ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ಸ್ಥಳದಲ್ಲೆ ನಾಲ್ವರ ಸಾವು

ರ

ರಮೇಶ್‌ ಹಾಸನ್‌ • ದೇಶ

• 1 ನಿಮಿಷದ ಓದು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ಸ್ಥಳದಲ್ಲೆ ನಾಲ್ವರ ಸಾವು

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಅಸುನೀಗಿರುವ ಘಟನೆ ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ.

ಅಪಘಾತ ಆಗಿದ್ದೇಗೆ?

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಿಂದ ಟಾಟಾ ಪಂಚ್‌ ಕಾರು ಎಕ್ಸಿಟ್ ಆಗುವಾಗ ಈ ಘಟನೆ ನಡೆದಿದೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಾರು ಚಾಲಕನಿಗೆ ಎಕ್ಸಿಟ್‌ ಕುರಿತು ಗೊಂದಲವಾಗಿದೆ. ಮೊದಲು ಎಕ್ಸಿಟ್‌ ಆಗಲು ಹೋಗಿ ಆ ನಂತರ ಎಕ್ಸ್‌ಪ್ರೆಸ್‌ ವೇಗೆ ಕಾರನ್ನು ತಿರುಗಿಸಿದ್ದಾನೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕೆಎಸ್ಆರ್ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಬೆಂಗಳೂರಿನವರಾದ ನಿವೃತ್ತ ಎಇ ಸತ್ಯಾನಂದ ರಾಜೇ ಅರಸ್, ನಿಶ್ಚಿತಾ, ಸುವೇಧಿನಿ ರಾಣಿ ಹಾಗೂ ಚಂದ್ರು ಎಂಬುವವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಟೋಲ್ ತಪ್ಪಿಸಲು ಕಾರು ಸರ್ವಿಸ್ ರಸ್ತೆಗೆ ಇಳಿಯುವ ಸಂದರ್ಭದಲ್ಲಿ ಹಿಂಬದಿಯಿಂದ ಕೆಎಸ್ಆರ್’ಟಿಸಿ ಬಸ್ಸು ಟಾಟಾ ಪಂಚ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಂಡ್ಯ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ರ

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version