ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಶ್ಮೀರದ ‘ವಿಶೇಷ ಸ್ಥಾನಮಾನ’ ರದ್ದತಿ ಕುರಿತು ಇಂದು ತೀರ್ಪು ನೀಡಲಿರುವ ಸುಪ್ರೀಂ ಕೋರ್ಟ್‌

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಕಾಶ್ಮೀರದ ‘ವಿಶೇಷ ಸ್ಥಾನಮಾನ’ ರದ್ದತಿ ಕುರಿತು ಇಂದು ತೀರ್ಪು ನೀಡಲಿರುವ ಸುಪ್ರೀಂ ಕೋರ್ಟ್‌

ಜಮ್ಮು ಮತ್ತು ಕಾಶ್ಮೀರದಲ್ಲಿನ 370 ನೇ ವಿಧಿಯನ್ನು ರದ್ದುಪಡಿಸಿದ ವಿಷಯವಾಗಿ ಹೂಡಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಸುಪ್ರೀಮ್‌ ಕೋರ್ಟ್‌ ತೀರ್ಪು ನೀಡಲಿದೆ.

ಆಗಸ್ಟ್ 5, 2019ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮತ್ತು ಸ್ವಾಯತ್ತತೆಯನ್ನು ಒದಗಿಸುವ 370 ನೇ ವಿಧಿಯನ್ನು ರದ್ದುಪಡಿಸಿದ ದಿನ. ಅದರ ನಂತರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಈ ತೀರ್ಪಿನ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗಳ ಕುರಿತು ಇಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ತೀರ್ಪು ನೀಡಲಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐದು ಸದಸ್ಯರ ಸಂವಿಧಾನ ಪೀಠದ ಇತರ ಸದಸ್ಯರಾಗಿದ್ದರು. ಈ ಪೀಠವು ಈ ಅರ್ಜಿಗಳ ಮೇಲೆ ಆಗಸ್ಟ್ 2, 2023 ರಿಂದ ಸುದೀರ್ಘ ವಿಚಾರಣೆಯನ್ನು ನಡೆಸಿತು. ಸೆಪ್ಟೆಂಬರ್ 5ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಸೋಮವಾರ (ಡಿಸೆಂಬರ್ 11) ತೀರ್ಪು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಅಧಿಕಾರಿಗಳು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಕೆಲವು ಮುಖಂಡರನ್ನು ಬಂಧಿಸಲಾಯಿತು. ಇತರರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು.

370ನೇ ವಿಧಿ ರದ್ದತಿ ಪರವಾಗಿ ತೀರ್ಪು ಬಂದರೂ ತಮ್ಮ ಪಕ್ಷ ಕಾನೂನು ಸುವ್ಯವಸ್ಥೆಗೆ ಭಂಗ ತರುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸ್ಪಷ್ಟಪಡಿಸಿದ್ದಾರೆ. ಕಾನೂನು ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಮಾತನಾಡಿ, ಕೇಂದ್ರದ ನಿರ್ಧಾರ ಕಾನೂನುಬಾಹಿರ ಎಂಬುದನ್ನು ಸುಪ್ರೀಂ ಕೋರ್ಟ್‌ನ ತೀರ್ಪು ಸ್ಪಷ್ಟಪಡಿಸಲಿದೆ ಎಂದಿದ್ದಾರೆ.

ಜನರ ಆಶೋತ್ತರಗಳಿಗೆ ತಕ್ಕಂತೆ ತೀರ್ಪು ಬರಬಹುದು ಎಂದು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು