ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾರಾಷ್ಟ್ರ: ಶರದ್ ಪವಾರ್‌ ಗುಂಪಿಗೆ ಇಬ್ಬರು ಶಾಸಕರು ವಾಪಸ್‌

P

Peepal Media Desk • ದೇಶ

• 1 ನಿಮಿಷದ ಓದು

ಮಹಾರಾಷ್ಟ್ರ: ಶರದ್ ಪವಾರ್‌ ಗುಂಪಿಗೆ ಇಬ್ಬರು ಶಾಸಕರು ವಾಪಸ್‌

ಮುಂಬೈ: ಏಕನಾಥ್ ಶಿಂಧೆ- ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಇಬ್ಬರು ಶಾಸಕರು – ಸತಾರಾ ಶಾಸಕ ಮಕ್ರಂದ್ ಪಾಟೀಲ್ ಮತ್ತು ಉತ್ತರ ಕರಡ್ ಶಾಸಕ ಬಾಳಾಸಾಹೇಬ್ ಪಾಟೀಲ್ – ಶರದ್ ಪವಾರ್ ಅವರ ಪಾಳಯಕ್ಕೆ ಮರಳಿದ್ದಾರೆ. ಪಕ್ಷದ ಎರಡೂ ಬಣಗಳು ಪರಸ್ಪರ ತಂತ್ರಗಳನ್ನು ರೂಪಿಸುತ್ತಿದ್ದು ಒಂದು ಬಣ ಇನ್ನೊಂದು ಬಣದ ನಾಯಕರ ಮೇಲೆ ಕ್ರಮ ಕೈಗೊಳ್ಳುತ್ತಿದೆ.

ಶಿರೋಲ್‌ ಲೋಕಸಭಾ ಕ್ಷೇತ್ರದ ಸಂಸದ ಅಮೋಲ್‌ ಕೋಲ್ಹೆ ಕೂಡಾ ಪವಾರ್‌ ಗುಂಪಿಗೆ ಮರಳುವುದಾಗಿ ರಾಜಭವನದಲ್ಲಿ ತಿಳಿಸಿದರು.

ತನ್ನ ಅಳಿಯನ ಗುಂಪಿನ ವಿರುದ್ಧದ ತನ್ನ ಮೊದಲ ವಾಗ್ದಾಳಿಯಲ್ಲಿ, ಪವಾರ್ ಹಿರಿಯ ಸಂಸದರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತಟ್ಕರೆ ಅವರನ್ನು ಪಕ್ಷದಿಂದ ವಜಾಗೊಳಿಸಿದ್ದರು.

ಇದಕ್ಕೆ ಪ್ರತಿಯಾಗಿ ಅಜಿತ್ ಅವರ ಗುಂಪು ಜಯಂತ್ ಪಾಟೀಲ್ ಅವರನ್ನು ಎನ್‌ಸಿಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿತ್ತು

ತಟ್ಕರೆ ಅವರ ಪುತ್ರಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದರು.

ಶರದ್ ಪವಾರ್ ಗುಂಪು ಅಜಿತ್ ಮತ್ತು ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಇತರ ಎಂಟು ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ವಿಧಾನಸಭಾ ಸ್ಪೀಕರ್‌ಗೆ ಎರಡು ಅರ್ಜಿಗಳನ್ನು ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ಪ್ರತಿಪಕ್ಷದ ನಾಯಕರಾಗಿ ನೇಮಕಗೊಂಡ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವ್ಹಾದ್ ಅವರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ಅಜಿತ್ ನೇತೃತ್ವದ ಕೂಟವು ಸ್ಪೀಕರ್‌ ಅವರಲ್ಲಿ ಮನವಿ ಮಾಡಿದೆ.

ಒಟ್ಟಿನಲ್ಲಿ ಎನ್‌ಸಿಪಿಯೊಳಗಿನ ಬಣ ರಾಜಕೀಯ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸತೊಡಗಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version