ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೇಶದಲ್ಲಿ ಮತ್ತೆ ಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್ ಸ್ಥಾವರಗಳಲ್ಲಿ ಸಂಗ್ರಹ ಕೊರತೆ, ಕೇರಳದಲ್ಲಿ ವಿದ್ಯುತ್ ಕಡಿತಕ್ಕೆ ಜನಾಕ್ರೋಶ

PPeepal Media

Peepal Media ದೇಶ

• 1 ನಿಮಿಷದ ಓದು

ದೇಶದಲ್ಲಿ ಮತ್ತೆ ಕಲ್ಲಿದ್ದಲು ಬಿಕ್ಕಟ್ಟು: ವಿದ್ಯುತ್ ಸ್ಥಾವರಗಳಲ್ಲಿ ಸಂಗ್ರಹ ಕೊರತೆ, ಕೇರಳದಲ್ಲಿ ವಿದ್ಯುತ್ ಕಡಿತಕ್ಕೆ ಜನಾಕ್ರೋಶ

ದೇಶದಲ್ಲಿ ಮತ್ತೆ ಕಲ್ಲಿದ್ದಲು ಕೊರತೆ ತಲೆದೋರುತ್ತಿದ್ದು, ಹಲವು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಇಂಧನದ ಕೊರತೆ ಗಂಭೀರ ಹಂತ ತಲುಪಿದೆ. ತೀವ್ರ ಸೆಖೆ ಹಾಗೂ ಎಲ್ ನಿನೋ ಹವಾಮಾನ ವೈಪರೀತ್ಯದ ಕಾರಣದಿಂದ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲೇ ಮುಂದುವರಿದಿದ್ದು, ದೇಶದ ಮೂರನೇ ಒಂದರಷ್ಟು ಕಲ್ಲಿದ್ದಲು ಆಧಾರಿತ ಘಟಕಗಳು ತೀರಾ ಕನಿಷ್ಠ ಇಂಧನ ಸಂಗ್ರಹದೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ತಿಳಿಸಿದೆ.

ಮೇ ತಿಂಗಳಲ್ಲಿ ದಾಖಲಾಗಿದ್ದ 270.70 ಗಿಗಾವಾಟ್ ದಾಖಲೆಯ ಸಮೀಪದಲ್ಲೇ ಪ್ರಸ್ತುತ ದಿನನಿತ್ಯದ ಗರಿಷ್ಠ ಬೇಡಿಕೆ (ಸುಮಾರು 267 ಗಿಗಾವಾಟ್) ಮುಂದುವರಿದಿದೆ. ಕೇಂದ್ರೀಯ ವಿದ್ಯುತ್ ಪ್ರಾಧಿಕಾರದ (ಸಿಇಎ) ಅಂಕಿಅಂಶಗಳ ಪ್ರಕಾರ, ನಿಗದಿತ ಸಂಗ್ರಹಕ್ಕಿಂತ ಶೇಕಡಾ 25ಕ್ಕಿಂತ ಕಡಿಮೆ ಕಲ್ಲಿದ್ದಲು ಹೊಂದಿರುವ ಸ್ಥಾವರಗಳ ಸಂಖ್ಯೆ ಆಗಸ್ಟ್ ಅಂತ್ಯದಲ್ಲಿದ್ದ 45ರಿಂದ ಸೆಪ್ಟೆಂಬರ್ ಮೊದಲ ವಾರಕ್ಕೆ 50ಕ್ಕೆ ಏರಿಕೆಯಾಗಿದೆ.

ಹಗಲಿನ ವೇಳೆ ಸೌರಶಕ್ತಿಯಂತಹ ಶುದ್ಧ ಇಂಧನ ಬೇಡಿಕೆಯನ್ನು ನಿಭಾಯಿಸುತ್ತಿದ್ದರೂ, ಬ್ಯಾಟರಿ ಸಂಗ್ರಹ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿರುವುದು ಕಲ್ಲಿದ್ದಲು ಸ್ಥಾವರಗಳ ಮೇಲೆ ಒತ್ತಡ ಹೆಚ್ಚಿಸಿದೆ ಎಂದು ಇಂಧನ ಮತ್ತು ಶುದ್ಧ ಗಾಳಿ ಸಂಶೋಧನಾ ಕೇಂದ್ರದ (CREA) ವಿಶ್ಲೇಷಕ ಮನೋಜ್ ಕುಮಾರ್ ಹೇಳಿದ್ದಾರೆ. ರೈಲ್ವೆ ಜಾಲದ ಮೂಲಕ ಕಲ್ಲಿದ್ದಲು ಪೂರೈಕೆಯನ್ನು ತುರ್ತಾಗಿ ಹೆಚ್ಚಿಸಬೇಕಾದ ಅಗತ್ಯವಿದ್ದು, ಹಿಂದಿನ ಅನುಭವಗಳಿಂದ ಪಾಠ ಕಲಿಯದ ಕೇಂದ್ರ ಸರ್ಕಾರ ದೂರದೃಷ್ಟಿಯಿಲ್ಲದೆ ವ್ಯವಹರಿಸಿದೆ ಎಂಬ ಟೀಕೆಗಳೂ ಕೇಳಿಬಂದಿವೆ.

ಇನ್ನೊಂದೆಡೆ, ಕೇರಳದಲ್ಲಿ ಅಘೋಷಿತ ಲೋಡ್‌ಶೆಡ್ಡಿಂಗ್ ತೀವ್ರಗೊಂಡಿದ್ದು ಸಾರ್ವಜನಿಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಮುನ್ಸೂಚನೆಯಿಲ್ಲದೆ ಮಧ್ಯರಾತ್ರಿಯ ವೇಳೆ ಗಂಟೆಗಟ್ಟಲೆ ವಿದ್ಯುತ್ ಸ್ಥಗಿತಗೊಳಿಸುತ್ತಿರುವುದರಿಂದ ಮಕ್ಕಳು, ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತು ಸಮರ್ಥನೆ ನೀಡಿರುವ ಕೇರಳ ವಿದ್ಯುತ್ ಸಚಿವ ಸನ್ನಿ ಜೋಸೆಫ್, ರಾಜ್ಯದಲ್ಲಿ ಇತ್ತೀಚೆಗೆ ವಿದ್ಯುತ್ ಉಪಕರಣಗಳು ಮತ್ತು ಎಸಿಗಳ ಬಳಕೆ ಹೆಚ್ಚಾಗಿರುವುದರಿಂದ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ; ದಿನಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ವಿದ್ಯುತ್ ಕಡಿತ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಆದರೆ, ಒಂದು ದಶಕದ ಬಳಿಕ ರಾಜ್ಯಕ್ಕೆ ವಿದ್ಯುತ್ ಕಡಿತದ ಸಮಸ್ಯೆಯನ್ನು ಕಾಂಗ್ರೆಸ್ ಸರ್ಕಾರ ‘ಕೊಡುಗೆ’ಯಾಗಿ ನೀಡಿದೆ ಎಂದು ವಿರೋಧ ಪಕ್ಷ ಎಲ್‌ಡಿಎಫ್ (LDF) ಟೀಕಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು