ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಮಿತ್ ಶಾ ಸಮ್ಮುಖದಲ್ಲಿ ಆಗಸ್ಟ್ 10ರಂದು ಸಂಸತ್ತಿನಲ್ಲಿ ಎಫ್‌ಸಿಆರ್‌ಎ ಮಸೂದೆ ಮಂಡನೆ ಸಾಧ್ಯತೆ; ವಿಪಕ್ಷಗಳಿಂದ ವಿಪ್ ಜಾರಿ

PPeepal Media

Peepal Media ದೇಶ

• 1 ನಿಮಿಷದ ಓದು

ಅಮಿತ್ ಶಾ ಸಮ್ಮುಖದಲ್ಲಿ ಆಗಸ್ಟ್ 10ರಂದು ಸಂಸತ್ತಿನಲ್ಲಿ ಎಫ್‌ಸಿಆರ್‌ಎ ಮಸೂದೆ ಮಂಡನೆ ಸಾಧ್ಯತೆ; ವಿಪಕ್ಷಗಳಿಂದ ವಿಪ್ ಜಾರಿ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಗಸ್ಟ್ 10ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026’ (FCRA Bill) ಮಂಡನೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ತಮ್ಮ ಬಲ ಪ್ರದರ್ಶಿಸಲು ಮತ್ತು ಪ್ರತಿಭಟನೆಯನ್ನು ತೀವ್ರಗೊಳಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.

​ಶಾ ಅವರ ಆಗಮನವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೇಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ತಮ್ಮ ಎಲ್ಲಾ ಸಂಸದರಿಗೆ ಅಧಿವೇಶನಕ್ಕೆ ತಪ್ಪದೇ ಹಾಜರಾಗುವಂತೆ ತ್ರಿಲೈನ್ ವೀಪ್ (Whip) ಜಾರಿಗೊಳಿಸಿವೆ.

​ವಿಪಕ್ಷಗಳ ಕಾರ್ಯತಂತ್ರ:

​ಅಧಿವೇಶನ ಪ್ರಾರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಗೃಹ ಸಚಿವ ಅಮಿತ್ ಶಾ ಅವರು ಸದನಕ್ಕೆ ಆಗಮಿಸಿ ಪ್ರಚಲಿತ ವಿಷಯಗಳ ಕುರಿತು ಹೇಳಿಕೆ ನೀಡಬೇಕೆಂದು ಪಟ್ಟು ಹಿಡಿದಿವೆ. ಹೀಗಾಗಿ, ಗೃಹ ಸಚಿವಾಲಯಕ್ಕೆ ಸಂಬಂಧಿಸಿದ FCRA ಮಸೂದೆ ಚರ್ಚೆಗೆ ಬಂದಾಗ ಅಮಿತ್ ಶಾ ಸದನದಲ್ಲಿ ಹಾಜರಿರುತ್ತಾರೆ ಎಂಬ ನಿರೀಕ್ಷೆಯಿದ್ದು, ಆ ಸಮಯದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ತಂತ್ರ ರೂಪಿಸಿವೆ.

​ಕ್ರಿಶ್ಚಿಯನ್ ಸಂಸ್ಥೆಗಳ ಕಳವಳ ಮತ್ತು ಸರ್ಕಾರದ ಭರವಸೆ:

​ಈ ನಡುವೆ, ಎಫ್‌ಸಿಆರ್‌ಎ ಮಸೂದೆಯ ಕೆಲ ನಿಬಂಧನೆಗಳ ಕುರಿತು ಕ್ರಿಶ್ಚಿಯನ್ ಸಂಸ್ಥೆಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ತೀವ್ರ ಕಳವಳ ವ್ಯಕ್ತಪಡಿಸಿವೆ. ವಿದೇಶಿ ದೇಣಿಗೆ ನೋಂದಣಿ ರದ್ದಾದ ಸಂಸ್ಥೆಗಳ ಆಸ್ತಿಯನ್ನು ಹಿಂದಿನ ದಿನಾಂಕದಿಂದ ಜಾರಿಗೆ ಬರುವಂತೆ (Retrospective effect) ಸರ್ಕಾರಿ ಕಂಟ್ರೋಲ್‌ಗೆ ತೆಗೆದುಕೊಳ್ಳುವ ನಿಬಂಧನೆಗಳ ಬಗ್ಗೆ ಆಕ್ಷೇಪ ಕೇಳಿಬಂದಿದೆ.

​ಮಿಝೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಯಾವುದೇ ಕಾಯ್ದೆಯನ್ನು ‘ಹಿಂದಿನ ದಿನಾಂಕದಿಂದ ಜಾರಿಗೆ ಬರುವಂತೆ’ (Retrospective) ಅನ್ವಯಿಸುವುದಿಲ್ಲ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

​ಮಸೂದೆಯು ಆಗಸ್ಟ್ 10ರಿಂದ 12ರ ನಡುವೆ ಲೋಕಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದ್ದು, ಮುಂದಿನ ವಾರದ ಸಂಸತ್ ಕಲಾಪ ತೀವ್ರ ಕಾವು ಪಡೆದುಕೊಳ್ಳಲಿದೆ

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು