ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂಗಾರು ಪೂರ್ವ ಸುರಿದ ಭಾರಿ ಮಳೆ; 9 ಮಂದಿ ಸಾವು, ಹಲವು ಕಡೆ ಅವಾಂತರ ಸೃಷ್ಟಿ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಮುಂಗಾರು ಪೂರ್ವ ಸುರಿದ ಭಾರಿ ಮಳೆ; 9 ಮಂದಿ ಸಾವು, ಹಲವು ಕಡೆ ಅವಾಂತರ ಸೃಷ್ಟಿ

ಮಂಗಳವಾರ ರಾಜ್ಯದಾದ್ಯಂತ ಸುರಿದ ಬಾರಿ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ. ಒಂದು ಕಡೆ ಬಿಸಿಲಿನ ಝಳದಿಂದ ಭೂಮಿ ತಂಪಾಗಿದೆ ಎನ್ನುವಾಗಲೇ ಹಲವು ಜಿಲ್ಲೆಗಳಲ್ಲಿ ಸಿಡಿಲು, ಮಿಂಚಿನ ಆರ್ಭಟಕ್ಕೆ ಒಂದೇ ದಿನಕ್ಕೆ 9 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಸುರಿದ ಬಾರಿ ಮಳೆ ಒಂದಷ್ಟು ಕಟಾವಿಗೆ ಬಂದ ಬೆಳೆ ನಾಷಪಡಿಸಿದ್ದಲ್ಲದೆ, ಸಿಡಿಲು ಮಿಂಚಿನ ಹೊಡೆತಕ್ಕೆ ಸಾವು ನೋವಿಗೂ ಕಾರಣವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು, ಬಳ್ಳಾರಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಇನ್ನು ಚಿಕ್ಕಮಗಳೂರು-1, ವಿಜಯಪುರದಲ್ಲಿ ಓರ್ವ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹಾಗೇ ಗದಗ ಜಿಲ್ಲೆಯಲ್ಲಿ ಮಳೆ ನೀರಿಗೆ ಬೈಕ್ ಸವಾರ ಕೊಚ್ಚಿಕೊಂಡು ಹೋದರೆ, ಗೋಕಾಕ್​ನಲ್ಲಿ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾನೆ.

ಹಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ಹಾಗೇ ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಬೆಳೆ ನಾಶವಾಗಿದೆ. ಹುಬ್ಬಳ್ಳಿಯ ಅನೇಕ ಕಡೆಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನೀರು ಹೊರಹಾಕಲು ನಿವಾಸಿಗಳು ಪರದಾಡುವಂತಾಗಿದೆ. ಗೋಕಾಕನಲ್ಲಿ ಮಟನ್ ಮಾರ್ಕೆಟ್​ ಒಳಗೆ ಮಳೆಯ ನೀರು ನುಗ್ಗಿದೆ. ದ್ವಿಚಕ್ರ ವಾಹನ ಹಾಗೂ ಕಾರು ನೀರಲ್ಲಿ ಮುಳುಗಡೆಯಾಗಿವೆ. ನಿರಂತರ ಮಳೆಗೆ ಗೋಕಾಕ್ ನಗರದ ಜನರು ಪರದಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾಗಿದೆ. ಎರಡೂ ಮನೆಯ ಕುಟುಂಬದವರು ಅದೃಷ್ಟವಶಾತ್​ ಪಾರಾಗಿದ್ದಾರೆ. ಮೀಟರ್ ಬೋರ್ಡ್‌, ಮನೆಯ ಹೆಂಚು, ವಿದ್ಯುತ್​ ದೀಪಗಳು, ಯಂತ್ರೋಪಕರಣಗಳಿಗೆ ಭಾಗಶಃ ಹಾನಿಯಾಗಿದೆ. ಮನೆಯ ಎದುರಿನ ತೆಂಗಿನ ಮರ, ಮನೆಯ ಗೋಡೆ ಸಿಡಿಲು ಬಡಿದು ಹಾನಿಯಾಗಿದೆ.

ಬೆಂಗಳೂರಿನ ಹಲವು ಕಡೆಗಳಲ್ಲಿ ಸುರಿದ ಬಾರಿ ಮಳೆ ಅವಾಂತರ ಸೃಷ್ಟಿಸಿದೆ. ರಾಜಧಾನಿಯ ದಕ್ಷಿಣ, ಬೊಮ್ಮನಹಳ್ಳಿ ವಲಯದಲ್ಲಿ ಹೆಚ್ಚು ಮರಗಳು ಬಿದ್ದ ಬಗ್ಗೆ ವರದಿಯಾಗಿದೆ. ಬಿಬಿಎಂಪಿ 8 ವಲಯದಲ್ಲಿ 27ಕ್ಕೂ ಹೆಚ್ಚು ಮರ ಹಾಗೂ 94 ಕೊಂಬೆಗಳು ಧರೆಗುರುಳಿರುವೆ. 

ಇದಲ್ಲದೆ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್ ಸುತ್ತಮುತ್ತ ಭಾಗ ಬಾರಿ ಮಳೆಯಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು