ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‌ಉತ್ತರಪ್ರದೇಶ | ಬುಲ್ಡೋಜರ್‌ ಅಡಿ ನೆಲಸಮವಾದ ಗಾಂಧಿ ಪರಂಪರೆಯ ಪ್ರತೀಕ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

‌ಉತ್ತರಪ್ರದೇಶ | ಬುಲ್ಡೋಜರ್‌ ಅಡಿ ನೆಲಸಮವಾದ ಗಾಂಧಿ ಪರಂಪರೆಯ ಪ್ರತೀಕ

ಎಲ್ಲದಕ್ಕೂ ಬುಲ್ಡೋಜರ್‌ ಮೂಲಕವೇ ಪರಿಹಾರ ಹುಡುಕುವ ಉತ್ತರ ಪ್ರದೇಶದ ಆದಿತ್ಯನಾಥ್‌ ಸರ್ಕಾರ ಈಗ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪರಂಪರೆಯ ಪ್ರತೀಕವಾಗಿದ್ದ ಕಟ್ಟಡವೊಂದನ್ನು ಅದೇ ಬುಲ್ಡೋಜರ್‌ ಬಳಸಿ ಕೆಡವಿದ್ದಾರೆ. ಈ ಬಾರಿ ಎಂದಿನಂತೆ ರಾಜ್ಯ ಸರ್ಕಾರ ಬುಲ್ಡೋಜರ್‌ಗಳನ್ನು ಕಳುಹಿಸಿದ್ದರೂ ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಈ ಧ್ವಂಸ ಕಾರ್ಯವನ್ನು ಮಾಡಲಾಗಿದೆ. ವಾರಣಾಸಿಯಲ್ಲಿ ಗಾಂಧಿವಾದಿ ಸಮಾಜ ಸೇವಾ ಸಂಸ್ಥೆ ‘ಅಖಿಲ ಭಾರತ ಸರ್ವ ಸೇವಾ ಸಮಿತಿ’ಗೆ ಸೇರಿದ 12 ಕಟ್ಟಡಗಳನ್ನು ಕೇಂದ್ರ ಸರ್ಕಾರ ಶನಿವಾರ ಬುಲ್ಡೋಜರ್‌ ಬಳಸಿ ಕೆಡವಿ ಹಾಕಿದೆ.

ಇದಕ್ಕೆ ಅಡ್ಡ ಬಂದ ಗಾಂಧಿವಾದಿಗಳನ್ನು ವಶಕ್ಕೆ ಪಡೆದು ಸ್ವತಂತ್ರ ಹೋರಾಟಗಾರ ಜಯಪ್ರಕಾಶ ನಾರಾಯಣ ಅವರು ಸ್ಥಾಪಿಸಿದ್ದ ಗಾಂಧಿ ವಿದ್ಯಾ ಸಂಸ್ಥಾನ ಸೇರಿದಂತೆ ಹಲವು ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.

ಈ ಕಟ್ಟಡಗಳಿಗೆ ಸೇರಿದ ಜಾಗ ತಮಗೆ ಸೇರಿದ್ದು ಎಂದು ರೈಲ್ವೇ ಇಲಾಖೆ ಹೇಳುತ್ತಿದ್ದರೆ, ಗಾಂಧಿವಾದಿಗಳು ಅಂದಿನ ಕೇಂದ್ರ ಸರಕಾರದಿಂದ ಖರೀದಿಸಿದ್ದೇವೆ ಎಂದು ಹೇಳುತ್ತಲೇ ಬಂದಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಕೂಡ ರೈಲ್ವೆ ಪರವಾಗಿ ತೀರ್ಪು ನೀಡಿದ್ದವು ಮತ್ತು ಇದರೊಂದಿಗೆ ಆಡಳಿತವು ಪೊಲೀಸ್ ಭದ್ರತೆಯ ನಡುವೆ ಈ ಕಟ್ಟಡಗಳನ್ನು ಕೆಡವಿತು. ಏತನ್ಮಧ್ಯೆ, ಈ ಸಂಸ್ಥೆಯ ಕಟ್ಟಡಗಳನ್ನು ನೆಲಸಮಗೊಳಿಸಿದ್ದನ್ನು ಪ್ರಮುಖ ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ದೇಶದಲ್ಲಿ ಮಹಾತ್ಮರ ಹೆಸರನ್ನು ಅಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸರ್ವಸೇವಾ ಸಂಘದ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹತ್ತು ಗಾಂಧಿವಾದಿಗಳನ್ನು ಬಂಧಿಸಲಾಯಿತು. ಈ ನೆಲಸಮ ಕಾರ್ಯ ಇತಿಹಾಸದಲ್ಲಿ ನಾಚಿಕೆಗೇಡಿನ ಘಟನೆಯಾಗಿ ಉಳಿಯುತ್ತದೆ ಎಂದು ಸರ್ವ ಸೇವಾ ಸಂಘದ ಅಧ್ಯಕ್ಷ ಚಂದನ್ ಪಾಲ್ ಟೀಕಿಸಿದರು.

ಮತ್ತೊಬ್ಬ ನಾಯಕ ರಾಮ್ ಧೀರಜ್ ಬಂಧನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಉತ್ತರ ಪ್ರದೇಶ ಸರ್ಕಾರ ಮತ್ತು ಭಾರತೀಯ ರೈಲ್ವೆ ಗಾಂಧಿಯನ್ನು ಗುರಿಯಾಗಿಸಿಕೊಂಡು ಕೆಟ್ಟ ರಾಜಕೀಯದಲ್ಲಿ ತೊಡಗಿವೆ. ಆಡಳಿತಗಳು ರೈಲ್ವೇ ಜೊತೆಗಿನ ಸಂಘದ ಭೂ ವ್ಯವಹಾರವನ್ನು, ನಕಲಿ ದಾಖಲೆಗಳ ಸಹಾಯ ಪಡೆದು ಅಕ್ರಮವೆಂದು ನ್ಯಾಯಾಲಯದಲ್ಲಿ ಸಾಬೀತುಪಡಿಸಿದ್ದಾರೆ” ಎಂದು ಹೇಳಿದರು.

ಆದರೆ, ನಾವು ಕೇವಲ ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಿದ್ದೇವೆ ಎಂದು ಕೆಡವುವ ಕಾರ್ಯದಲ್ಲಿ ಭಾಗವಹಿಸಿದ್ದ ವಾರಣಾಸಿ ಆಯುಕ್ತ ಕೌಶಲ್ ರಾಜ್ ಶರ್ಮಾ ಹೇಳಿದ್ದಾರೆ.

ಮೇ ತಿಂಗಳಿನಲ್ಲಿ ಗಾಂಧಿ ವಿದ್ಯಾ ಸಂಸ್ಥಾನವನ್ನು ತೆರವು ಮಾಡುವಂತೆ ಸರ್ವಸೇವಾ ಸಂಘಕ್ಕೆ ಸರ್ಕಾರ ನೋಟಿಸ್ ನೀಡಿತ್ತು. ಇದನ್ನು ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ಸಂಸ್ಥೆಗೆ ಹಸ್ತಾಂತರಿಸುವುದಾಗಿ ಪ್ರಕಟಿಸಲಾಗಿದೆ. ಆದರೆ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ನಿಯಂತ್ರಣದಲ್ಲಿದೆ ಎಂದು ಗಾಂಧಿವಾದಿಗಳು ಆರೋಪಿಸಿದ್ದಾರೆ.

ವಿಷಯಗಳು: #news #peepal #peepalmedia #politics
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು