ಜೀವಂತ ಇಲಿಯನ್ನು ಸುಟ್ಟ ಆರೋಪ: ಝಾನ್ಸಿಯಲ್ಲಿ ನಾಲ್ಕು ಮುಸ್ಲಿಂ ಯುವಕರ ವಿರುದ್ಧ ಎಫ್‌ಐಆರ್
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಜೀವಂತ ಇಲಿಯೊಂದಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಲಿಂಕ್ ನಕಲಿಸಲಾಗಿದೆ ✓
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಜೀವಂತ ಇಲಿಯೊಂದಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಜೀವಂತ ಇಲಿಯೊಂದನ್ನು ಸುಟ್ಟ ಆರೋಪದ ಮೇಲೆ ಜುನೈದ್ ಖುರೇಷಿ, ಜೀಶಾನ್ ಖುರೇಷಿ, ಆಸಿಫ್ ಖುರೇಷಿ ಮತ್ತು ಶಫೀಕ್ ಎಂಬ ನಾಲ್ವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಝಾನ್ಸಿಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಓರ್ಚಾ ಗೇಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಜೀವಂತ ಇಲಿಯ ಮೇಲೆ ಸುಡುವ ವಸ್ತುವನ್ನು ಸುರಿದು ಬೆಂಕಿ ಹಚ್ಚಿರುವ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾಲ್ವರೂ ಓರ್ಚಾ ಗೇಟ್ ಪ್ರದೇಶದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಗರ ಪೊಲೀಸ್ ವಲಯಾಧಿಕಾರಿ ಪ್ರಿಯಾ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋವನ್ನು ಪೊಲೀಸರು ಗಮನಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Peepal Media
Peepal Media · ದೇಶ ವಿಭಾಗ