ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇದುವರೆಗೆ ಒಂದಲ್ಲ- ಎರಡಲ್ಲ, 8 ಸಾವು: ಆತ್ಮಹತ್ಯೆ ಮಾಡಿಕೊಂಡ ಋಷಿಕೇಶ್‌ ಪರ ಐಐಟಿ ದೆಹಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

PPeepal Media

Peepal Media ದೇಶ

• 2 ನಿಮಿಷದ ಓದು

ಇದುವರೆಗೆ ಒಂದಲ್ಲ- ಎರಡಲ್ಲ, 8 ಸಾವು: ಆತ್ಮಹತ್ಯೆ ಮಾಡಿಕೊಂಡ ಋಷಿಕೇಶ್‌ ಪರ ಐಐಟಿ ದೆಹಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ದೆಹಲಿಯಲ್ಲಿರುವ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆಯ (IIT Delhi) ವಿದ್ಯಾರ್ಥಿಗಳು ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ್ದಾರೆ. 31 ವರ್ಷದ ಎಂಎಸ್ಸಿ ಫಿಸಿಕ್ಸ್ (MSc Physics) ವಿದ್ಯಾರ್ಥಿ ಋಷಿಕೇಶ್ ಕುಮಾರ್ ಅವರು ಕ್ಯಾಂಪಸ್‌ನ ಕಟ್ಟಡವೊಂದರ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಈ ತೀವ್ರ ಪ್ರತಿಭಟನೆ ಭುಗಿಲೆದ್ದಿದೆ.

ಕ್ಯಾಂಪಸ್‌ನ ಲೆಕ್ಚರ್ ಹಾಲ್ ಕಾಂಪ್ಲೆಕ್ಸ್ ಬಳಿ ಜಮಾಯಿಸಿದ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಮುಖ್ಯ ಕಟ್ಟಡದ ಮೊದಲ ಮಹಡಿಯ ಲಾಬಿ ಹಾಗೂ ಡೈರೆಕ್ಟರ್ ಅವರ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿ ಆಡಳಿತ ಮಂಡಳಿಯ ಹೊಣೆಗಾರಿಕೆಯನ್ನು ಪ್ರಶ್ನಿಸಿದರು. ಐಐಟಿ ಕ್ಯಾಂಪಸ್‌ಗಳಲ್ಲಿ ಇಂತಹ ಬೃಹತ್ ವಿದ್ಯಾರ್ಥಿ ಪ್ರತಿಭಟನೆಗಳು ತೀರಾ ವಿರಳವಾಗಿದ್ದು, ವಿದ್ಯಾರ್ಥಿಗಳ ಆಕ್ರೋಶ ತೀವ್ರವಾಗಿತ್ತು.

ಪ್ರತಿಭಟನೆಯಲ್ಲಿದ್ದ ವಿದ್ಯಾರ್ಥಿಯೊಬ್ಬರು ಮಾತನಾಡುತ್ತಾ, “ನಾವು ಕೇವಲ ಒಂದು ಆತ್ಮಹತ್ಯೆಯ ನಂತರ ಇಲ್ಲಿಗೆ ಬಂದಿಲ್ಲ, ಎರಡು ಸಾವುಗಳ ನಂತರವೂ ಬಂದಿಲ್ಲ. ಸತತ 8 ಸಾವುಗಳ ನಂತರ ನಾವಿಲ್ಲಿ ಜಮಾಯಿಸಿದ್ದೇವೆ. ಆಡಳಿತ ಮಂಡಳಿಗೆ ಇದು ಇನ್ನೂ ಗಂಭೀರವಾಗಿ ಕಾಣಿಸುತ್ತಿಲ್ಲವೇ?” ಎಂದು ಆಕ್ರೋಶ ಹೊರಹಾಕಿದ್ದಾರೆ. 2023ರಿಂದ ಈವರೆಗೆ ಸಂಸ್ಥೆಯಲ್ಲಿ ಸಂಭವಿಸಿದ ಎಂಟನೇ ಆತ್ಮಹತ್ಯೆ ಇದಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಪ್ರತಿಭಟನಾ ನಿರತರು ವಿದ್ಯಾರ್ಥಿ ಕಲ್ಯಾಣ ವಿಭಾಗದ ಅಸೋಸಿಯೇಟ್ ಡೀನ್ ಪ್ರೊಫೆಸರ್ ಶ್ರೀದೇವಿ ಉಪಾಧ್ಯಾಯ ಅವರ ತಕ್ಷಣದ ರಾಜೀನಾಮೆ, ಈ ಎಲ್ಲಾ ಸಾವುಗಳ ಕುರಿತು ಸ್ವತಂತ್ರ ತನಿಖೆ ಹಾಗೂ ಮೃತ ಋಷಿಕೇಶ್ ಕುಟುಂಬಕ್ಕೆ ₹1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಪಟ್ಟುಹಿಡಿದರು.

ಮೃತ ಋಷಿಕೇಶ್ ಸ್ಮರಣಾರ್ಥ ಕೆಲಕಾಲ ಮೌನ ಆಚರಿಸಿದ ಬಳಿಕ, ಸಂಸ್ಥೆಯ ನಿರಂತರ ಆಡಳಿತಾತ್ಮಕ ನಿರ್ಲಕ್ಷ್ಯದ ಕುರಿತು ವಿದ್ಯಾರ್ಥಿಗಳು ಬಹಿರಂಗವಾಗಿ ಮಾತನಾಡಿದರು. ಈ ವರ್ಷದ ಆರಂಭದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಋಷಿಕೇಶ್, ತೀವ್ರ ಮಾನಸಿಕ ಒತ್ತಡಕ್ಕೊಳಗಾಗಿದ್ದರಿಂದ ಒಂದು ಸೆಮಿಸ್ಟರ್ ಕಾಲ ಬ್ರೇಕ್ ತೆಗೆದುಕೊಂಡು ಸುಮಾರು ಒಂದು ತಿಂಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆದಿದ್ದರು.

ಜುಲೈ ಅಂತ್ಯದಲ್ಲಿ ಅವರು ಹಾಸ್ಟೆಲ್‌ಗೆ ಮರಳಿದಾಗ, ಸೆಮಿಸ್ಟರ್ ಬ್ರೇಕ್ ನೆಪವೊಡ್ಡಿ ಹಾಸ್ಟೆಲ್ ರೋಲ್‌ನಿಂದ ಅವರ ಹೆಸರನ್ನು ತೆಗೆದುಹಾಕಲಾಗಿತ್ತು. ತಾವು ಚಿಕಿತ್ಸೆ ಪಡೆದ ಆಸ್ಪತ್ರೆಯಿಂದ ಫಿಟ್‌ನೆಸ್ ಕ್ಲಿಯರೆನ್ಸ್ ಪ್ರಮಾಣಪತ್ರ ತಂದಿದ್ದರೂ, ಐಐಟಿ ದೆಹಲಿ ಆಸ್ಪತ್ರೆಯಿಂದ ಮತ್ತೊಂದು ಕ್ಲಿಯರೆನ್ಸ್ ತರಬೇಕೆಂದು ಆಡಳಿತ ಮಂಡಳಿ ಪೀಡಿಸಿತ್ತು. ಅಂತಿಮವಾಗಿ ಹಾಸ್ಟೆಲ್ ಕೊಠಡಿ ಸಿಗದೆ ಋಷಿಕೇಶ್ ತಮ್ಮ ತಾಯಿಯೊಂದಿಗೆ ಕ್ಯಾಂಪಸ್‌ನ ಹೊರಗೆ ಬಾಡಿಗೆ ಮನೆಯಲ್ಲಿ ವಾಸಿಸುವಂತಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದರು.

“ನಾವು ಎಷ್ಟೇ ಸಮಸ್ಯೆ ಹೇಳಿಕೊಂಡರೂ ‘ನಿಮಗೆ ನಿಭಾಯಿಸಲು ಆಗದಿದ್ದರೆ ಇಲ್ಲಿಂದ ಹೊರಟುಹೋಗಿ’ ಎಂದು ಅಧಿಕಾರಿಗಳು ಹೇಳುತ್ತಾರೆ; ಅವರಲ್ಲಿ ಕನಿಷ್ಠ ಮಾನವೀಯತೆಯೂ ಇಲ್ಲ” ಎಂದು ವಿದ್ಯಾರ್ಥಿಗಳು ದೂರಿದರು.

ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಆಡಳಿತ ಮಂಡಳಿಯು ಸೋಮವಾರದ ಎಲ್ಲಾ ತರಗತಿಗಳನ್ನು ರದ್ದುಗೊಳಿಸಿತು. ಸಂಜೆ 5:30ರ ಸುಮಾರಿಗೆ ಕಚೇರಿಯಿಂದ ಹೊರಬಂದ ಐಐಟಿ ದೆಹಲಿ ನಿರ್ದೇಶಕ ರಂಗನ್ ಬ್ಯಾನರ್ಜಿ, ಘಟನೆಯ ತನಿಖೆಗೆ ಸಮಿತಿ ರಚಿಸಲಾಗುವುದು ಹಾಗೂ ಮೃತನ ಏಕೈಕ ಆಧಾರವಾಗಿದ್ದ ತಾಯಿಗೆ ಮೆಡಿಕಲ್ ವೆಚ್ಚಗಳ ಜೊತೆಗೆ ₹6 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಆದರೆ ಅಸೋಸಿಯೇಟ್ ಡೀನ್ ಶ್ರೀದೇವಿ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದರು.

ನಿರ್ದೇಶಕರ ಈ ನಿರ್ಧಾರದಿಂದ ಮತ್ತಷ್ಟು ರೊಚ್ಚಿಗೆದ್ದ ವಿದ್ಯಾರ್ಥಿಗಳು ಜೋರಾಗಿ ಕೂಗುತ್ತಾ ಧಿಕ್ಕಾರ ಕೂಗಿದರು. ಅದೇ ಸಂದರ್ಭದಲ್ಲಿ ಪ್ರೊಫೆಸರ್ ಶ್ರೀದೇವಿ ಅವರನ್ನು ಕಟ್ಟಡದ ಹಿಂಬದಿಯ ಬಾಗಿಲಿನಿಂದ ರಹಸ್ಯವಾಗಿ ಹೊರಗೆ ಕರೆದೊಯ್ಯಲಾಯಿತು. ಕೇವಲ ₹6 ಲಕ್ಷ ಪರಿಹಾರದಿಂದ ಆ ಬಡ ತಾಯಿ ಹೇಗೆ ಬದುಕಲು ಸಾಧ್ಯ ಎಂದು ಪ್ರಶ್ನಿಸಿದ ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ಮುಂದುವರಿಸಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು