ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ಟೋಬರ್ 10 ರಂದು ಜಂತರ್ ಮಂತರ್‌ಗೆ 5 ಲಕ್ಷ ಬಜರಂಗದಳ ಕಾರ್ಯಕರ್ತರ ಲಗ್ಗೆ? ವೈರಲ್ ಪೋಸ್ಟ್‌ಗಳ ಹಿಂದಿನ ಅಸಲಿಯತ್ತೇನು?

P

Peepal Media • ದೇಶ

• 1 ನಿಮಿಷದ ಓದು

ಅಕ್ಟೋಬರ್ 10 ರಂದು ಜಂತರ್ ಮಂತರ್‌ಗೆ 5 ಲಕ್ಷ ಬಜರಂಗದಳ ಕಾರ್ಯಕರ್ತರ ಲಗ್ಗೆ? ವೈರಲ್ ಪೋಸ್ಟ್‌ಗಳ ಹಿಂದಿನ ಅಸಲಿಯತ್ತೇನು?

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10 ರಂದು ಬಜರಂಗದಳ ಸೇರಿದಂತೆ ಆರ್‌ಎಸ್‌ಎಸ್ ಮತ್ತು ವಿಶ್ವಹಿಂದೂ ಪರಿಷತ್ ಬೆಂಬಲಿತ 5 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಜಮಾಯಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ವರದಿಗಳು ಸಂಪೂರ್ಣ ಆಧಾರರಹಿತವಾಗಿದ್ದು, ಇಂತಹ ಯಾವುದೇ ಬೃಹತ್ ಜಮಾವಣೆ ಅಧಿಕೃತವಾಗಿ ದೃಢಪಟ್ಟಿಲ್ಲ ಎಂಬುದು ಸ್ಪಷ್ಟವಾಗಿದೆ.

ಅಕ್ಟೋಬರ್ 7 ರ ರಾತ್ರಿ ಕೆಲ ಆಯ್ದ ಖಾತೆಗಳು ಸಮನ್ವಯದಿಂದ ಈ ಪೋಸ್ಟ್‌ಗಳನ್ನು ಹಂಚಿಕೊಂಡಿವೆ. “ದೇಶವನ್ನು ಅರಾಜಕತೆಯಿಂದ ರಕ್ಷಿಸಲು 5 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಅಕ್ಟೋಬರ್ 10 ರಂದು ಜಂತರ್ ಮಂತರ್ ತಲುಪಲಿದ್ದು, ಇದು ಐತಿಹಾಸಿಕ ದಿನವಾಗಲಿದೆ” ಎಂದು ಒಂದೇ ಮಾದರಿಯ ಸಂದೇಶಗಳನ್ನು ಹರಡಲಾಗಿತ್ತು. ಈ ಪೋಸ್ಟ್‌ಗಳೊಂದಿಗೆ ರಾತ್ರಿಯ ವೇಳೆ ಜನಸಾಗರ, ಕೆಂಪು ಧ್ವಜಗಳು ಹಾಗೂ ಪಟಾಕಿ ಸಿಡಿಸುವ ದೃಶ್ಯಗಳಿರುವ ವಿಡಿಯೋಗಳನ್ನು ಲಗತ್ತಿಸಲಾಗಿತ್ತು.

ಆದರೆ, ಫ್ಯಾಕ್ಟ್-ಚೆಕ್ ತಂಡಗಳು ಹಾಗೂ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸಿದಾಗ, ಈ ವಿಡಿಯೋಗಳು ಈ ಹಿಂದಿನ ಹಳೆಯ ಧಾರ್ಮಿಕ ಸಮಾರಂಭಗಳ ಮರುಬಳಕೆಯಾಗಿದ್ದು, ಜಂತರ್ ಮಂತರ್‌ಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿದುಬಂದಿದೆ. ಬಜರಂಗದಳವಾಗಲಿ ಅಥವಾ ಆರ್‌ಎಸ್‌ಎಸ್-ವಿಹಿಂಪ ಸಂಘಟನೆಗಳಾಗಲಿ ಇಂತಹ ಪ್ರತಿಭಟನೆ ಅಥವಾ ಸಮಾವೇಶದ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಅಲ್ಲದೆ, ಜಂತರ್ ಮಂತರ್ ಬಳಿ ಅಂತಹ ಯಾವುದೇ ಅಸಾಮಾನ್ಯ ಪಡೆಗಳು ಬಂದಿಳಿದಿಲ್ಲ ಎಂದು ದೆಹಲಿ ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಅಕ್ಟೋಬರ್ 10 ರಂದು “ಜಂತರ್ ಮಂತರ್ 2.0” ಪ್ರತಿಭಟನೆಗೆ ಕರೆ ನೀಡಿದೆ. ಇದಕ್ಕೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಎದುರಾಳಿಗಳು 5 ಲಕ್ಷ ಕಾರ್ಯಕರ್ತರ ಸಮಾವೇಶದ ಸುಳ್ಳು ಕಥೆಯನ್ನು ಹಬ್ಬಿಸಿ ಗೊಂದಲ ಸೃಷ್ಟಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ, ಶಾಂತಿ ಸುವ್ಯವಸ್ಥೆ ಕಾಪಾಡಲು ದೆಹಲಿ ಪೊಲೀಸರು ಈಗಾಗಲೇ ಕಟ್ಟೆಚ್ಚರ ವಹಿಸಿದ್ದಾರೆ. ಜುಲೈ ತಿಂಗಳಲ್ಲಿ ನಡೆದ ಧರಣಿ ವೇಳೆ ಗಲಭೆ ಎಬ್ಬಿಸಿದ್ದ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ಸುಮಾರು 2,800 ಜನರನ್ನು ಗುರುತಿಸಿ ‘ವಾಚ್ ಲಿಸ್ಟ್’ನಲ್ಲಿ ಇರಿಸಲಾಗಿದ್ದು, ಅವರು ನಗರ ಪ್ರವೇಶಿಸದಂತೆ ಕಣ್ಗಾವಲು ಇರಿಸಲಾಗಿದೆ. ಜೊತೆಗೆ ಜಂತರ್ ಮಂತರ್ ಸುತ್ತಮುತ್ತ ನಿಷೇಧಾಜ್ಞೆ ಮತ್ತು ಸಂಚಾರ ನಿರ್ಬಂಧಗಳನ್ನು ಹೇರಲು ಸಿದ್ಧತೆಗಳು ನಡೆದಿವೆ. ಹಳೆಯ ವಿಡಿಯೋಗಳನ್ನು ಹಾಕಿ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version