ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

P

Peepal Media • ದೇಶ

• 1 ನಿಮಿಷದ ಓದು

ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದ ಸುಪ್ರೀಂ ಕೋರ್ಟ್: ಎಚ್.ಡಿ. ರೇವಣ್ಣನವರಿಗೆ ನೋಟಿಸ್

ದೆಹಲಿ: ಜೆಡಿಎಸ್ ಮುಖಂಡ ಹಾಗೂ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಮಾನ ಕೈಗೊಂಡಿದೆ. ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯ ಶೀಲಭಂಗಕ್ಕೆ ಯತ್ನಿಸಿದ (ಐಪಿಸಿ ಸೆಕ್ಷನ್ 354) ಆರೋಪವನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ಎಚ್.ಡಿ. ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಮಾಜಿ ಗೃಹಸೇವಕಿಯೊಬ್ಬರು ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ಇಬ್ಬರ ಮೇಲೂ ಬೇರೆ ಬೇರೆ ರೀತಿಯ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿರುವ ಕೋರ್ಟ್, ಆಕ್ಷೇಪಣೆ ಸಲ್ಲಿಸಲು ರೇವಣ್ಣ ಅವರ ಪರ ವಕೀಲರಿಗೆ ನಿರ್ದೇಶನ ನೀಡಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್, ರೇವಣ್ಣ ವಿರುದ್ಧದ ಐಪಿಸಿ ಸೆಕ್ಷನ್ 354 (ಮಹಿಳೆಯ ಶೀಲಭಂಗಕ್ಕೆ ಯತ್ನ) ಅಡಿಯಲ್ಲಿನ ಆರೋಪವನ್ನು ರದ್ದುಗೊಳಿಸಿತ್ತು. ಆದರೆ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ) ಅಡಿಯಲ್ಲಿದ್ದ ಆರೋಪವನ್ನು ಎತ್ತಿಹಿಡಿದಿತ್ತಲ್ಲದೆ, ದೂರು ದಾಖಲಿಸಲು ಆಗಿರುವ ವಿಳಂಬವನ್ನು ಮನ್ನಿಸಬಹುದೇ ಎಂಬುದನ್ನು ಪರಿಶೀಲಿಸಲು ಕೆಳ ನ್ಯಾಯಾಲಯಕ್ಕೆ ಸೂಚಿಸಿತ್ತು. ಹೈಕೋರ್ಟ್‌ನ ಈ ಆದೇಶದ ವಿರುದ್ಧ ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರಿದಿದೆ.

ವಿಚಾರಣೆ ವೇಳೆ ಹೈಕೋರ್ಟ್ ಮತ್ತು ಕೆಳ ನ್ಯಾಯಾಲಯಗಳು ಈ ಪ್ರಕರಣದ ಆರೋಪಗಳನ್ನು ನಿರ್ವಹಿಸಿದ ರೀತಿಗೆ ಸುಪ್ರೀಂ ಕೋರ್ಟ್ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಹೈಕೋರ್ಟ್ ಈ ರೀತಿಯಾಗಿ ಆರೋಪಗಳನ್ನು ಹೇಗೆ ಬದಲಾಯಿಸಲು ಸಾಧ್ಯ ಎಂದು ಪ್ರಶ್ನಿಸಿದ ನ್ಯಾಯಾಲಯ, ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಳಂಬ ಧೋರಣೆ ಅನುಸರಿಸಿದ್ದಕ್ಕೆ ರಾಜ್ಯ ಸರ್ಕಾರಕ್ಕೂ ಶಿಸ್ತು ಪಾಲಿಸುವಂತೆ ಸೂಚಿಸಿತು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪುತ್ರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಣ್ಣನಾಗಿರುವ ಎಚ್.ಡಿ. ರೇವಣ್ಣ ಅವರ ಮೇಲಿನ ಈ ಲೈಂಗಿಕ ಕಿರುಕುಳದ ಆರೋಪಗಳು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬೆನ್ನಲ್ಲೇ ಬೆಳಕಿಗೆ ಬಂದಿದ್ದವು. 2024 ರ ಲೋಕಸಭಾ ಚುನಾವಣೆಗೂ ಮುನ್ನ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್‌ಗಳು ಹರಿದಾಡಿದ ನಂತರ ಈ ಇಡೀ ಹಗರಣ ಬಯಲಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳ ಪೈಕಿ ಈಗಾಗಲೇ ಒಂದರಲ್ಲಿ ಶಿಕ್ಷೆಯಾಗಿದ್ದು, ಅವರು ಸದ್ಯ ಜೈಲಿನಲ್ಲಿದ್ದಾರೆ. ಅವರ ವಿರುದ್ಧ ದೂರು ನೀಡಿದ್ದ ಮಹಿಳೆಯೇ ರೇವಣ್ಣ ವಿರುದ್ಧವೂ ಲೈಂಗಿಕ ಕಿರುಕುಳದ ದೂರು ನೀಡಿದ್ದರು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version