“ಫಂಗಲ್” ಎಫೆಕ್ಟ್ ; ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಬಾರಿ ಮಳೆ ಮುನ್ಸೂಚನೆ
ಲಿಂಕ್ ನಕಲಿಸಲಾಗಿದೆ ✓
ಚೆನ್ನೈ ಕರಾವಳಿ ಭಾಗದಲ್ಲಿ ಎದ್ದಿರುವ ಭೀಕರ ಫಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಡಿಸೆಂಬರ್ 2 ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೆಯೇ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಡಿಸೆಂಬರ್ 3ರಂದು ಕೂಡ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
P
Peepal Media Desk
Peepal Media · ದೇಶ ವಿಭಾಗ
ಹಿಂದಿನ ಸುದ್ದಿ