ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

AAP ಕಚೇರಿಗೆ ಜು.25ರೊಳಗೆ ಜಾಗ ನೀಡಿ: ಕೇಂದ್ರಕ್ಕೆ ಹೈಕೋರ್ಟ್‌ ಗಡುವು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

AAP ಕಚೇರಿಗೆ ಜು.25ರೊಳಗೆ ಜಾಗ ನೀಡಿ: ಕೇಂದ್ರಕ್ಕೆ ಹೈಕೋರ್ಟ್‌ ಗಡುವು

ನವದೆಹಲಿ: ಆಮ್‌ ಆದ್ಮಿ ಪಕ್ಷದ ಕಚೇರಿಗೆ ರಾಷ್ಟ್ರ ರಾಜಧಾನಿಯಲ್ಲಿ ಸ್ಥಳ ಮಂಜೂರು ಮಾಡುವ ವಿಷಯದಲ್ಲಿ ಕೇಂದ್ರ ಸರ್ಕಾರವು ಜುಲೈ 25ರೊಳಗೆ ತನ್ನ ನಿರ್ಧಾರ ಪ್ರಕಟಿಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.

ಎಎಪಿ ಪಕ್ಷವು ಸದ್ಯ ರೋಸ್ ಅವೆನ್ಯೂನಲ್ಲಿ ತನ್ನ ಕಚೇರಿಯನ್ನು ಹೊಂದಿದೆ. ಈ ಜಾಗದಲ್ಲಿ ದೆಹಲಿ ಹೈಕೋರ್ಟ್‌ ವತಿಯಿಂದ ನ್ಯಾಯಾಂಗ ಇಲಾಖೆಯ ಕಟ್ಟಡಗಳ ನಿರ್ಮಾಣ ನಡೆಯುವುದರಿಂದ ಈ ಸ್ಥಳವನ್ನು ಆ. 10ರೊಳಗೆ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದೇ ವಿಷಯವಾಗಿ ಜೂನ್ 5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೇಂದ್ರದ ಪ್ರತಿಕ್ರಿಯೆಗೆ ಆರು ವಾರಗಳ ಗಡುವು ನೀಡಿತ್ತು. ಆದರೆ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯ ಪರ ವಕೀಲರು ಇನ್ನೂ ನಾಲ್ಕು ವಾರಗಳ ಕಾಲಾವಕಾಶ ಕೋರಿದರು. ಸಂಸದರಿಗೆ ವಸತಿ ಸೌಕರ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿರುವುದರಿಂದ, ಹೆಚ್ಚಿನ ಸಮಯ ಬೇಕು ಎಂದು ಕೇಳಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಿದ ಎಎಪಿ ಪರ ಹಿರಿಯ ವಕೀಲ, ‘ಪಕ್ಷ ಸದ್ಯ ಇರುವ ಕಚೇರಿಯನ್ನು ತೆರವುಗೊಳಿಸಲು ನ್ಯಾಯಾಲಯ ಕಾಲಾವಕಾಶ ನಿಗದಿಪಡಿಸಿದೆ. ಆದರೆ ಅದಕ್ಕೆ ಯಾವುದೇ ಪರಿಹಾರೋಪಾಯವನ್ನು ನೀಡಿಲ್ಲ. ದೆಹಲಿ ಹೈಕೋರ್ಟ್‌ನ ನಿರ್ದೇಶನಕ್ಕೆ ಕೇಂದ್ರ ಸರ್ಕಾರವು ಯಾವುದೇ ರೀತಿಯ ಪ್ರತಿಕ್ರಿಯೆ ಅಥವಾ ಸ್ಥಳ ಹುಡುಕಲು ಮಾರ್ಗೋಪಾಯ ಕಂಡುಕೊಂಡಿಲ್ಲ’ ಎಂದರು.

‘ಹಿಂದಿನ ಆದೇಶದಲ್ಲಿ ನೀಡಿದ ಗಡುವು ಬುಧವಾರ ಕೊನೆಗೊಳ್ಳಲಿದೆ. ಅಧಿಕಾರಿಗಳಿಗೆ ಜಾಗ ಮಂಜೂರು ಮಾಡಲು ತಡೆಯುತ್ತಿರುವ ಶಕ್ತಿಯಾದರೂ ಯಾವುದು ಎಂದು ಎಎಪಿ ಪರ ವಕೀಲರು ಪ್ರಶ್ನಿಸಿದರು.

ವಾದ ಆಲಿಸಿದ ನ್ಯಾ. ಸಂಜೀವ್ ನರುಲಾ ಮಾತನಾಡಿ, ‘ಪಕ್ಷಕ್ಕೆ ಜಾಗ ಮಂಜೂರು ಮಾಡಲು ವಸತಿ ಇಲಾಖೆಯು ಸದ್ಯ ಕೇಳಿರುವ ನಾಲ್ಕು ವಾರಗಳಿಗಿಂತ ಹೆಚ್ಚಿನ ಕಾಲಾವಕಾಶವನ್ನು ನೀಡಲು ಸಾಧ್ಯವಿಲ್ಲ. ಅಷ್ಟರೊಳಗೆ ಜಾಗ ಮಂಜೂರು ಮಾಡಬೇಕು’ ಎಂದು ನಿರ್ದೇಶಿಸಿದರು.

‘ಒಂದು ರಾಷ್ಟ್ರೀಯ ಪಕ್ಷವು ತನ್ನ ಕಾರ್ಯಾಚರಣೆಗೆ ಅಗತ್ಯವಿರುವ ಜಾಗವನ್ನು ದೆಹಲಿಯಲ್ಲಿ ಪಡೆಯಲು ಅರ್ಹ. ಯಾವುದೇ ಒತ್ತಡ ಅಥವಾ ಜಾಗ ಇಲ್ಲ ಎನ್ನುವುದು ತಿರಸ್ಕರಿಸಲು ಕಾರಣವಲ್ಲ. ಒಂದೊಮ್ಮೆ ಎಎಪಿಗೆ ಜಾಗ ಮಂಜೂರು ಮಾಡಲು ಕೇಂದ್ರ ತಿರಸ್ಕರಿಸಿದರೆ, ಎಎಪಿ ಪಕ್ಷವು ಕಾನೂನಿನ್ವಯ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅರ್ಹ’ ಎಂದು ನ್ಯಾಯಾಲಯ ಈ ಹಿಂದಿನ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು