ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಹದ ತೀವ್ರತೆ ಕಡಿಮೆ: ಖಡ್ಗಮೃಗಗಳ ರಕ್ಷಣೆಗೆ ಕ್ರಮ

P

Peepal Media • ದೇಶ

• 1 ನಿಮಿಷದ ಓದು

ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಹದ ತೀವ್ರತೆ ಕಡಿಮೆ: ಖಡ್ಗಮೃಗಗಳ ರಕ್ಷಣೆಗೆ ಕ್ರಮ

ಗುವಾಹಟಿ: ಅಸ್ಸಾಂನ ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಹದ ತೀವ್ರತೆ ಇಳಿಮುಖವಾಗಿದ್ದು, ಪರಿಸ್ಥಿತಿ ಈಗ ಸ್ಥಿರವಾಗಿದೆ ಎಂದು ಅರಣ್ಯಾಧಿಕಾರಿ ಅರುಣ್ ವಿಘ್ನೇಶ್ ತಿಳಿಸಿದ್ದಾರೆ. ಇತ್ತೀಚಿನ ಮಳೆಯಿಂದಾಗಿ ಉದ್ಯಾನದಲ್ಲಿ ನೀರು ಸಂಗ್ರಹವಾಗಿತ್ತು. ಕಾಜಿರಂಗಾ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದ್ದಾರೆ.

ಪ್ರವಾಹದ ತೀವ್ರತೆ ಕಡಿಮೆಯಾಗುತ್ತಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಅರಣ್ಯದಲ್ಲಿರುವ ಪ್ರಾಣಿಗಳು ಸದ್ಯಕ್ಕೆ ಸುರಕ್ಷಿತವಾಗಿವೆ ಎಂದು ವಿಘ್ನೇಶ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಪ್ರಾಣಿಗಳಿಗೆ ಯಾವುದೇ ಹಾನಿಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಋತುವಿನಲ್ಲಿ ಇದು ಮೊದಲ ಪ್ರವಾಹದ ಅಲೆಯಾಗಿದ್ದು, ಮುಂಗಾರು ದಿನಗಳಲ್ಲಿ ಎದುರಾಗಬಹುದಾದ ಪ್ರವಾಹಗಳನ್ನು ಎದುರಿಸಲು ಸಿದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕಾಜಿರಂಗಾ ರಾಷ್ಟ್ರೀಯ ಉದ್ಯಾನವು ಖಡ್ಗ ಮೃಗಗಳಿಗೆ ಹೆಸರಾಗಿದೆ. ಪ್ರತಿ ವರ್ಷ ಮುಂಗಾರು ಸಮಯದಲ್ಲಿ ಇಲ್ಲಿ ಪರಿಸ್ಥಿತಿ ಸಂಕೀರ್ಣವಾಗುತ್ತದೆ. 2024ರಲ್ಲಿ ಮಳೆ ಮತ್ತು ಪ್ರವಾಹದಿಂದ ಸುಮಾರು 174 ಪ್ರಾಣಿಗಳು ಮೃತಪಟ್ಟಿದ್ದವು, ಅದರಲ್ಲಿ 10 ಖಡ್ಗಮೃಗಗಳು ಸೇರಿವೆ. ಈ ಬಾರಿ ವಾರ್ಷಿಕ ಪ್ರವಾಹವನ್ನು ಎದುರಿಸಲು ವಿಶೇಷ ಏರ್ಪಾಡುಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 37ರ ಮಾರ್ಗದಲ್ಲಿ ಕಾನ್ವಾಯ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ವನ್ಯ ಪ್ರಾಣಿಗಳು ಸುರಕ್ಷಿತವಾಗಿ ಕರ್ಬಿ ಅಂಗ್‌ಲಾಂಗ್ ಬೆಟ್ಟಗಳಿಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಬಿಶ್ವನಾಥ್ ಜಿಲ್ಲೆಯಲ್ಲಿ ವಾಹನಗಳ ವೇಗವನ್ನು ನಿಯಂತ್ರಿಸಲಾಗುತ್ತಿದೆ. ಪ್ರವಾಹದ ಸಮಯದಲ್ಲಿ ಪ್ರಾಣಿಗಳು ರಸ್ತೆಗೆ ಬರುವ ಸಾಧ್ಯತೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 15ರ ಮಾರ್ಗದಲ್ಲಿ ಸಂಚಾರವನ್ನು ನಿಯಂತ್ರಿಸಲಾಗುತ್ತಿದೆ. ಕಾಜಿರಂಗಾ ಉದ್ಯಾನದಲ್ಲಿ ಪರಿಸ್ಥಿತಿ ಸದ್ಯಕ್ಕೆ ಅದುಪಿನಲ್ಲಿದ್ದರೂ, ಒರಾಂಗ್ ರಾಷ್ಟ್ರೀಯ ಉದ್ಯಾನದಲ್ಲಿ ಶೇಕಡಾ 40ರಷ್ಟು ಪ್ರದೇಶ ಪ್ರವಾಹದ ನೀರಿನಿಂದ ತುಂಬಿದೆ. ಧನಶ್ರೀ ಮತ್ತು ಪಂಚ್ ನಾಡಿ ನದಿಗಳಿಂದ ನೀರು ತೀವ್ರವಾಗಿ ಹರಿಯುತ್ತಿದ್ದು, 12 ಅರಣ್ಯ ಶಿಬಿರಗಳ ಮೇಲೆ ಪರಿಣಾಮ ಬೀರಿದೆ. ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version