ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂದು ಮಂದಿರವೇ ಬೇಡ ಎಂದವರು ಇಂದು ಅದನ್ನಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

PPeepal Media

Peepal Media • ದೇಶ

• 1 ನಿಮಿಷದ ಓದು

ಅಂದು ಮಂದಿರವೇ ಬೇಡ ಎಂದವರು ಇಂದು ಅದನ್ನಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಅಯೋಧ್ಯೆ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದಲ್ಲಿ ಭಾಗಿಯಾದವರನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಜಂಟಿಯಾಗಿ ರಕ್ಷಿಸುತ್ತಿವೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಸಂಸದೆ ಕಂಗನಾ ರಣಾವತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಹಲವು ದಶಕಗಳ ಕಾಲ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದನ್ನೇ ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದ ಪಕ್ಷವೊಂದು, ಇಂದು ಅದೇ ವಿಷಯವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಅವರು ಮಂಡಿಪಡ್ಡಿದ್ದಾರೆ. ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲೂ ರಾಮ ಮಂದಿರ ನಿರ್ಮಿಸಬೇಕು ಎಂದು ಕಾಂಗ್ರೆಸ್ ವಿಚಿತ್ರ ರಾಗ ಹಾಡುತ್ತಿರುವುದನ್ನು ಅವರು ಇದೇ ವೇಳೆ ವಿಮರ್ಶಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಇಂತಹ ಇಬ್ಬಂದಿ ಮುಖದ ಬಗ್ಗೆ ದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದಿರುವ ಕಂಗನಾ, ಶತಮಾನಗಳ ಕಾಲ ನಡೆದ ನಿರಂತರ ಹೋರಾಟ ಮತ್ತು ಭಕ್ತರ ಶ್ರದ್ಧೆಯ ಫಲವಾಗಿ ಇಂದು ಭವ್ಯ ರಾಮ ಮಂದಿರ ನಿರ್ಮಾಣ ಸಾಧ್ಯವಾಗಿದೆ ಎಂದು ನೆನಪಿಸಿದ್ದಾರೆ. ಸನಾತನ ಸಂಸ್ಕೃತಿ, ಜನರ ನಂಬಿಕೆ ಮತ್ತು ದೇಶದ ಪರಂಪರೆಯನ್ನು ರಕ್ಷಿಸಲು ಬಿಜೆಪಿ ಯಾವಾಗಲೂ ಬದ್ಧವಾಗಿದೆ.

ನಮ್ಮ ಪಕ್ಷವು ಜನರ ಧಾರ್ಮಿಕ ನಂಬಿಕೆಗಳನ್ನು ಎಂದಿಗೂ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕಾಂಗ್ರೆಸ್ ತನ್ನ ಸ್ವಾರ್ಥ ಹಿತಾಸಕ್ತಿಗಾಗಿ ಧರ್ಮವನ್ನು ಒಂದು ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮ ಮಂದಿರದಂತಹ ಅತ್ಯಂತ ಪವಿತ್ರವಾದ ವಿಷಯವನ್ನು ರಾಜಕೀಯಕ್ಕೆ ಎಳೆದು ತರುತ್ತಿರುವುದು ಅತ್ಯಂತ ಸಿಗ್ಗುಗೇಡಿನ ಸಂಗತಿ ಎಂದು ಕಂಗನಾ ರಣಾವತ್ ಟೀಕಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು