ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಕೈ ನತ್ತ ಮಾಧುಸ್ವಾಮಿ: ಮುದ್ದಹನುಮೇಗೌಡರ ಬದಲು ಮಾಧುಸ್ವಾಮಿಯವರಿಗೆ ಟಿಕೆಟ್‌?

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಕೈ ನತ್ತ ಮಾಧುಸ್ವಾಮಿ: ಮುದ್ದಹನುಮೇಗೌಡರ ಬದಲು ಮಾಧುಸ್ವಾಮಿಯವರಿಗೆ ಟಿಕೆಟ್‌?

ತುಮಕೂರು: ಕಳೆದ ವಿಧಾನಸಭೆ ಸೋಲಿನ ನಂತರ ಲೋಕಸಭೆಗೆ ಸ್ಪರ್ಧಿಸಲು ಸಜ್ಜಾಗಿದ್ದ ಬಿಜೆಪಿ ಮಾಜಿ ಸಚಿವ ಮಾಧುಸ್ವಾಮಿಯವರಿಗೆ ಈ ಸಲ ಬಿಜೆಪಿಯಿಂದ ಟಿಕೇಟ್‌ ಕೈ ತಪ್ಪಿದೆ. ಅಸಮಾಧಾನಗೊಂಡಿರುವ ಮಾಧುಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

ಮಾಧುಸ್ವಾಮಿ ಕಾಂಗ್ರೆಸ್‌ಗೆ ಬಂದರೆ ನಿಯೋಜಿತ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಬದಲಾಗಿ ಮಾಧುಸ್ವಾಮಿಯವರನ್ನೇ ಕಣಕ್ಕೆ ಇಳಿಸುವ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚಿಂತನೆ ನಡೆದಿದೆ. ಲೋಕಸಭೆಗೆ ಟಿಕೆಟ್ ಕೊಡುವುದಾದರೆ ಪಕ್ಷ ಸೇರುವುದಾಗಿ ಮಾಧುಸ್ವಾಮಿ ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

ಮಾಧುಸ್ವಾಮಿಯವರು ಲೋಕಸಭೆ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದರು. ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೊಡುವುದಕ್ಕೆ ತೀವ್ರ ವಿರೋಧ ಸಹ ವ್ಯಕ್ತಪಡಿಸಿದ್ದರು. ಜಿಲ್ಲೆಯವರನ್ನು ಬಿಟ್ಟು ಹೊರಗಿನವರಿಗೆ ಹೇಗೆ ಅವಕಾಶ ಕೊಡುತ್ತಿರಿ ಎಂದು ಬಹಿರಂಗವಾಗಿಯೆ ಬಿಜೆಪಿ ವರಿಷ್ಠರನ್ನು ಪ್ರಶ್ನಿಸಿದ್ದರು. ಸೋಮಣ್ಣ ಹೆಸರು ಪ್ರಕಟವಾಗುತ್ತಿದ್ದಂತೆ ಮತ್ತಷ್ಟು ಆಕ್ರೋಶ ಹೊರ ಹಾಕಿದ್ದರು. ಸೋಮಣ್ಣ ಅವರು ಮನವೊಲಿಸಲು ಮನೆಗೆ ಬರಲು ಸಿದ್ದರಾದಾಗ ಮಾಧುಸ್ವಾಮಿ ಕುಪಿತರಾಗಿ ತಮ್ಮ ಮನೆಗೆ ಬರುವುದು ಬೇಡ ಎಂದು ಕಡ್ಡಿ ತುಂಡಾದಂತೆ ಮಾತನಾಡಿದ್ದರು ಎನ್ನಲಾಗಿದೆ.

 ಇದೇ ಅವಕಾಶವನ್ನು ಬಳಸಿಕೊಂಡ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೂರವಾಣಿ ಮೂಲಕ ಸಂಪರ್ಕಿಸಿ ಆಹ್ವಾನ ನೀಡಿದ್ದಾರೆ. ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮಾಧುಸ್ವಾಮಿಯವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತಿತರ ನಾಯಕರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆ.ಸಿ.ಪುರದಲ್ಲಿರುವ ಮಾಧುಸ್ವಾಮಿ ಮನೆಗೆ ಸೋಮವಾರ ರಾತ್ರಿ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರು. ‘ಇಷ್ಟೆಲ್ಲ ಆದಮೇಲೆ ನಿಮ್ಮ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಇರುವುದಿಲ್ಲ’ ಎಂದು ನೇರವಾಗಿಯೇ ಹೇಳಿ ಕಳುಹಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

‘ಒಂದೆರಡು ದಿನ ಕಾದು ನೋಡಿ. ಎಲ್ಲವೂ ಒಳ್ಳೆಯದೇ ಆಗಲಿದೆ’ ಎಂದು ತಮ್ಮ ಬೆಂಬಲಿಗರು, ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಮುದ್ದಹನುಮೇಗೌಡ ಅವರಿಗೆ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅವಕಾಶ ಮಾಡಿಕೊಟ್ಟು, ಮಾಧುಸ್ವಾಮಿ ಅವರಿಗೆ ತುಮಕೂರು ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ ನಡೆದಿದೆ ಎನ್ನಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು