ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಗುಜರಾತ್: ಸದನದಲ್ಲಿ ಪ್ರಶ್ನಿಸಿದ 10 ಮಂದಿ ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿದ ಸ್ಪೀಕರ್

PPeepal Media Desk

Peepal Media Desk ದೇಶ

• 2 ನಿಮಿಷದ ಓದು

ಗುಜರಾತ್: ಸದನದಲ್ಲಿ ಪ್ರಶ್ನಿಸಿದ 10 ಮಂದಿ ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿದ ಸ್ಪೀಕರ್

ಗಾಂಧಿನಗರ: ಸದನದಲ್ಲಿ ಘೋಷಣೆ ಕೂಗಿದ ಮತ್ತು ಭ್ರಷ್ಟಾಚಾರದ ಬಗ್ಗೆ ಪ್ರಶ್ನಿಸಿದ 10 ಮಂದಿ ಶಾಸಕರನ್ನು ಒಂದು ದಿನದ ಮಟ್ಟಿಗೆ ಗುಜರಾತ್ ವಿಧಾನಸಭೆಯಿಂದ ಅಮಾನತುಗೊಳಿಸಿದ ಪ್ರಸಂಗ ನಡೆದಿದೆ.


ಬಜೆಟ್ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ತುಷಾರ್ ಚೌಧರಿ, ಛೋಟಾ ಉದೇಪುರ್ ಜಿಲ್ಲೆಯಲ್ಲಿ ನಕಲಿ ಸರಕಾರಿ ಕಚೇರಿ ತೆರೆದು, ಆದಿವಾಸಿ ಪ್ರದೇಶಗಳಲ್ಲಿನ ನೀರಾವರಿ ಯೋಜನೆಗಳಿಗಾಗಿ ಮೀಸಲಿಟ್ಟಿದ್ದ ನಿಧಿಯನ್ನು ಲಪಟಾಯಿಸಿರುವ ಪ್ರಕರಣದ ಕುರಿತು ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.


ಗುಜರಾತ್ ವಿಧಾನಸಭೆಯಲ್ಲಿ ಒಟ್ಟು 15 ಮಂದಿ ಕಾಂಗ್ರೆಸ್ ಶಾಸಕರ ಬಲವಿದೆ. ಆದರೆ, ಸದನದಲ್ಲಿ ಗದ್ದಲ ನಡೆದಾಗ ಐದು ಮಂದಿ ಕಾಂಗ್ರೆಸ್ ಶಾಸಕರು ಗೈರಾಗಿದ್ದರು.

ಈ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಆದಿವಾಸಿ ಅಭಿವೃದ್ಧಿ ಸಚಿವ ಕುಬೇರ್ ದಿಂದೋರ್, ಛೋಟಾ ಉದೇಪುರ್ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಅಂತಹ ಯಾವುದೇ ನಕಲಿ ಕಚೇರಿ ಪತ್ತೆಯಾಗಿಲ್ಲ. ಹಾಗಾಗಿ ಕ್ರಮ ಕೈಗೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.


ಸಚಿವರ ಉತ್ತರದಿಂದ ಕುಪಿತರಾದ ಚೌಧರಿ, ಕಳೆದ ಒಂದು ವರ್ಷದಲ್ಲಿ ಆದಿವಾಸಿಗಳ ಪ್ರಾಬಲ್ಯ ಹೊಂದಿರುವ ಛೋಟಾ ಉದೇಪುರ್ ಜಿಲ್ಲೆಯಲ್ಲಿ ಅಂತಹ ಐದು ನಕಲಿ ಕಚೇರಿಗಳನ್ನು ಪತ್ತೆ ಹಚ್ಚಲಾಗಿದೆ ಆರೋಪಿಗಳನ್ನೂ ಸೆರೆ ಹಿಡಿಯಲಾಗಿದೆ ಎಂದು ವಾದ ಮಂಡಿಸಿದ್ದರು.


ಪ್ರಕರಣದ ಹಿನ್ನೆಲೆ
ಛೋಟಾ ಉದೇಪುರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಕಾರ್ಯಪಾಲಕ ಎಂಜಿನಿಯರ್ ಕಚೇರಿಯನ್ನು ಸ್ಥಾಪಿಸಿ, ರೂ. 4.16 ಕೋಟಿ ಮೊತ್ತದ ಸರಕಾರಿ ಮಂಜೂರಾತಿಗಳನ್ನು ಪಡೆದ ಆರೋಪದಲ್ಲಿ ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಬಂಧನಕ್ಕೀಡಾಗಿದ್ದ ಇಬ್ಬರು ವ್ಯಕ್ತಿಗಳ ಕುರಿತು ಚೌಧರಿ ಪ್ರಸ್ತಾಪಿಸಿದರು.


ನಂತರ, ಆರೋಪಿಗಳಿಗೆ ನೆರವು ನೀಡಿ, ‘ಆದಿವಾಸಿ ಪ್ರದೇಶ ಉಪ ಯೋಜನೆ’ ಅಡಿಯಲ್ಲಿ ಹಗರಣ ನಡೆಸಿ, ರೂ. 18.59 ಕೋಟಿ ಸರಕಾರಿ ಮಂಜೂರಾತಿ ಪಡೆಯಲು ಅವಕಾಶ ಮಾಡಿಕೊಟ್ಟಿದ್ದ ಆರೋಪದಲ್ಲಿ ಕಳೆದ ವರ್ಷ ಸ್ವಯಂ ನಿವೃತ್ತಿ ಪಡೆದಿರುವ ಮಾಜಿ ಐಎಎಸ್ ಅಧಿಕಾರಿ ಬಿ.ಡಿ.ನಿನಮ ಅವರನ್ನು ಕಳೆದ ವರ್ಷದ ಫೆಬ್ರವರಿಯಲ್ಲಿ ದಾಹೋಡ್ ಜಿಲ್ಲೆಯ ಪೊಲೀಸರು ಬಂಧಿಸಿದ್ದರು.
ಆರೋಪಿಗಳಿಗೆ ಎಷ್ಟು ನಿಧಿಯನ್ನು ಒದಗಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕ ಅಮೃತ್‌ಜಿ ಠಾಕೋರ್ ಪ್ರಶ್ನಿಸಿದಾಗ, ಆರೋಪಿಗಳು ನೈಜ ಅಧಿಕಾರಿಗಳಂತೆ ಸೋಗು ಹಾಕಿದ್ದರಿಂದ, ಅವರಿಗೆ ರೂ. 21 ಕೋಟಿ ವಿಲೇವಾರಿ ಮಾಡಲಾಗಿದೆ ಎಂದು ಸಚಿವ ದಿಂದೋರ್ ಉತ್ತರಿಸಿದರು.


“ಈ ಹಗರಣವನ್ನು ರಾಜ್ಯ ಸರಕಾರವೇ ಬಯಲಿಗೆಳೆದಿದ್ದು, ಈ ವಿಷಯ ಮಾಧ್ಯಮಗಳಲ್ಲೂ ಪ್ರಕಟವಾಗಿದೆ. ನಾವು ಈ ಸಂಬಂಧ ಸ್ವಯಂಪ್ರೇರಿತ ಕ್ರಮ ಕೈಗೊಂಡಿದ್ದೇವೆ. ನಾವು ಆರೋಪಿಗಳ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಂಡಿದ್ದು, ಈವರೆಗೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಸಚಿವ ದಿಂದೋರ್ ಸದನಕ್ಕೆ ಮಾಹಿತಿ ನೀಡಿದರು.


ಆದರೆ, ಲಿಖಿತ ಉತ್ತರಕ್ಕೂ, ಸಚಿವರ ಹೇಳಿಕೆಗೂ ವ್ಯತ್ಯಾಸವಿದ್ದುದರಿಂದ ಕಾಂಗ್ರೆಸ್ ಶಾಸಕರು ಸದನದಲ್ಲಿ ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಸದನದಲ್ಲಿ ಘೋಷಣೆಗಳನ್ನು ಕೂಗುತ್ತಿದ್ದ ಕಾಂಗ್ರೆಸ್ ಶಾಸಕರಿಗೆ ಗದ್ದಲ ಸ್ಥಗಿತಗೊಳಿಸುವಂತೆ ವಿಧಾನಸಭಾ ಸ್ಪೀಕರ್ ಶಂಕರ್ ಚೌಧರಿ ಪದೇ ಪದೇ ಮನವಿ ಮಾಡಿದರೂ, ಕಾಂಗ್ರೆಸ್ ಶಾಸಕರು ಘೋಷಣೆ ಕೂಗುವುದನ್ನು ನಿಲ್ಲಿಸಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಸ್ಪೀಕರ್ ಶಂಕರ್ ಚೌಧರಿ ಸದನದಲ್ಲಿ ಹಾಜರಿದ್ದ ಎಲ್ಲ ಕಾಂಗ್ರೆಸ್ ಶಾಸಕರನ್ನು ಒಂದು ದಿನದ ಮಟ್ಟಿಗೆ ಸದನದಿಂದ ಅಮಾನತುಗೊಳಿಸಿದ್ದಾರೆ. ನಾಳೆ ಕೂಡಾ ಬಜೆಟ್ ಅಧಿವೇಶನ ಮುಂದುವರಿಯಲಿದ್ದು, ಈ ಅಮಾನತು ನಾಳೆಗೂ ಅನ್ವಯವಾಗುತ್ತದೆ ಎಂದು ಸ್ಪೀಕರ್ ಶಂಕರ್ ಚೌಧರಿ ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು