ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬೆಂಗಾಲಿ ಮಾತನಾಡಿದ್ದಕ್ಕೆ ಪುಣೆಯಲ್ಲಿ ವಲಸೆ ಕಾರ್ಮಿಕನ ಹತ್ಯೆ: ಇದು ‘ದ್ವೇಷ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

PPeepal Media

Peepal Media ದೇಶ

• 1 ನಿಮಿಷದ ಓದು

ಬೆಂಗಾಲಿ ಮಾತನಾಡಿದ್ದಕ್ಕೆ ಪುಣೆಯಲ್ಲಿ ವಲಸೆ ಕಾರ್ಮಿಕನ ಹತ್ಯೆ: ಇದು ‘ದ್ವೇಷ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪುಣೆಯಲ್ಲಿ 24 ವರ್ಷದ ಬೆಂಗಾಲಿ ವಲಸೆ ಕಾರ್ಮಿಕನ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದು, ಅಪರಾಧಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಹತ್ಯೆಯು ಕೇವಲ ಬೆಂಗಾಲಿ ಮಾತನಾಡಿದ್ದಕ್ಕಾಗಿ ನಡೆದಿದೆ ಎಂದು ಪ್ರತಿಪಾದಿಸಿರುವ ಅವರು, ಇದೊಂದು ದ್ವೇಷದ ಅಪರಾಧ‌ ಎಂದು ಬಣ್ಣಿಸಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಹತ್ಯೆಗೀಡಾದ ಪುರುಲಿಯಾ ಜಿಲ್ಲೆಯ ಬಂದ್ವಾನ್ ಮೂಲದ ಸುಖೇನ್ ಮಹತೋ ಅವರ ಕುಟುಂಬದ ಏಕೈಕ ಆಧಾರವಾಗಿದ್ದರು ಎಂದು ಮಮತಾ ಬ್ಯಾನರ್ಜಿ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಯುವಕನ ಭಾಷೆ, ಗುರುತು ಮತ್ತು ಮೂಲದ ಕಾರಣಕ್ಕಾಗಿ ಆತನನ್ನು ಬೇಟೆಯಾಡಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ. ಸಮಾಜದಲ್ಲಿ ಪರಕೀಯ ದ್ವೇಷವನ್ನು ಅಸ್ತ್ರವನ್ನಾಗಿ ಬಳಸಿ ಅಮಾಯಕರನ್ನು ಗುರಿ ಮಾಡುತ್ತಿರುವ ವಾತಾವರಣದ ನೇರ ಪರಿಣಾಮವೇ ಈ ಹತ್ಯೆ ಎಂದು ಅವರು ಆರೋಪಿಸಿದ್ದಾರೆ. ಸುಖೇನ್ ಕುಟುಂಬಕ್ಕೆ ನ್ಯಾಯ ಒದಗಿಸಲು ಪಶ್ಚಿಮ ಬಂಗಾಳ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಈ ಹಿಂದೆಯೂ ಕೂಡ ಮಮತಾ ಬ್ಯಾನರ್ಜಿ ಅವರು ದೇಶದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ವರದಿಗಳ ಪ್ರಕಾರ, ಸುಖೇನ್ ಮಹತೋ ಅವರ ಮೃತದೇಹವು ಪುಣೆಯ ಶಿಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊರೆಗಾಂವ್ ಭೀಮಾ ಪ್ರದೇಶದಲ್ಲಿ ಪತ್ತೆಯಾಗಿದೆ. ಅವರು ಬೆಂಗಾಲಿ ಮಾತನಾಡಿದ್ದಕ್ಕಾಗಿ ಹಲ್ಲೆ ನಡೆಸಿ ಕೊಲ್ಲಲಾಗಿದೆ ಎಂದು ದೃಢಪಡದ ವರದಿಗಳು ತಿಳಿಸಿದ್ದು, ಈ ಸಂಬಂಧ ಅವರ ಸಹೋದರ ತುಳಸಿರಾಮ್ ಮಹತೋ ಶಿಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು