ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಿತ್ತೂರು ಕರ್ನಾಟಕದಲ್ಲಿ ಭಾರಿ ಮಳೆ: ಮರ ಬಿದ್ದು ರೈಲು ಸಂಚಾರ ವ್ಯತ್ಯಯ, ಹಲವೆಡೆ ಆಸ್ತಿಪಾಸ್ತಿ ಹಾನಿ

PPeepal Media

Peepal Media ದೇಶ

• 1 ನಿಮಿಷದ ಓದು

ಕಿತ್ತೂರು ಕರ್ನಾಟಕದಲ್ಲಿ ಭಾರಿ ಮಳೆ: ಮರ ಬಿದ್ದು ರೈಲು ಸಂಚಾರ ವ್ಯತ್ಯಯ, ಹಲವೆಡೆ ಆಸ್ತಿಪಾಸ್ತಿ ಹಾನಿ

ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆ ಸುರಿದಿದೆ.

ಈ ಅಕಾಲಿಕ ಮಳೆಯಿಂದಾಗಿ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ರಸ್ತೆ, ರೈಲು ಸಂಚಾರ ಮತ್ತು ವಿದ್ಯುತ್ ಪೂರೈಕೆಗೆ ಭಾರಿ ವ್ಯತ್ಯಯ ಉಂಟಾಗಿದೆ.

ಖಾನಾಪುರ ತಾಲೂಕಿನ ನಾಗರಗಾಲಿ-ತಾವರಗಟ್ಟಿ ರೈಲ್ವೆ ನಿಲ್ದಾಣಗಳ ನಡುವೆ ಹಳಿಗಳ ಮೇಲೆ ಮರ ಬಿದ್ದಿದ್ದರಿಂದ ಕೊಲ್ಹಾಪುರ-ತಿರುಪತಿ ಹರಿಪ್ರಿಯಾ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳ ಸಂಚಾರಕ್ಕೆ ಅಡ್ಡಿಯಾಯಿತು. ಅಳ್ನಾವರ ಮತ್ತು ಲೋಂಡಾ ಮಾರ್ಗದ ರೈಲು ಸೇವೆ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ಬೆಂಗಳೂರು-ಸಾಂಗ್ಲಿ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ಅನ್ನು ಲೋಂಡಾ ನಿಲ್ದಾಣದಲ್ಲಿ ಮತ್ತು ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್ ಅನ್ನು ಖಾನಾಪುರ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು. ಹಳಿ ಮೇಲಿನ ಮರ ಮತ್ತು ಕಸವನ್ನು ತೆರವುಗೊಳಿಸಿದ ನಂತರವೇ ರೈಲು ಸಂಚಾರ ಪುನರಾರಂಭವಾಯಿತು.

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು, ಕಲಘಟಗಿ, ಕುಂದಗೋಳ ಮತ್ತು ಅಳ್ನಾವರದಲ್ಲಿ ಸಂಜೆ ಸುರಿದ ಮಳೆಯು ಈ ಭಾಗದ ಜನರಿಗೆ ಸುಡುವ ಬಿಸಿಲಿನಿಂದ ನಿರಾಳತೆ ನೀಡಿದೆ. ಆದರೆ ಗಾಳಿಯ ತೀವ್ರತೆಗೆ ಹಲವೆಡೆ ಹಾನಿಯೂ ಸಂಭವಿಸಿದೆ.

ಕರಾವಳಿ ಮತ್ತು ಉತ್ತರ ಕನ್ನಡದ ಮಲೆನಾಡು ಭಾಗದಲ್ಲಿ ಗುಡುಗಿನ ಆರ್ಭಟ ಜೋರಾಗಿತ್ತು. ಸದಾಶಿವಗಡ-ಔರಾದ್ ರಾಜ್ಯ ಹೆದ್ದಾರಿ ಮತ್ತು ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯು ಕೆಸರುಮಯವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ದಾವಣಗೆರೆ ಜಿಲ್ಲೆಯ ಮಾಯಕೊಂಡ ಸೇರಿದಂತೆ ಹಲವೆಡೆ ಸೋಮವಾರ ರಾತ್ರಿ ಸುರಿದ ಮಳೆಗೆ ನೂರಾರು ಅಡಿಕೆ ಮರಗಳು ಮತ್ತು ಬಾಳೆ ತೋಟಗಳು ನೆಲಸಮವಾಗಿವೆ. ಇತ್ತ ಕೊಡಗಿನ ನಾಪೋಕ್ಲು ಸಮೀಪವೂ ಮಂಗಳವಾರ ಸಂಜೆ ಬೃಹತ್ ಮರವೊಂದು ಉರುಳಿ ಬಿದ್ದಿದೆ.

ಮಳೆಯಿಂದ ಕಟ್ಟಡಗಳಿಗೆ ಹಾನಿಯಾಗುವ ಭೀತಿ ಹಿನ್ನೆಲೆಯಲ್ಲಿ, ರಾಜ್ಯದ ಆಸ್ಪತ್ರೆ ಕಟ್ಟಡಗಳ ಸುರಕ್ಷತೆಯನ್ನು ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು