ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧರ್ಮಸ್ಥಳ ಪ್ರಕರಣ: ಯೂಟ್ಯೂಬ್ ಚಾನೆಲ್ ಮೇಲಿನ ಪ್ರಸಾರ ನಿರ್ಬಂಧವನ್ನು ತೆರವುಗೊಳಿಸಿದ ಹೈಕೋರ್ಟ್

P

Peepal Media • ದೇಶ

• 1 ನಿಮಿಷದ ಓದು

ಧರ್ಮಸ್ಥಳ ಪ್ರಕರಣ: ಯೂಟ್ಯೂಬ್ ಚಾನೆಲ್ ಮೇಲಿನ ಪ್ರಸಾರ ನಿರ್ಬಂಧವನ್ನು ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಕುಡ್ಲ ಯ್ರಾಂಪೇಜ್’ ಎಂಬ ಯೂಟ್ಯೂಬ್ ಚಾನೆಲ್ ವಿರುದ್ಧ ಹೊರಡಿಸಿದ್ದ ಏಕಪಕ್ಷೀಯ (ex-parte) ಪ್ರಸಾರ ನಿರ್ಬಂಧದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ (ಆಗಸ್ಟ್ 1) ರದ್ದುಪಡಿಸಿದೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶ ಈಗ ಹೈಕೋರ್ಟ್ ನಲ್ಲಿ ವಜಾವಾಗಿದೆ. ಈ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ಕ್ಯಾಂಪೇಜ್’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.

2025ರ ಜುಲೈ 8ರಂದು ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ವಜಾಗೊಳಿಸಲಾಗಿದೆ. ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಸ್ ಕಳುಹಿಸಲಾಗುತ್ತಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿ ಮಾಡಿರುವ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು. ಸಿವಿಲ್ ದಾವೆ, ಕ್ರಿಮಿನಲ್‌ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಪೀಪಲ್‌ ಟಿವಿ ಸೇರಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರು 4,140 ಯೂಟ್ಯೂಬ್ ವಿಡಿಯೋಗಳು, 932 ಫೇಸ್‌ಬುಕ್ ಪೋಸ್ಟ್‌ಗಳು, 3,584 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳು, 108 ಸುದ್ದಿ ಲೇಖನಗಳು, 37 ರೆಡ್ಡಿಟ್ ಪೋಸ್ಟ್‌ಗಳು ಮತ್ತು 41 X ಪೋಸ್ಟ್‌ಗಳು ಸೇರಿ 8,842 ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಕೋರಿ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮೂಲ ದಾವೆ ಹೂಡಿದ್ದರು.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಇಂದು ಈ ಚಾನೆಲ್‌ಗೆ ಸಂಬಂಧಿಸಿದ ನಿರ್ಬಂಧದ ಆದೇಶವನ್ನು ರದ್ದುಗೊಳಿಸಿ, ಈ ವಿಷಯವನ್ನು ಮರುಪರಿಶೀಲಿಸುವಂತೆ ಸಿವಿಲ್ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದಾರೆಂದು ಲೈವ್‌ ಲಾ ವರದಿ ಮಾಡಿದೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version