ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಡವಾದರೂ ಪ್ರಾಮಾಣಿಕತೆ ಮತ್ತು ಸತ್ಯವೇ ಗೆಲ್ಲುತ್ತದೆ: ಮನೀಶ್ ಸಿಸೋಡಿಯಾ

P

Peepal Media • ದೇಶ

• 1 ನಿಮಿಷದ ಓದು

ತಡವಾದರೂ ಪ್ರಾಮಾಣಿಕತೆ ಮತ್ತು ಸತ್ಯವೇ ಗೆಲ್ಲುತ್ತದೆ: ಮನೀಶ್ ಸಿಸೋಡಿಯಾ

ಪ್ರಾಮಾಣಿಕತೆ ಮತ್ತು ಸತ್ಯ ತಡವಾಗಿ ಗೆದ್ದಿದೆ ಎಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ದೆಹಲಿ ಲಿಕ್ಕರ್ ಪಾಲಿಸಿ ಪ್ರಕರಣದಲ್ಲಿ ಬಂಧಿತರಾಗಿ 570 ದಿನಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್ ಸಿಸೋಡಿಯಾ ಅವರಿಗೆ ನಿನ್ನೆ ಜಾಮೀನು ಸಿಕ್ಕಿದೆ.

ಅವರು ಶುಕ್ರವಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಇಂದು ಮುಂಜಾನೆ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಅವರೊಂದಿಗೆ ಹಲವು ಎಎಪಿ ನಾಯಕರು ಉಪಸ್ಥಿತರಿದ್ದರು. ಬಜರಂಗ ಬಲಿಯ ಆಶೀರ್ವಾದದಿಂದ ಜೈಲಿನಿಂದ ಹೊರಬಂದಿದ್ದೇನೆ ಎಂದು ಸಿಸೋಡಿಯಾ ಹೇಳಿದ್ದಾರೆ. ಶೀಘ್ರದಲ್ಲೇ ಸಿಎಂ ಕೇಜ್ರಿವಾಲ್ ಕೂಡ ಭಜರಂಗಬಲಿಯ ಆಶೀರ್ವಾದದಿಂದ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದರು. ಆ ಬಳಿಕ ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರೆಲ್ಲರೂ ಮಹಾತ್ಮಾ ಗಾಂಧಿ ಅವರ ಸ್ಮಾರಕ ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ ಸಲ್ಲಿಸಿದರು.

ನಂತರ ದೆಹಲಿಯ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಸೋಡಿಯಾ, ತಡವಾದರೂ ಪ್ರಾಮಾಣಿಕತೆ ಮತ್ತು ಸತ್ಯವೇ ಅಂತಿಮವಾಗಿ ಗೆದ್ದಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಕಷ್ಟದ ಅವಧಿ ತನ್ನನ್ನು ಮಾನಸಿಕವಾಗಿ ಗಟ್ಟಿಗೊಳಿಸಿದೆ ಎಂದರು ಸಿಸೋಡಿಯಾ.

ಏಳೆಂಟು ತಿಂಗಳಲ್ಲಿ ನ್ಯಾಯ ಸಿಗುತ್ತದೆ ಎಂದು ಭಾವಿಸಿದ್ದೆ ಆದರೆ 17 ತಿಂಗಳು ಬೇಕಾಯಿತು ಎಂದರು. ತಡವಾಗಿಯಾದರೂ ಸತ್ಯ ಗೆದ್ದಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.

ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರತಿಪಕ್ಷಗಳ ಮೈತ್ರಿಕೂಟ ಒಗ್ಗೂಡಿ ಹೋರಾಡುವ ಅಗತ್ಯವಿದೆ ಎಂದು ಸಿಸೋಡಿಯಾ ಹೇಳಿದ್ದಾರೆ. ಎಎಪಿ ಕಾರ್ಯಕರ್ತರು ಮತ್ತು ಮುಖಂಡರು ಇಂದು ಜೈಲಿನಲ್ಲಿದ್ದಾರೆ, ನಮಗೇಕೆ ಎಂದುಕೊಂಡು ಸುಮ್ಮನಿದ್ದರೆ ನಾಳೆ ನಿಮ್ಮ ಸರದಿಯೂ ಬರುತ್ತದೆ. ಎಲ್ಲರೂ ಒಗ್ಗೂಡಿ ಹೋರಾಟ ನಡೆಸಿದರೆ ಸರ್ವಾಧಿಕಾರ ಕೊನೆಗೊಂಡು ಕೇಜ್ರಿವಾಲ್ ಕೇವಲ 24 ಗಂಟೆಯಲ್ಲಿ ಜೈಲಿನಿಂದ ಹೊರಬರಲಿದ್ದಾರೆ ಎಂದು ಅವರು ಹೇಳಿದರು.

P

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version