ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರ ಸಾವು, ಮುಖ್ಯಮಂತ್ರಿ ನಿವಾಸದ ಎದುರು ಶವಗಳನ್ನಿಟ್ಟು ಆಕ್ರೋಶ

P

Peepal Media • ದೇಶ

• 1 ನಿಮಿಷದ ಓದು

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ನಾಲ್ವರ ಸಾವು, ಮುಖ್ಯಮಂತ್ರಿ ನಿವಾಸದ ಎದುರು ಶವಗಳನ್ನಿಟ್ಟು ಆಕ್ರೋಶ

ಇಂಫಾಲ್: ಸುಮಾರು ನಾಲ್ಕು ವರ್ಷಗಳು ಕಳೆದರೂ ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದ ಬೆಂಕಿ ತಣ್ಣಗಾಗಿಲ್ಲ. ಸೋಮವಾರ ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಹಿಂಸಾಚಾರದ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಮತ್ತಿಬ್ಬರು ಅಥವಾ ಮೂವರು ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ.

ಈ ಭೀಕರ ಘಟನೆಯನ್ನು ಖಂಡಿಸಿ ರೊಚ್ಚಿಗೆದ್ದ ಸ್ಥಳೀಯರು ಎರಡು ಮೃತದೇಹಗಳನ್ನು ಮುಖ್ಯಮಂತ್ರಿ ನಿವಾಸದ ಮುಂಭಾಗಕ್ಕೆ ತಂದು ಧರಣಿ ನಡೆಸಿದ್ದರಿಂದ ರಾಜಧಾನಿ ಇಂಫಾಲ್‌ನಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾನುವಾರ ರಾತ್ರಿ ಮೈತೇಯಿ ಮತ್ತು ಮುಸ್ಲಿಂ ಸಮುದಾಯಗಳು ವಾಸಿಸುವ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದ ವೇಳೆ ಆರಂಭವಾದ ಕಲಹ ಕಲ್ಲು ತೂರಾಟ ಮತ್ತು ಗುಂಡಿನ ಚಕಮಕಿಗೆ ತಿರುಗಿತ್ತು. ಈ ಸಂದರ್ಭದಲ್ಲಿ ಗುಂಡೇಟು ತಗುಲಿ 24 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದನು.

ಇದರ ಬೆನ್ನಲ್ಲೇ ಸೋಮವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಇಂಫಾಲ್ ಪೂರ್ವ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಗಡಿ ಸಮೀಪದ ಖಮೇನ್‌ಲೋಕ್ ಅರಣ್ಯ ಪ್ರದೇಶಕ್ಕೆ ಸೌದೆ ತರಲು ತೆರಳಿದ್ದ ಸುಮಾರು 30 ಗ್ರಾಮಸ್ಥರ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಅರುಬಮ್ ರೋನಿಲ್ (35), ಲೈರೆನ್‌ಲಕ್‌ಪಾಮ್ ಇನಾಬಿ (44) ಮತ್ತು ಕ್ಷೇತ್ರೀಮಯುಮ್ ಸುಶೀಲ್ (32) ಎಂಬುವವರು ಹತ್ಯೆಗೀಡಾಗಿದ್ದಾರೆ.

ಹತ್ಯೆಯಿಂದ ಆಕ್ರೋಶಗೊಂಡ ನೂರಾರು ಸ್ಥಳೀಯರು ಎರಡು ಮೃತದೇಹಗಳೊಂದಿಗೆ ಮುಖ್ಯಮಂತ್ರಿ ನಿವಾಸದತ್ತ ಮೆರವಣಿಗೆ ನಡೆಸಿ ಪ್ರತಿಭಟನೆ ಆರಂಭಿಸಿದರು. ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಹಾಗೂ ಲಘು ಲಾಠಿಪ್ರಹಾರ ನಡೆಸಿ, ಮೃತದೇಹಗಳನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ರವಾನಿಸಿದವು.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸ್ಥಳೀಯ ಶಾಸಕ ಥೋಕ್‌ಚೋಮ್ ಲೋಕೇಶ್ವರ್ ಸಿಂಗ್, ಗಡಿ ಭಾಗದಲ್ಲಿರುವ ಸಸ್ಪೆನ್ಷನ್ ಆಫ್ ಆಪರೇಷನ್ಸ್ (SoO) ಶಿಬಿರವನ್ನು ತಕ್ಷಣವೇ ತೆರವುಗೊಳಿಸಬೇಕು ಮತ್ತು ಉನ್ನತ ಮಟ್ಟದ ಭದ್ರತಾ ಪಡೆಗಳು ಶಾಂತಿ ಕಾಪಾಡಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version