಲಿ, ಅಂದರೆ ಧ್ರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಎಲ್ಲಾ ಜನವಸತಿ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಅಂದಾಜಿಸಲಾಗಿದೆ. ಜುಲೈನಿಂದ ಸೆಪ್ಟೆಂಬರ್‌ವರೆಗಿನ ಮಳೆಯ ಮುನ್ಸೂಚನೆಗಳೂ ಸಹ ಎಲ್ ನಿನೋ ಬಲಗೊಳ್ಳುವ ಪರಿಸ್ಥಿತಿಗಳಿಗೆ ಅನುಗುಣವಾಗಿಯೇ ಇವೆ. ಅಮೆರಿಕದ ನೈಋತ್ಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು