ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮನ ಕಲಕುವ ವಿಡಿಯೋ | ಉಕ್ಕಿ ಹರಿದ ಜಲಪಾತ; ಒಂದೇ ಕುಟುಂಬದ ಐದು ಮಂದಿ ಸಾವು

PPeepal Media

Peepal Media ದೇಶ

• 1 ನಿಮಿಷದ ಓದು

ಮನ ಕಲಕುವ ವಿಡಿಯೋ | ಉಕ್ಕಿ ಹರಿದ ಜಲಪಾತ; ಒಂದೇ ಕುಟುಂಬದ ಐದು ಮಂದಿ ಸಾವು

ಅಣೆಕಟ್ಟೆಯ ಬಳಿಯಿರುವ ಜಲಪಾತ ನೋಡಲೆಂದು ಬಂದಿದ್ದ ಕುಟುಂಬವೊಂದ ಐದು ಮಂದಿ ಇದ್ದಕ್ಕಿದ್ದಂತೆ ಉಕ್ಕಿ ಹರಿದ ಜಲಪಾತದ ಸೆಳವಿಗೆ ಸಿಕ್ಕು ಕೊಚ್ಚಿ ಹೋದ ಘಟನೆ ನೆರೆಯ ಮಹಾರಾಷ್ಟ್ರದಿಂದ ವರದಿಯಾಗಿದೆ.

ಭಾನುವಾರದಂದು ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದಲ್ಲಿರುವ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಮುಳುಗಿದ್ದು, 4-9 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಕಾಣೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಭಾನುವಾರ ಮಧ್ಯಾಹ್ನ ವಿಹಾರಕ್ಕೆಂದು ಬಂದಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕಾಣೆಯಾಗಿರುವವರ ಹುಡುಕಾಟ ಮುಂದುವರೆದಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಪಂಕಜ್ ದೇಶಮುಖ್ ತಿಳಿಸಿದ್ದಾರೆ.

ಕುಟುಂಬವು ಭೂಶಿ ಅಣೆಕಟ್ಟಿನಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತದ ನೀರಿನಲ್ಲಿ ಜಾರಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಜಲಪಾತದ ನೀರಿನಲ್ಲಿ ಕೊಚ್ಚಿ ಹೋದವರಲ್ಲಿ ಶಾಹಿಸ್ತಾ ಅನ್ಸಾರಿ(36), ಅಮಿಮಾ ಅನ್ಸಾರಿ(13) ಮತ್ತು ಉಮೇರಾ ಅನ್ಸಾರಿ (8) ಮೃತದೇಹಗಳು ಪತ್ತೆಯಾಗಿದ್ದು, ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸಯ್ಯದ್ (9) ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ವಿಹಾರಕ್ಕೆ ಬಂದ ಕುಟುಂಬಕ್ಕೆ ಅಣೆಕಟ್ಟೆ ಪ್ರದೇಶದಲ್ಲಿ ಭಾರೀ ಮಳೆಯಾಗಿ ಇದ್ದಕ್ಕಿದ್ದಂತೆ ನೀರಿನ ಹರಿವು ಹೆಚ್ಚಾಗಿತ್ತು ಆದರೆ ಇದು ಕುಟುಂಬದ ಗಮನಕ್ಕೆ ಬಂದಿರಲಿಲ್ಲ. ನಂತರ ಕುಟುಂಬವು ನೀರಿನ ಸೆಳತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಸೋಮವಾರವೂ ರಕ್ಷಣಾ ಕಾರ್ಯ ಮುಂದುವರೆಯಲಿದೆ ಎಂದು ಲೋನಾವಾಲಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು