ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತೀವ್ರಗಾಮಿ ಸಾಹಿತ್ಯವಿದ್ದರೆ ಅದು ಉಗ್ರಗಾಮಿ ಚಟುವಟಿಕೆ ಅಲ್ಲ : ಸುಪ್ರೀಂಕೋರ್ಟ್

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ತೀವ್ರಗಾಮಿ ಸಾಹಿತ್ಯವಿದ್ದರೆ ಅದು ಉಗ್ರಗಾಮಿ ಚಟುವಟಿಕೆ ಅಲ್ಲ : ಸುಪ್ರೀಂಕೋರ್ಟ್

ಹಿಂಸೆ ಕುರಿತ ಸಾಹಿತ್ಯ ಹೊಂದಿದ್ದ ಮಾತ್ರಕ್ಕೆ ಅದು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ  (ಯುಎಪಿಎ) ಅಡಿ ಭಯೋತ್ಪಾದಕ ಚಟುವಟಿಕೆಯಾಗದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಶುಕ್ರವಾರ ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ಸಾಮಾಜಿಕ ಹೋರಾಟಗಾರರಾದ ವರ್ನನ್‌ ಗೊನ್ಸಾಲ್ವೆಸ್‌ ಮತ್ತು ಅರುಣ್‌ ಫೆರೇರಾ ಅವರಿಗೆ ಜಾಮೀನು ನೀಡಿದ ಸಂದರ್ಭದಲ್ಲಿ ಈ ರೀತಿಯಾಗಿ ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ, ಪ್ರಕರಣದ ಅಷ್ಟೂ ವಿಚಾರಣೆಯನ್ನು ಆಲಿಸಿ, ತೀರ್ಪಿನಲ್ಲಿ ಈ ರೀತಿಯಲ್ಲಿ ಸ್ಪಷ್ಟಪಡಿಸಿದೆ. ಸಾಮಾಜಿಕ ಹೋರಾಟಗಾರರಾದ ವರ್ನನ್‌ ಗೊನ್ಸಾಲ್ವೆಸ್‌ ಮತ್ತು ಅರುಣ್‌ ಫೆರೇರಾ ಯುಎಪಿಎ ಸೆಕ್ಷನ್ 43 ಡಿ (5) ಅಡಿಯಲ್ಲಿ ಜಾಮೀನು ನೀಡಬಾರದಂತಹ ಕಟ್ಟುನಿಟ್ಟಿನ ನಿಯಮಾವಳಿಗೊಳಪಡುವ ಉಗ್ರ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.

ಪುಣೆಯ ಭೀಮಾ ಕೋರೆಗಾಂವ್ ಕದನ ಸ್ಮಾರಕ ಸ್ಥಳದಲ್ಲಿ 2017ರಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ  ಹೋರಾಟಗಾರರಾದ ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾ ಸೇರಿದಂತೆ 14 ಮಂದಿ ಕಾರಣ ಎಂದು NIA ಆರೋಪಿಸಿತ್ತು. ಕ್ರಿಮಿನಲ್ ಬಲದ ಮೂಲಕ ಸಾರ್ವಜನಿಕ ಹುದ್ದೆಯಲ್ಲಿರುವವರ ಮೇಲೆ ದಾಳಿ ಮಾಡುವಂತಹ ಚಟುವಟಿಕೆಗಳಲ್ಲಿ ಈ ಇಬ್ಬರು ತೊಡಗಿದ್ದರು ಎಂದು ಮೇಲ್ನೋಟಕ್ಕೆ ಹೇಳುವಂತಹ ಯಾವುದೇ ಆಧಾರ ಇಲ್ಲ. ಹಾಗೂ ಸಾಕ್ಷಿಗಳ ಹೇಳಿಕೆಗಳು. ಮೇಲ್ಮನವಿದಾರರ ಭಯೋತ್ಪಾದಕ ಕೃತ್ಯವನ್ನು ಉಲ್ಲೇಖಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ಹೇಳಿದೆ.

ಇದನ್ನೂ ಓದಿ :

ಭೀಮಾ ಕೋರೆಗಾಂವ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಮ್ ಕೋರ್ಟ್‌

ಜೊತೆಗೆ ಸಾಕ್ಷ್ಯವಾಗಿ ಸಲ್ಲಿಸಿರುವ ಪತ್ರಗಳನ್ನು ಮೇಲ್ಮನವಿದಾರರಿಂದ ವಶಪಡಿಸಿಕೊಂಡಿಲ್ಲ. ಅವುಗಳಲ್ಲಿ ಮೂರನೇ ವ್ಯಕ್ತಿಗಳಾಗಿ ಮಾತ್ರ ಅವರ ಪ್ರಸ್ತಾಪವಿದೆ. ಆದ್ದರಿಂದ ಇಂತಹ ಪತ್ರಗಳು ದುರ್ಬಲ ಮೌಲ್ಯಗಳಿಂದ ಕೂಡಿವೆ ಎಂದು ಜಾಮೀನು ಮಂಜೂರು ಮಾಡಿದೆ.

ತೆಲುಗು ಕವಿ ವರವರರಾವ್‌, ವಕೀಲೆ ಸುಧಾ ಭಾರದ್ವಾಜ್‌ ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖಾ, ಚಿಂತಕ ಆನಂದ್‌ ತೇಲ್ತುಂಬ್ಡೆ ಬುಡಕಟ್ಟು ಸಮುದಾಯಗಳ ಹೋರಾಟಗಾರ ದಿವಂಗತ ಫಾದರ್‌ ಸ್ಟಾನ್‌ಸ್ವಾಮಿ ಸೇರಿದಂತೆ ಅನೇಕರನ್ನು ಈ ಪ್ರಕರಣದಡಿ ಬಂಧಿಸಲಾಗಿತ್ತು. ಅವರಲ್ಲಿ ಕೆಲವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೆ ಇನ್ನೂ ಕೆಲವರು ಸೆರೆವಾಸ ಅನುಭವಿಸುತ್ತಿದ್ದಾರೆ. ಸ್ಟಾನ್‌ ಸ್ವಾಮಿ ಜೈಲಿನಲ್ಲಿದ್ದಾಗಲೇ ಅನಾರೋಗ್ಯದಿಂದ ಮೃತಪಟ್ಟಿದ್ದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು