ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರಾವಳಿಯಲ್ಲಿ ವರುಣನ ಆರ್ಭಟ: ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ನಾಳೆ ರಜೆ, ಉಡುಪಿ ಸೇರಿ ಕರಾವಳಿಗೆ ರೆಡ್ ಅಲರ್ಟ್

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಕರಾವಳಿಯಲ್ಲಿ ವರುಣನ ಆರ್ಭಟ: ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ನಾಳೆ ರಜೆ, ಉಡುಪಿ ಸೇರಿ ಕರಾವಳಿಗೆ ರೆಡ್ ಅಲರ್ಟ್

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (ದರ್ಶನ್) ಅಧಿಕೃತ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಇತ್ತ ಉಡುಪಿ ಜಿಲ್ಲೆ ಸೇರಿದಂತೆ ಇಡೀ ಕರಾವಳಿ ಭಾಗದಲ್ಲಿ ಜುಲೈ 2 ಮತ್ತು 3ರಂದು ಗುಡುಗು ಸಹಿತ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಗಾಳಿಯ ವೇಗ ಹೆಚ್ಚಾಗುವ ನಿರೀಕ್ಷೆಯಿದ್ದು, ಕಡಲ ತೀರದ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸಮುದ್ರದ ಪರಿಸ್ಥಿತಿ ಪ್ರತಿಕೂಲವಾಗಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಸೂಚನೆ ನೀಡಿವೆ. ಮೀನುಗಾರಿಕಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಕೂಡ ಜಿಲ್ಲಾಡಳಿತಗಳು ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿವೆ. ಜಲಪಾತಗಳು, ನದಿಗಳು, ಕೆರೆಗಳು ಹಾಗೂ ಸಮುದ್ರ ತೀರದಂತಹ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ. ವಿಶೇಷವಾಗಿ ನದಿ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಪ್ರವಾಹ ಪರಿಸ್ಥಿತಿಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧರಾಗಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳು ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು