ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರ್ ಎಸ್ ಎಸ್ ಸಂಘಟನೆಗೆ ಶಾಕ್ ನೀಡಿದ ಕೇರಳ ಹೈಕೋರ್ಟ್: ದೇವಸ್ಥಾನದಲ್ಲಿ ಆಯುಧ ತರಬೇತಿಗೆ ನಿಷೇಧ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಆರ್ ಎಸ್ ಎಸ್ ಸಂಘಟನೆಗೆ ಶಾಕ್ ನೀಡಿದ ಕೇರಳ ಹೈಕೋರ್ಟ್: ದೇವಸ್ಥಾನದಲ್ಲಿ ಆಯುಧ ತರಬೇತಿಗೆ ನಿಷೇಧ

RSS: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (RSS) ಶಾಕ್ ನೀಡಿದ ಕೇರಳ ಹೈಕೋರ್ಟ್. ತಿರುವನಂತಪುರಂ ಜಿಲ್ಲೆಯ ಶರ್ಕರಾ ದೇವಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಆರ್‌ಎಸ್‌ಎಸ್‌ ಶಸ್ತ್ರಾಸ್ತ್ರಗಳನ್ನು ಬಳಸುವುದನ್ನು ತಡೆಯಲು ಆದೇಶ ನೀಡುವಂತೆ ಕೋರಿ ಇಬ್ಬರು ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ತೀರ್ಪು ನೀಡಿದೆ.

ಶರ್ಕರಾ ದೇವಿ ದೇವಸ್ಥಾನವು ಟ್ರಾವೆಂಕೋರ್ ಬೋರ್ಡ್ ಅಡಿಯಲ್ಲಿದೆ. ಟ್ರಾವೆಂಕೋರ್‌ ದೇವಸ್ಥಾನಂ ಮಂಡಳಿಯು ಈ ಹಿಂದೆ ನೀಡಿದ್ದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ, ಮಂಡಳಿಯು ನಡೆಸುವ ದೇಗುಲಗಳಲ್ಲಿ ಆರ್‌ಎಸ್‌ಎಸ್ ನಡೆಸುವ ಸಾಮೂಹಿಕ ವ್ಯಾಯಾಮಗಳನ್ನು ನಿಷೇಧಿಸಿದೆ.

“ತಿರುವಾಂಕೂರು ದೇವಸ್ಥಾನ ಮಂಡಳಿಯ ನಿರ್ವಹಣೆಯಲ್ಲಿರುವ ದೇವಾಲಯದ ಆವರಣದಲ್ಲಿ ಯಾವುದೇ ಸಾಮೂಹಿಕ ಡ್ರಿಲ್ ಅಥವಾ ಶಸ್ತ್ರಾಸ್ತ್ರ ಅಭ್ಯಾಸವನ್ನು ಅನುಮತಿಸಲಾಗುವುದಿಲ್ಲ. ಚಿರೈನ್ಕೀಜು ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಡಳಿತಾಧಿಕಾರಿಗೆ ಅಗತ್ಯ ಸಹಾಯವನ್ನು ನೀಡಬೇಕು. ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು,’’ ಎಂದು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಶಾಖೆಗಳು ಆಯೋಜಿಸುವ ಸಾಮೂಹಿಕ ಡ್ರಿಲ್‌ಗಳನ್ನು ನಿಷೇಧಿಸುವ ಮೇ 18ರ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕೇರಳದ ದೇವಾಲಯಗಳನ್ನು ನಿರ್ವಹಿಸುವ ಟ್ರಾವೆಂಕೋರ್ ಬೋರ್ಡ್ ಸುತ್ತೋಲೆ ಹೊರಡಿಸಿದೆ. 2021ರ ಆದೇಶವನ್ನು ನಿರಾಕರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿರುವಾಂಕೂರು ದೇವಸ್ಥಾನಂ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.

2016ರಲ್ಲಿ, ದೇವಾಲಯದ ಸಂಕೀರ್ಣಗಳಲ್ಲಿ ಆರ್‌ಎಸ್‌ಎಸ್‌ ಯಾವುದೇ ರೀತಿಯ ಶಸ್ತ್ರಾಸ್ತ್ರ ತರಬೇತಿಯನ್ನು ನೀಡದಂತೆ ನಿಷೇಧಿಸಿ ಮಂಡಳಿಯು ಸುತ್ತೋಲೆ ಹೊರಡಿಸಿತ್ತು. ನಂತರ, ಮಂಡಳಿಯು ಮಾರ್ಚ್ 30, 2021ರಂದು ಮತ್ತೊಮ್ಮೆ ಸುತ್ತೋಲೆ ಹೊರಡಿಸಿ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡರು. 2016ರಲ್ಲಿ ಅಂದಿನ ಧಾರ್ಮಿಕ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರು ಕೇರಳದ ದೇವಾಲಯಗಳನ್ನು ಆಯುಧ ಕೇಂದ್ರವನ್ನಾಗಿ ಮಾಡಲು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಎಂದು ಸರ್ಕಾರಕ್ಕೆ ದೂರು ನೀಡಿದ್ದರು.

ವಿಷಯಗಳು: #news #peepal #peepalmedia #politics
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು