ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೋಂ ಸ್ಟೆ ದಾಳಿ ಪ್ರಕರಣದ ಆರೋಪಿಗಳ ಖುಲಾಸೆ ; ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಜನವಾದಿ ಸಂಘಟನೆ ಆಗ್ರಹ

P

Peepal Media Desk • ದೇಶ

• 1 ನಿಮಿಷದ ಓದು

ಹೋಂ ಸ್ಟೆ ದಾಳಿ ಪ್ರಕರಣದ ಆರೋಪಿಗಳ ಖುಲಾಸೆ ; ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಜನವಾದಿ ಸಂಘಟನೆ ಆಗ್ರಹ

2012 ಜುಲೈ 2 ರಂದು ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂಸ್ಟೇನಲ್ಲಿದ್ದ ಯುವತಿಯರ ಮೇಲಿನ ಹಲ್ಲೆ ಪ್ರಕರಣದ ಆರೋಪಿಗಳನ್ನು ಆಗಸ್ಟ್ 6 ರ ಮಂಗಳವಾರ ನ್ಯಾಯಾಲಯ ಖುಲಾಸೆಗೊಳಿಸಿದ ಬೆಳವಣಿಗೆಯನ್ನು ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.

2012 ಜುಲೈ 2 ರಂದು ಹಿಂದೂ ಜಾಗರಣ ವೇದಿಕೆಗೆ ಸಂಬಂಧಿಸಿದ ಕಾರ್ಯಕರ್ತರು ತೀವ್ರ ಹಲ್ಲೆಯನ್ನು ಮಾಡಿದ್ದರು. ಹಲ್ಲೆ ಮಾತ್ರವಲ್ಲದೇ ಅಲ್ಲಿದ್ದ ಯುವತಿಯರೊಂದಿಗೆ ಅವರು ಅಸಭ್ಯವಾಗಿ ನಡೆದುಕೊಂಡಿದ್ದು ಲೈಂಗಿಕ ಕಿರುಕುಳಗಳನ್ನು ನೀಡಿದ್ದರು ಎಂಬುದನ್ನು ಪ್ರಕರಣದ ವಿಚಾರಣೆಯ ಸಮಯದಲ್ಲಿ ಅಲ್ಲಿ ಧಾಳಿಗೆ ಒಳಗಾದ ಯುವತಿ ಸ್ವತಃ ಸಾಕ್ಷಿ ಹೇಳಿದ್ದಾರೆಂಬುದು‌ ನ್ಯಾಯಾಲಯದ ಗಮನದಲ್ಲೇ‌ ಇದೆ. ಆದರೂ ಮಂಗಳವಾರದ ದಿನ ನ್ಯಾಯಾಲಯವು ಅವರನ್ನೆಲ್ಲಾ ಖುಲಾಸೆಗೊಳಿಸಿರುವುದಕ್ಕೆ ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿ ತೀವ್ರ ಆತಂಕವನ್ನು ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೇ ಇಲ್ಲಿ ಸರಕಾರದ ವೈಪಲ್ಯವಿದೆ ಎಂದು ಸಂಘಟನೆ ಅಭಿಪ್ರಾಯ ಪಟ್ಟಿದೆ.

ಮಹಿಳಾ ಸ್ವಾತಂತ್ರ್ಯದ ವಿರೋಧೀ, ಪ್ರಗತಿ ವಿರೋಧಿ ಹಿಂದುತ್ವ ವಾದವನ್ನು ಮುಂದೊತ್ತಲು ಪ್ರಯತ್ನ ಮಾಡುತ್ತಿರುವ ಶಕ್ತಿಗಳಿಂದ ಈ ದಾಳಿ ನಡೆದಿದ್ದು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಂದು ಆ ಘಟನೆ ನಡೆದ ನಂತರ ಸ್ಥಳಕ್ಕೆ ಆಗಮಿಸಿದ್ದ ಪೋಲೀಸರು ಹಲ್ಲೆ ಮಾಡಿದವರನ್ನು ಬಂಧಿಸುವ ಬದಲು ಹಲ್ಲೆಗೊಳಗಾದವರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದವರನ್ನು ಹೊರಗೆ ಕಳಿಸಿದ್ದ ಬಗ್ಗೆ ಅಂದಿನ ದಿನಗಳಲ್ಲೇ ತೀವ್ರ ಚರ್ಚೆಗೆ ಒಳಪಟ್ಟಿತ್ತು.

ಈ ಎಲ್ಲ ದೃಶ್ಯಾವಳಿಗಳು ದೇಶಾದ್ಯಂತ ಎಲ್ಲ ಎಲೆಕ್ಟ್ರಾನಿಕ್ ಮಾದ್ಯಮಗಳಲ್ಲಿ ಬಿತ್ತರಗೊಂಡಿದ್ದವು. ಆದಾಗ್ಯು ಆರೋಪಿಗಳು ಖುಲಾಸೆಯಾಗುತ್ತಾರೆಂದರೆ ಇದು ಸರ್ಕಾರ ಮತ್ತು ಪೋಲೀಸ್ ಇಲಾಖೆಯ ವೈಫಲ್ಯವೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿಯು ಅಭಿಪ್ರಾಯ ಪಟ್ಟಿದೆ.

ಅಪರಾಧಿಗಳಿಗೆ ಶಿಕ್ಷೆಯ ಬದಲು ರಕ್ಷಣೆ ನೀಡುವಂತೆ ಭಾಸವಾಗುತ್ತಿರುವ ಈ ನಡೆಯನ್ನು ಸರಿಪಡಿಸಲು ಸರ್ಕಾರ ಮೇಲ್ಮನವಿ ಸಲ್ಲಿಸಿ ಯುವತಿಯರ ಮೇಲೆ ದೈಹಿಕ ಹಾಗೂ ಸಾಂವಿಧಾನಿಕ ಹಲ್ಲೆ ಮಾಡಿದವರನ್ನು ಕಾನೂನಿನ ಕುಣಿಕೆಗೆ ಸಿಲುಕಿಸಿ ಅವರ ಅಪರಾಧ ಸಾಬೀತು ಪಡಿಸಿ ನ್ಯಾಯದ ಪರವಾಗಿ ನಿಲ್ಲಬೇಕೆಂದು ಸಂಘಟನೆ ಮುಖ್ಯಸ್ಥರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದಿಲ್ಲದಿದ್ದರೆ, ಈಗಾಗಲೇ ಮಹಿಳೆಯರು, ಯುವತಿಯರ ವಿರುದ್ಧ ಅನಿಯಂತ್ರಿತವಾಗಿ ಘಟಿಸುತ್ತಿರುವ ದೌರ್ಜನ್ಯ ಗಳು ಇನ್ನಷ್ಟು ಹೆಚ್ಚುತ್ತವೆ. ಸರಕಾರ ಈ ಕೂಡಲೇ ಮೇಲ್ಮನವಿ ಸಲ್ಲಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version