ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಟ್ ಅಂಡ್ ರನ್ ಹೊಸ ಕಾನೂನು: ರಸ್ತೆಗಿಳಿಯದ 25 ಲಕ್ಷ ಲಾರಿಗಳು, ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿ

PPeepal Media Desk

Peepal Media Desk • ದೇಶ

• 2 ನಿಮಿಷದ ಓದು

ಹಿಟ್ ಅಂಡ್ ರನ್ ಹೊಸ ಕಾನೂನು: ರಸ್ತೆಗಿಳಿಯದ 25 ಲಕ್ಷ ಲಾರಿಗಳು, ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿ

Hit And Run New Law : ಹೊಸದಾಗಿ ಪರಿಚಯಿಸಲಾಗಿರುವ ಹಿಟ್ ಅಂಡ್ ರನ್ ಆಕ್ಟ್ ಅಡಿಯಲ್ಲಿ ವಿಧಿಸಲಾಗಿರುವ ಭಾರೀ ಶಿಕ್ಷೆ ಮತ್ತು ದಂಡವನ್ನು ಪ್ರತಿಭಟಿಸಿ ದೇಶಾದ್ಯಂತ ಸುಮಾರು ಅರ್ಧದಷ್ಟು ಟ್ರಕ್‌ಗಳು ಸ್ಥಗಿತಗೊಂಡಿವೆ. ಪ್ರತಿಭಟನೆಯಲ್ಲಿ ಭಾಗವಹಿಸುವ ಚಾಲಕರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.

ಚಾಲಕರು ಲಾರಿಗಳನ್ನು ರಸ್ತೆಯಲ್ಲೇ ನಿಲ್ಲಿಸುತ್ತಿದ್ದಾರೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್, ಛತ್ತೀಸ್‌ಗಢ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಇಂದು ಪರಿಸ್ಥಿತಿ ಹದಗೆಡುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ (ರಾಜಕೀಯೇತರ) ಇಂದು ಮಧ್ಯಾಹ್ನ ದೇಶಾದ್ಯಂತ ಸಾರಿಗೆ ಒಕ್ಕೂಟಗಳ ಸಭೆಗೆ ಕರೆ ನೀಡಿದೆ. ಇದರಲ್ಲಿ ಮುಂದಿನ ಕಾರ್ಯತಂತ್ರವನ್ನು ನಿರ್ಧರಿಸಲಾಗುತ್ತದೆ.

ಕೇಂದ್ರ ಸರ್ಕಾರದ ಹೊಸ ಹಿಟ್ ಅಂಡ್ ರನ್ ಕಾನೂನಿನ ವಿರುದ್ಧ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾನೂನನ್ನು ವಿರೋಧಿಸಿ ಎಲ್ಲ ಸಾರಿಗೆ ಸಂಸ್ಥೆಗಳು ಚಾಲಕರೊಂದಿಗೆ ರಸ್ತೆಗಿಳಿದಿವೆ. ಇಂದು ಕೂಡ ಹಲವೆಡೆ ಟ್ರಾಫಿಕ್ ಜಾಮ್, ಬಸ್ ಮತ್ತು ಟ್ರಕ್ ಮುಷ್ಕರಗಳು ವರದಿಯಾಗಿವೆ. ಖಾಸಗಿ ಬಸ್‌ಗಳು, ಟ್ರಕ್‌ಗಳು ಮತ್ತು ಸರ್ಕಾರಿ ಇಲಾಖೆಗಳಿಗೆ ಸೇರಿದ ಖಾಸಗಿ ಬಸ್‌ಗಳು ಈ ಮುಷ್ಕರದಲ್ಲಿ ಭಾಗವಹಿಸುತ್ತಿವೆ. ವಾಸ್ತವವಾಗಿ, ಹೊಸ ಹಿಟ್ ಅಂಡ್ ರನ್ ಕಾಯ್ದೆಯಡಿಯಲ್ಲಿ, ಕೇಂದ್ರ ಸರ್ಕಾರವು 10 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ದಂಡವನ್ನು ವಿಧಿಸುವ ನಿಬಂಧನೆಯನ್ನು ಜಾರಿಗೆ ತಂದಿದೆ.

ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಅಧ್ಯಕ್ಷ ಅಮೃತ್ ಲಾಲ್ ಮದನ್ ಮಾತನಾಡಿ, ಚಾಲಕರ ಬೆಂಬಲಕ್ಕೆ ಸಾರಿಗೆ ಒಕ್ಕೂಟ ಬಂದಿದೆ. ಇಂದು ಮಧ್ಯಾಹ್ನ ದೇಶಾದ್ಯಂತ ಎಲ್ಲ ಸಂಘಗಳ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ, ಮುಂದಿನ ಕಾರ್ಯತಂತ್ರವನ್ನು ನಿರ್ಧರಿಸಲಾಗುತ್ತದೆ ಮತ್ತು ನಿರ್ಧರಿಸಿದ ಕಾರ್ಯತಂತ್ರದ ಪ್ರಕಾರ, ಪ್ರತಿಭಟನೆಯ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದರು.

ಭಾರತೀಯ ದಂಡ ಸಂಹಿತೆಗೆ ಇತ್ತೀಚೆಗೆ ಬದಲೀ ಕಾನೂನು ತರಲಾಗಿದ್ದು ಇದರಡಿ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ರೂಪಿಸಿದೆ. ಕಾನೂನಿನ ಪ್ರಕಾರ, ರಸ್ತೆ ಅಪಘಾತಗಳಿಗೆ ಕಾರಣವಾದ ಟ್ರಕ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ದಂಡ ವಿಧಿಸುವ ಅವಕಾಶ ನೀಡಲಾಗಿದೆ. ಇದಕ್ಕೂ ಮುನ್ನ ಭಾರತೀಯ ದಂಡ ಸಂಹಿತೆ (IPC) ಪ್ರಕಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತಿತ್ತು. ಹೊಸ ನಿಯಮದ ವಿರುದ್ಧ ಟ್ರಕ್ ಚಾಲಕರು ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಠಿಣ ನಿಯಮಗಳ ಭಯದಿಂದ ಹೊಸಬರು ಈ ವೃತ್ತಿಗೆ ಬರುತ್ತಿಲ್ಲ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಸ್ತುತ 95 ಲಕ್ಷಕ್ಕೂ ಹೆಚ್ಚು ಟ್ರಕ್‌ಗಳು ನೋಂದಣಿಯಾಗಿದ್ದು, ಅವುಗಳಲ್ಲಿ 70 ಲಕ್ಷ ಟ್ರಕ್‌ಗಳು ರಸ್ತೆಯಲ್ಲಿ ಓಡುತ್ತಿವೆ ಎಂದು ಅಮೃತ್ ಲಾಲ್ ಮದನ್ ಹೇಳಿದ್ದಾರೆ. ಇವುಗಳಲ್ಲಿ ಶೇ.30ರಿಂದ 40ರಷ್ಟು ಲಾರಿಗಳು ರಸ್ತೆಯಲ್ಲೇ ನಿಂತಿವೆ. ಇದರ ಪ್ರಕಾರ ಸ್ಥೂಲ ಅಂದಾಜು ಮಾಡಿದರೆ.. ರಸ್ತೆಯಲ್ಲಿದ್ದ 70 ಲಕ್ಷ ಲಾರಿಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಲಾರಿಗಳ ಚಕ್ರಗಳು ಚಲಿಸದೆ ನಿಂತಿವೆ. ಇದು ಶೀಘ್ರದಲ್ಲೇ ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರುವ ಎಲ್ಲಾ ಸಾಧ್ಯತೆಗಳಿವೆ.

https://chat.whatsapp.com/BoGCVVQyXYVE5m7RhIQRWv

ಇತ್ತೀಚಿನ ವರದಿಗಳ ಪ್ರಕಾರ ಕೇಂದ್ರ ಸರ್ಕಾರ ಲಾರಿ ಮಾಲಿಕರೊಂದಿಗೆ ಮಾತುಕತೆಗೆ ಸಿದ್ಧವಾಗಿದ್ದು, ಇಂದು ಸಂಜೆ ಲಾರಿ ಮಾಲಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಯುವ ಸಾಧ್ಯತೆ ದಟ್ಟವಾಗಿ. ಈಗಾಗಲೇ ಪೆಟ್ರೋಲ್‌ ಬಂಕುಗಳು ಕಿಕ್ಕಿರಿದಿದ್ದು ಬಂಕುಗಳ ಮಾಲಿಕರು ದಟ್ಟಣೆ ನಿರ್ವಹಿಸಲಾಗದೆ ಪರದಾಡುತ್ತಿದ್ದಾರೆ. ಎಲ್ಲರೂ ಒಮ್ಮೆಲೇ ಬಂಕುಗಳತ್ತ ಮುಖ ಮಾಡಿರುವುದರಿಂದಾಗಿ ಪೆಟ್ರೋಲ್‌ ಕೊರತೆ ಎದುರಾಗು ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು