ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮಾರ್ಚ್ 8ಕ್ಕೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್’ ; ಕಾನೂನು ವ್ಯಾಜ್ಯ ಶೀಘ್ರ ಇತ್ಯರ್ಥಕ್ಕೆ ಸುವರ್ಣಾವಕಾಶ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮಾರ್ಚ್ 8ಕ್ಕೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ ಅದಾಲತ್’ ; ಕಾನೂನು ವ್ಯಾಜ್ಯ ಶೀಘ್ರ ಇತ್ಯರ್ಥಕ್ಕೆ ಸುವರ್ಣಾವಕಾಶ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್.8ರಂದು ರಾಜ್ಯಾಧ್ಯಂತ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ ಎಂದು ಕಾನೂನು ಇಲಾಖೆ ತಿಳಿಸಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ

ಇನ್ನು ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಸೇರಿವೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು