ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಪಚುನಾವಣೆ: 11 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟದ ಹವಾ, ಜಲಂದರ್‌‌ ಪಶ್ಚಿಮ ಗೆದ್ದು ಬೀಗಿದ ಆಪ್

P

Peepal Media • ದೇಶ

• 1 ನಿಮಿಷದ ಓದು

ಉಪಚುನಾವಣೆ: 11 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟದ ಹವಾ, ಜಲಂದರ್‌‌ ಪಶ್ಚಿಮ ಗೆದ್ದು ಬೀಗಿದ ಆಪ್

ದೇಶಾದ್ಯಂತ 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದೆ. ಸಾರ್ವತ್ರಿಕ ಚುನಾವಣೆಯ ನಂತರ ಆಡಳಿತಾರೂಢ ಎನ್‌ಡಿಎ ಮತ್ತು ಇಂಡಿಯಾ ಬ್ಲಾಕ್ ಎದುರಿಸುತ್ತಿರುವ ಮೊದಲ ಪರೀಕ್ಷೆ ಇದಾಗಿರುವುದರಿಂದ ಭಾರಿ ಕುತೂಹಲ ಮೂಡಿಸಿತ್ತು.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಡುಗಡೆಯಾದ ಫಲಿತಾಂಶದ ಮಾದರಿಯ ಪ್ರಕಾರ ಇಂಡಿಯಾ ಬ್ಲಾಕ್ ಅಭ್ಯರ್ಥಿಗಳು 11 ಸ್ಥಾನಗಳಲ್ಲಿ ಮುನ್ನಡೆ ಕಾಪಾಡಿಕೊಂಡಿದ್ದಾರೆ. ಇನ್ನೆರಡು ಸ್ಥಾನಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಜುಲೈ 10ರಂದು ಪಶ್ಚಿಮ ಬಂಗಾಳದ ನಾಲ್ಕು, ಹಿಮಾಚಲ ಪ್ರದೇಶದ ಮೂರು, ಉತ್ತರಾಖಂಡದ 2, ಪಂಜಾಬ್, ಬಿಹಾರ, ತಮಿಳುನಾಡು ಮತ್ತು ಮಧ್ಯಪ್ರದೇಶದ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ಮತದಾನ ನಡೆದಿತ್ತು. ಪಂಜಾಬ್‌ನ ಜಲಂಧರ್ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೊಹಿಂದರ್ ಭಗತ್ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಬಿಜೆಪಿ ಅಭ್ಯರ್ಥಿ ಶೀತಲ್ ವಿರುದ್ಧ 37 ಸಾವಿರ ಮತಗಳ ಬಹುಮತದಿಂದ ಗೆದ್ದರು. ಹಾಗೆಯೇ ಪಶ್ಚಿಮ ಬಂಗಾಳದ ಮಾಣಿಕ್ತಾಲಾ, ಬಾಗ್ದಾ, ರಾಣಾಘಾಟ್ ದಕ್ಷಿಣ್, ರಾಯಗಂಜ್ ಕ್ಷೇತ್ರಗಳಿಗೂ ಚುನಾವಣೆ ನಡೆದಿತ್ತು.

ಇಲ್ಲಿನ ನಾಲ್ಕೂ ಸ್ಥಾನಗಳಲ್ಲಿ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಹಿಮಾಚಲ ಪ್ರದೇಶದ ಡೆಹ್ರಾದಲ್ಲಿ ರಾಜ್ಯ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ ಅವರ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಮುನ್ನಡೆ ಸಾಧಿಸಿದ್ದಾರೆ. ನಲಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆಯಲ್ಲಿದ್ದರೆ, ಹಮೀರ್‌ಪುರದಲ್ಲಿ ಬಿಜೆಪಿ ನಾಯಕ ಮುನ್ನಡೆ ಸಾಧಿಸಿದ್ದಾರೆ.

ಉತ್ತರಾಖಂಡದ ಬದರಿನಾಥ್ ಮತ್ತು ಮಂಗಲೋರ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮಧ್ಯಪ್ರದೇಶದ ಅಮರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧೀರನ್ ಶಾ ಮುನ್ನಡೆ ಸಾಧಿಸಿದ್ದಾರೆ. ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಜೆಡಿಯು ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಮಿಳುನಾಡಿನ ವಿಕ್ರವಾಂಡಿಯಲ್ಲಿ ಡಿಎಂಕೆ ನಾಯಕ ಅಣ್ಣಿಯೂರ್ ಶಿವ ಮುಂಚೂಣಿಯಲ್ಲಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version