ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಿಎಸ್‌ಟಿ: ಅಧಿಕಾರಿಗಳ ಬಂಧನ ಅಧಿಕಾರ ರದ್ದತಿಗೆ ಚಿಂತನೆ; ಕ್ರಿಮಿನಲ್ ಮೊಕದ್ದಮೆಗೆ ಮಿತಿ ₹5 ಕೋಟಿಗೆ ಏರಿಕೆ ಸಾಧ್ಯತೆ

PPeepal Media

Peepal Media • ದೇಶ

• 1 ನಿಮಿಷದ ಓದು

ಜಿಎಸ್‌ಟಿ: ಅಧಿಕಾರಿಗಳ ಬಂಧನ ಅಧಿಕಾರ ರದ್ದತಿಗೆ ಚಿಂತನೆ; ಕ್ರಿಮಿನಲ್ ಮೊಕದ್ದಮೆಗೆ ಮಿತಿ ₹5 ಕೋಟಿಗೆ ಏರಿಕೆ ಸಾಧ್ಯತೆ

ದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ವ್ಯಾಪಾರಸ್ನೇಹಿಯಾಗಿ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಡಲು ಮುಂದಾಗಿದೆ. ಅಕ್ಟೋಬರ್ 7 ರಂದು ನವದೆಹಲಿಯಲ್ಲಿ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯಲಿದ್ದು, ಈ ವೇಳೆ ಜಿಎಸ್‌ಟಿ ಜಾರಿ ನಿಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವ ಸಾಧ್ಯತೆಯಿದೆ.

ಹೊಸ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳ ಅಂಗವಾಗಿ, ತೆರಿಗೆ ವಂಚನೆ ಪ್ರಕರಣಗಳಲ್ಲಿ ಅಧಿಕಾರಿಗಳಿಗಿರುವ ನೇರ ಬಂಧನದ ಅಧಿಕಾರವನ್ನು ರದ್ದುಗೊಳಿಸಲು ಕೇಂದ್ರ ಹಣಕಾಸು ಸಚಿವಾಲಯ ಗಂಭೀರ ಚಿಂತನೆ ನಡೆಸಿದೆ. ತೆರಿಗೆ ವಸೂಲಿ ವ್ಯವಸ್ಥೆಯನ್ನು ಜನಸ್ನೇಹಿಗೊಳಿಸುವುದು ಮತ್ತು ವ್ಯಾಪಾರಿಗಳಿಗೆ ಕಿರುಕುಳ ತಪ್ಪಿಸುವುದು ಈ ಸುಧಾರಣೆಯ ಮುಖ್ಯ ಉದ್ದೇಶವಾಗಿದೆ.

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಸಿಜಿಎಸ್‌ಟಿ ಕಾಯ್ದೆಯ ಸೆಕ್ಷನ್ 69 ರ ಅಡಿಯಲ್ಲಿ ಜಿಎಸ್‌ಟಿ ಅಧಿಕಾರಿಗಳಿಗೆ ಸದ್ಯಕ್ಕಿರುವ ನೇರ ಬಂಧನದ ಅಧಿಕಾರವನ್ನು ಹಿಂಪಡೆಯಲು ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು. ಇನ್ನು ಮುಂದೆ ಯಾವುದೇ ಆರೋಪಿಯನ್ನು ಬಂಧಿಸಬೇಕಾದರೆ ಜಿಎಸ್‌ಟಿ ಅಧಿಕಾರಿಗಳು ನೇರವಾಗಿ ಕ್ರಮ ಕೈಗೊಳ್ಳುವಂತಿಲ್ಲ; ಬದಲಾಗಿ ನ್ಯಾಯಾಲಯದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಾಗುತ್ತದೆ.

ಇದರೊಂದಿಗೆ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮೊಕದ್ದಮೆ ಮತ್ತು ವಿಚಾರಣೆ ನಡೆಸಲು ಇರುವ ಕನಿಷ್ಠ ತೆರಿಗೆ ಮಿತಿಯನ್ನು ಹಾಲಿ ₹1 ಕೋಟಿಯಿಂದ ₹5 ಕೋಟಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ತೆರಿಗೆದಾರರ ಮೇಲೆ ಏಕಾಏಕಿ ಕ್ರಿಮಿನಲ್ ಕ್ರಮ ಕೈಗೊಳ್ಳುವುದು ತಪ್ಪಲಿದ್ದು, ಅವರಿಗೆ ದೊಡ್ಡ ಮಟ್ಟದ ಕಾನೂನು ರಕ್ಷಣೆ ದೊರೆಯಲಿದೆ.

ಅಧಿಕಾರಿಗಳ ಬಂಧನ ಅಧಿಕಾರವನ್ನು ಹಿಂಪಡೆದರೂ, ಬಾಕಿ ತೆರಿಗೆಯನ್ನು ಶೀಘ್ರವಾಗಿ ವಸೂಲಿ ಮಾಡುವ ಮತ್ತು ತಪ್ಪಿತಸ್ಥರಿಗೆ ದಂಡ ವಿಧಿಸುವ ಅಧಿಕಾರಿಗಳ ಅಧಿಕಾರಗಳು ಯಥಾವತ್ತಾಗಿ ಮುಂದುವರಿಯಲಿವೆ. ಇನ್ನು ಮುಂದೆ ತೆರಿಗೆ ವಂಚನೆಗಳನ್ನು ಕೇವಲ ದಾಖಲೆಗಳು ಹಾಗೂ ಡೇಟಾ ಅನಾಲಿಟಿಕ್ಸ್ ಆಧಾರದ ಮೇಲೆ ಕಟ್ಟುನಿಟ್ಟಾಗಿ ಪತ್ತೆಹಚ್ಚಿ ದಂಡ ವಸೂಲಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಅಕ್ಟೋಬರ್ 7 ರ ಸಭೆಯಲ್ಲಿ ಈ ಮಹತ್ವದ ಪ್ರಸ್ತಾವನೆಗಳಿಗೆ ಒಪ್ಪಿಗೆ ದೊರೆತರೆ, ಜಿಎಸ್‌ಟಿ ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿ ತರಲಾಗುವುದು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು