ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ
High Court Of Karnataka.Bangalore,INDIA

ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು.

5, 6, 8, 9ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ. ತಡೆಯಾಜ್ಞೆಯಿಂದ ಸೋಮವಾರ ನಡೆಯುವ ಪರೀಕ್ಷೆ ಅಡಕತ್ತರಿಗೆ ಸಿಲುಕಿದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್ ಅವರು ಮೇಲ್ಮನವಿಯಲ್ಲಿ ಮನವಿ ಮಾಡಿದ್ದರು.

ಮತ್ತೊಂದೆಡೆ ಸರ್ಕಾರದ ಈ ಮನವಿಗೆ ಖಾಸಗಿ ಶಾಲೆಗಳ ಸಂಘ ಆಕ್ಷೇಪ ವ್ಯಕ್ತಪಡಿಸಿತ್ತು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಎಕ್ಸಾಂ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ತಡೆ ನೀಡಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಸೂಚಿಸಿತ್ತು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು