ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಡೀಪಾರು ಆದೇಶ: ಮಹೇಶ್‌ ಶೆಟ್ಟಿ ತಿಮರೋಡಿಯವರ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

P

Peepal Media • ದೇಶ

• 1 ನಿಮಿಷದ ಓದು

ಗಡೀಪಾರು ಆದೇಶ: ಮಹೇಶ್‌ ಶೆಟ್ಟಿ ತಿಮರೋಡಿಯವರ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೆಹಲಿ: ತಮ್ಮ ವಿರುದ್ಧ ಹೊರಡಿಸಲಾಗಿರುವ ಗಡೀಪಾರು ಆದೇಶವನ್ನು ಪ್ರಶ್ನಿಸಿ ಧರ್ಮಸ್ಥಳದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಸೂಕ್ತ ಕಾನೂನು ಪ್ರಾಧಿಕಾರವನ್ನೇ ಸಂಪರ್ಕಿಸುವಂತೆ ಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು, ತಿಮರೋಡಿ ಅವರ ಸವಾಲನ್ನು ಈ ಹಿಂದೆ ಹೈಕೋರ್ಟ್ ಈಗಾಗಲೇ ವಜಾಗೊಳಿಸಿರುವುದನ್ನು ಗಮನಿಸಿತು. ಸೂಕ್ತ ಪ್ರಾಧಿಕಾರದ ಮುಂದೆ ಇರುವ ಕಾನೂನು ಪರಿಹಾರಗಳನ್ನು ಬಳಸಿಕೊಳ್ಳುವ ಬದಲು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಏಕೆ ಬಂದಿದ್ದೀರಿ ಎಂದು ಪೀಠವು ಪ್ರಶ್ನಿಸಿತು.

ವಿಚಾರಣೆ ವೇಳೆ ತಿಮರೋಡಿ ಪರ ವಕೀಲರು, ಈ ಗಡೀಪಾರು ಪ್ರಕರಣವನ್ನು ಸೌಜನ್ಯ ಪ್ರಕರಣಕ್ಕೆ ಲಿಂಕ್ ಮಾಡಲು ಪ್ರಯತ್ನಿಸಿದರು. ಸ್ಥಳೀಯ ದೇವಸ್ಥಾನಕ್ಕೆ ಸಂಬಂಧಿಸಿದ ವ್ಯಕ್ತಿಗಳು ತಮ್ಮನ್ನು ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದ್ದಾರೆ ಎಂದು ವಾದಿಸಿದರು. ಆದರೆ ಈ ವಾದವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಸಾರ್ವಜನಿಕ ಭಾವನೆಗಳನ್ನು ಕೆರಳಿಸಲು ಅಥವಾ ಸೃಷ್ಟಿಸಲು ಸಂಬಂಧವಿಲ್ಲದ ವಿಷಯಗಳನ್ನು ಬಳಸಿಕೊಳ್ಳಬಾರದು ಎಂದು ತೀಕ್ಷ್ಣವಾಗಿ ಹೇಳಿತು. ಗಡೀಪಾರು ಆದೇಶದ ಬಗ್ಗೆ ಇನ್ನೂ ಅಸಮಾಧಾನವಿದ್ದರೆ, ಸಂಬಂಧಪಟ್ಟ ಮೇಲ್ಮನವಿ ಪ್ರಾಧಿಕಾರದ ಮುಂದೆ ಅಪೀಲು ಸಲ್ಲಿಸಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿತು.

ಯಾವುದೇ ಪರಿಹಾರ ನೀಡದೆ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಊಹಾತ್ಮಕವಾಗಿ ಪ್ರಕರಣಗಳನ್ನು ದಾಖಲಿಸುವವರ ವಿರುದ್ಧ ಎಚ್ಚರಿಕೆ ನೀಡಿತು. “ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ. ಒಮ್ಮೆ ಬಾಜಿ ಕಟ್ಟಿದರೆ ಮುಗಿಯಿತು. ಇಲ್ಲಿ ಜೂಜಾಟ ನಡೆಸಬೇಡಿ” ಎಂದು ಪೀಠವು ಎಚ್ಚರಿಸಿತು.

ಮಹೇಶ್ ಶೆಟ್ಟಿ ತಿಮರೋಡಿ ಅವರು 2025 ರಲ್ಲಿ ಬೆಳ್ತಂಗಡಿಯ ವಿಶೇಷ ತನಿಖಾ ದಳದ (SIT) ಕಚೇರಿಯಲ್ಲಿ ದೂರು ದಾಖಲಿಸಿದ್ದರು. 2006 ಮತ್ತು 2010 ರ ನಡುವೆ ಧರ್ಮಸ್ಥಳ ಗ್ರಾಮದ ವಿವಿಧ ಲಾಡ್ಜ್‌ಗಳಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಈ ನಾಲ್ಕು ಅಸಹಜ ಸಾವುಗಳು ಕೊಲೆ ಪ್ರಕರಣಗಳಾಗಿರುವ ಸಾಧ್ಯತೆಯಿದೆ, ಆದ್ದರಿಂದ ಎಸ್‌ಐಟಿ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆರೋಪಿಸಿದ್ದರು. ಆದರೆ, ತದನಂತರದ ತನಿಖೆಯಲ್ಲಿ ಎಸ್‌ಐಟಿ ಈ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಪತ್ತೆಹಚ್ಚಿತ್ತು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version