ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರದ MSP ಪ್ರಸ್ತಾವನೆಗೆ ರೈತ ಸಂಘಗಳಿಂದ ತಿರಸ್ಕಾರ, ನಾಳೆಯಿಂದ ಮತ್ತೆ ಪ್ರತಿಭಟನೆ!

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಕೇಂದ್ರದ MSP ಪ್ರಸ್ತಾವನೆಗೆ ರೈತ ಸಂಘಗಳಿಂದ ತಿರಸ್ಕಾರ, ನಾಳೆಯಿಂದ ಮತ್ತೆ ಪ್ರತಿಭಟನೆ!

MSP, ಸಾಲ ಮನ್ನಾ ಸೇರಿದಂತೆ ನಾನಾ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಗೆ ಪಾದಯಾತ್ರೆ ನಡೆಸುವಂತೆ ಒತ್ತಾಯಿಸಿದ ರೈತ ಸಂಘಗಳ ಮುಖಂಡರೊಂದಿಗೆ ಕೇಂದ್ರ ಸರ್ಕಾರ ನಡೆಸಿದ ನಾಲ್ಕನೇ ಸುತ್ತಿನ ಮಾತುಕತೆಯೂ ವಿಫಲವಾಗಿದೆ.

ಕೇಂದ್ರ ನೀಡಿದ ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ. ತಮ್ಮ ಬೇಡಿಕೆಗಳನ್ನು ಒಪ್ಪದಿದ್ದಲ್ಲಿ ಫೆ.21ರಂದು ದೆಹಲಿಗೆ ಪಾದಯಾತ್ರೆ ನಡೆಸುವುದಾಗಿ ರೈತ ಮುಖಂಡರು ಘೋಷಿಸಿದ್ದಾರೆ. ಉಳಿದ ಬೇಡಿಕೆಗಳ ಬಗ್ಗೆಯೂ ಸರಕಾರದಿಂದ ಉತ್ತರ ಬೇಕು. ಪ್ರಸ್ತುತ 23 ಬೆಳೆಗಳಿಗೆ ಸರ್ಕಾರ ಎಂಎಸ್‌ಪಿ ಖಾತರಿ ನೀಡಬೇಕು ಮತ್ತು ಉಳಿದ ಬೆಳೆಗಳಿಗೂ ಅಧ್ಯಯನ ಮಾಡಿ ಖಾತರಿ ನೀಡಬೇಕು ಎಂದರು.

ಚಂಡೀಗಢದಲ್ಲಿ ರೈತ ಸಂಘಗಳು ಮತ್ತು ಕೇಂದ್ರ ಸಚಿವರ ನಡುವೆ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಇನ್ನೂ ನಾಲ್ಕು ಬೆಳೆಗಳಿಗೆ ಎಂಎಸ್‌ಪಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಭೆಯ ನಂತರ ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದರು. ಅಕ್ಕಿ, ಗೋಧಿ, ತೊಗರಿ, ಉದ್ದಿನಬೇಳೆ, ಜೋಳ ಮತ್ತು ಹತ್ತಿ ಬೆಳೆಗಳಿಗೂ ಬೆಂಬಲ ಬೆಲೆನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಇದಕ್ಕಾಗಿ ರೈತರು ಐದು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಲು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ (ನಾಫೆಡ್) ಮತ್ತು ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (ಸಿಸಿಐ) ಅನುಮತಿ ಪಡೆಯಬೇಕು. ಹೀಗಾಗಿ ಧರಣಿ ನಿಲ್ಲಿಸುವಂತೆ ರೈತ ಸಂಘಗಳ ಮುಖಂಡರಿಗೆ ಪಿಯೂಷ್ ಗೋಯಲ್ ಮನವಿ ಮಾಡಿದರು.

ಕೇಂದ್ರದ ಪ್ರಸ್ತಾವನೆ ಕುರಿತು ಎಲ್ಲ ಸಂಘಟನೆಗಳ ಜತೆ ಮಾತುಕತೆ ನಡೆಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ. ಕೇಂದ್ರದ ಪ್ರಸ್ತಾವನೆ ಉತ್ತಮವಾಗಿದ್ದು, ಎರಡು ದಿನಗಳ ಕಾಲವನ್ನು ಪರಿಗಣಿಸಿ ದಿಲ್ಲಿಗೆ ಹೋಗಬೇಕೋ ಅಥವಾ 21ರಂದು ಮನೆಗೆ ಹೋಗಬೇಕೋ ಎಂದು ನಿರ್ಧರಿಸಲಾಗುವುದು ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಹೇಳಿದರು. ಸಾಲ ಮನ್ನಾ ಕುರಿತು ಇನ್ನೂ ಚರ್ಚೆ ನಡೆಯುತ್ತಿದೆ. ದೆಹಲಿಗೆ ಹೋಗುವ ಕಾರ್ಯಕ್ರಮ ಈಗಲೂ ಹಾಗೆಯೇ ಇದೆ. ಫೆಬ್ರವರಿ 21ರವರೆಗೆ ಕಾಲಾವಕಾಶವಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು