ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮೋದಿಯ ಹಾದಿಯಲ್ಲಿ ಚುನಾವಣಾ ಆಯೋಗ: ಪತ್ರಿಕಾ ಗೋಷ್ಟಿ ನಡೆಸುವಂತೆ ಪತ್ರಕರ್ತರ ಆಗ್ರಹ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮೋದಿಯ ಹಾದಿಯಲ್ಲಿ ಚುನಾವಣಾ ಆಯೋಗ: ಪತ್ರಿಕಾ ಗೋಷ್ಟಿ ನಡೆಸುವಂತೆ ಪತ್ರಕರ್ತರ ಆಗ್ರಹ

ಹೊಸದೆಹಲಿ: ಸಾರ್ವತ್ರಿಕ ಚುನಾವಣೆಯ ಮೂರು ಹಂತಗಳು ಪೂರ್ಣಗೊಂಡಿದ್ದರೂ ಚುನಾವಣಾ ಆಯೋಗ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿಲ್ಲ ಎಂದು ಐದು ಪತ್ರಕರ್ತರ ಸಂಘಗಳು ಟೀಕಿಸಿವೆ.

ಈ ನಿಟ್ಟಿನಲ್ಲಿ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಭಾರತೀಯ ಮಹಿಳಾ ಪತ್ರಿಕಾ ನಿಗಮ, ಪ್ರೆಸ್ ಅಸೋಸಿಯೇಷನ್, ವಿದೇಶಿ ವರದಿಗಾರರ ಕ್ಲಬ್ ಮತ್ತು ದೆಹಲಿ ಪತ್ರಕರ್ತರ ಒಕ್ಕೂಟವು ಜಂಟಿಯಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿವೆ.

ಕಳೆದ ಮೂರು ಹಂತದ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ನಿಖರ ಸಂಖ್ಯೆಯನ್ನು ಚುನಾವಣಾ ಆಯೋಗ ಇನ್ನೂ ಬಹಿರಂಗಪಡಿಸಿಲ್ಲ ಎಂದು ಸಂಘಗಳು ತಮ್ಮ ಪತ್ರದಲ್ಲಿ ನೆನಪಿಸಿವೆ. ಈ ಹಿಂದೆ ಈ ರೀತಿ ಆಗಿರಲಿಲ್ಲ ಎಂದು ಅವು ಆಘಾತ ಮತ್ತು ಅಚ್ಚರಿ ವ್ಯಕ್ತಪಡಿಸಿವೆ. ಈ ಬೆಳವಣಿಗೆಗಳು ಜನರ ಮನಸ್ಸಿನಲ್ಲಿ ನಿಷ್ಪಕ್ಷಪಾತ ಚುನಾವಣೆಯ ಬಗ್ಗೆ ಆತಂಕ ಮೂಡಿಸಿವೆ.

ʼ2019ರ ಚುನಾವಣೆವರೆಗೂ ಪ್ರತಿ ಹಂತದ ಮತದಾನ ಮುಗಿದ ಬಳಿಕ ಪತ್ರಿಕಾಗೋಷ್ಠಿ ಆಯೋಜಿಸುವುದು ವಾಡಿಕೆಯಾಗಿತ್ತು. ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದಿಂದ ಮತದಾನದ ದಿನದಂದು ಏನಾಯಿತು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇದೆ. ಮತದಾನದ ನಂತರ ಅವರ ಅನುಮಾನಗಳನ್ನು ನಿವಾರಿಸಲು ಪತ್ರಿಕಾಗೋಷ್ಠಿ ನಡೆಸಲಾಗುತ್ತಿತ್ತು. ಇದರಿಂದ ಪತ್ರಿಕೆಗಳ ಓದುಗರಿಗೆ ಯಾವುದೇ ತಪ್ಪುಗಳಾಗುವ ಸಾಧ್ಯತೆ ಇಲ್ಲದೇ ಮಾಹಿತಿ ಸಿಗುತ್ತಿತ್ತು’ ಎಂದು ಪತ್ರಕರ್ತರ ಸಂಘಗಳು ಪತ್ರದಲ್ಲಿ ವಿವರಿಸಿವೆ.

ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸಿ ಎಷ್ಟು ಮತ ಚಲಾವಣೆಯಾಗಿದೆ, ಶೇಕಡವಾರು ಮತದಾನ ಮುಂತಾದ ಎಲ್ಲ ವಿವರ ನೀಡಬೇಕು ಎಂದು ಆಗ್ರಹಿಸಿದರು. ಜನರು ಚುನಾವಣಾ ವ್ಯವಸ್ಥೆಯಲ್ಲಿ ವಿಶ್ವಾಸ ಹೊಂದಲು ಇಂತಹ ಪಾರದರ್ಶಕತೆ ಅಗತ್ಯ ಎಂದು ಪತ್ರದ್ಲಲಿ ಒತ್ತಿ ಹೇಳಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು