ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಹಿ ಫೋರ್ಜರಿ ಪ್ರಕರಣ: ಸಿಐಡಿ ತನಿಖೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಕೋಲ್ಕತಾ ಹೈಕೋರ್ಟ್ ಆದೇಶ!

PPeepal Media

Peepal Media ದೇಶ

• 1 ನಿಮಿಷದ ಓದು

ಸಹಿ ಫೋರ್ಜರಿ ಪ್ರಕರಣ: ಸಿಐಡಿ ತನಿಖೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಕೋಲ್ಕತಾ ಹೈಕೋರ್ಟ್ ಆದೇಶ!

ಸಹಿ ಫೋರ್ಜರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಐಡಿ (CID) ತನಿಖೆಗೆ ಹಾಜರಾಗುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಕೋಲ್ಕತಾ ಹೈಕೋರ್ಟ್ ಗುರುವಾರ ಆದೇಶಿಸಿದೆ. ಆದರೆ, ಅವರು ತನಿಖೆಗೆ ಸಹಕರಿಸುವವರೆಗೂ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿರುವ ನ್ಯಾಯಾಲಯ, ಬಂಧನದಿಂದ ಮೂರು ವಾರಗಳ ಕಾಲ ಮಧ್ಯಂತರ ರಕ್ಷಣೆ ನೀಡಿದೆ.

ರಾಜ್ಯ ವಿಧಾನಸಭೆಯಲ್ಲಿ ಸೋವನ್‌ದೇವ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಪ್ರಸ್ತಾಪಿಸಿ ಮೇ 20 ರಂದು ಸ್ಪೀಕರ್‌ಗೆ ಸಲ್ಲಿಸಲಾಗಿದ್ದ ಪತ್ರದಲ್ಲಿ ತಮ್ಮ ಸಹಿಗಳನ್ನು ಫೋರ್ಜರಿ ಮಾಡಲಾಗಿದೆ ಎಂದು ಆರೋಪಿಸಿ ಟಿಎಂಸಿ ಶಾಸಕರಾದ ರಿತಬ್ರತ ಬ್ಯಾನರ್ಜಿ ಮತ್ತು ಸಂದೀಪನ್ ಸಾಹಾ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್‌ಐಆರ್ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಅಭಿಷೇಕ್ ಬ್ಯಾನರ್ಜಿ ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಆದರೆ, ಅನಾರೋಗ್ಯದ ಕಾರಣ ನೀಡಿ ವೈಯಕ್ತಿಕವಾಗಿ ಹಾಜರಾಗಲು ತಮಗೆ 15 ದಿನಗಳ ಕಾಲಾವಕಾಶ ಬೇಕು ಎಂದು ಅಭಿಷೇಕ್ ಕೋರಿದ್ದರು.

ಇದೇ ವೇಳೆ, ಜೂನ್ 9 ರಂದು ಕೋಲ್ಕತಾದ ಕಾಳೀಘಾಟ್ ಪ್ರದೇಶದಲ್ಲಿರುವ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಪಕ್ಕದಲ್ಲಿರುವ ಟಿಎಂಸಿ ಪ್ರಧಾನ ಕಚೇರಿಯ ಮೇಲೆ ಸಿಐಡಿ ನಡೆಸಿದ್ದ ದಾಳಿಯ ಕಾನೂನುಬದ್ಧತೆಯನ್ನು ಸವಾಲು ಮಾಡಿ ಟಿಎಂಸಿ ಬುಧವಾರ ಕೋಲ್ಕತಾ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಹಾಜರಾಗುವಂತೆ ಅಭಿಷೇಕ್ ಅವರಿಗೆ ನಿರ್ದೇಶನ ನೀಡಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು