ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹತ್ರಾಸ್: ಕಾಲ್ತುಳಿತ ದುರಂತ ನಡೆದಲ್ಲಿಗೆ ಭೇಟಿ ನೀಡಲಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ

PPeepal Media

Peepal Media ದೇಶ

• 1 ನಿಮಿಷದ ಓದು

ಹತ್ರಾಸ್: ಕಾಲ್ತುಳಿತ ದುರಂತ ನಡೆದಲ್ಲಿಗೆ ಭೇಟಿ ನೀಡಲಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ಯುಪಿಯಲ್ಲಿ ಹತ್ರಾಸ್ ಕಾಲ್ತುಳಿತಕ್ಕೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಗಳು ಮತ್ತು ಸಂತ್ರಸ್ತರನ್ನು ಭೇಟಿಯಾಗಲಿದ್ದಾರೆ.

ರಾಹುಲ್ ಶೀಘ್ರದಲ್ಲೇ ಹತ್ರಾಸ್ ಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹತ್ರಾಸ್ ಭೇಟಿಗೆ ಯೋಜನೆ ರೂಪಿಸಲಾಗುತ್ತಿದೆ ಎಂದರು. ರಾಹುಲ್ ಹತ್ರಾಸ್ ಗೆ ತೆರಳಿ ಸಂತ್ರಸ್ತರೊಂದಿಗೆ ಮಾತನಾಡಲಿದ್ದಾರೆ ಎಂದು ವೇಣುಗೋಪಾಲ್ ಬಹಿರಂಗಪಡಿಸಿದ್ದಾರೆ.

ಏತನ್ಮಧ್ಯೆ, ಮಂಗಳವಾರ ಭೋಲೆ ಬಾಬಾ ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸತ್ತವರ ಸಂಖ್ಯೆ 121 ಕ್ಕೆ ತಲುಪಿದೆ. ಹಲವು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಈ ಘಟನೆಯ ಆರೋಪಿ ಭೋಲೆ ಬಾಬಾ ವಿರುದ್ಧ ಆಗ್ರಾ, ಇಟಾವಾ, ಕಾಸ್‌ಗಂಜ್, ಫರೂಕಾಬಾದ್ ಮತ್ತು ದೂಸಾದಲ್ಲಿ ಐದು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 1997ರಲ್ಲಿ ಪ್ರಕರಣವೊಂದರಲ್ಲಿ ಬಂಧಿತನಾಗಿ ಕೆಲ ವರ್ಷ ಜೈಲು ವಾಸ ಅನುಭವಿಸಿದ್ದ ಎಂದು ಗೊತ್ತಾಗಿದೆ.

ಜೈಲಿನಿಂದ ಹೊರಬಂದ ನಂತರ ಅವರು ತಮ್ಮ ಗ್ರಾಮದಲ್ಲಿ ಆಶ್ರಮವನ್ನು ಪ್ರಾರಂಭಿಸಿದರು. ತನಗೆ ಗುರುವಿಲ್ಲ ಎಂದು ಹೇಳಿಕೊಳ್ಳುವ ಭೋಲೆ ಬಾಬಾ ಕೇಸರಿ ಬದಲು ಬಿಳಿ ಸೂಟು, ಬೂಟು, ಕಪ್ಪು ಕನ್ನಡಕ ಧರಿಸಿ ವಿಶೇಷವಾಗಿ ಕಾಣುತ್ತಿದ್ದ.

ಅದರಲ್ಲೂ ತಾನು ನಡೆಸಿದ ಸತ್ಸಂಗಗಳಲ್ಲಿ ನೀಡಿದ ಪವಿತ್ರ ಜಲವನ್ನು ಸೇವಿಸಿದರೆ ಭಕ್ತರ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ಪ್ರಚಾರ ಮಾಡಿದ್ದ. ತನ್ನ ಪಾದದ ಧೂಳು ಕೂಡ ಪವಿತ್ರ, ಬಾಬಾ ನಡೆದಾಡಿದ ಮಣ್ಣನ್ನು ಮುಟ್ಟಿದರೆ ಅದೃಷ್ಟ ಒಲಿಯುತ್ತದೆ ಎಂಬ ನಂಬಿಕೆಯನ್ನು ಹುಟ್ಟು ಹಾಕಿದ್ದ. ಇವುಗಳನ್ನು ನಂಬಿ ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭೋಲೆ ಬಾಬಾನ ದರ್ಶನಕ್ಕೆ ಜನರು ಬರುತ್ತಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು