ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದಿನಿಂದ ಸಂಸತ್‌ ಮುಂಗಾರು ಅಧಿವೇಶನ: ಸಂಘಟಿತ ದಾಳಿಗೆ INDIA ಸಜ್ಜು

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಇಂದಿನಿಂದ ಸಂಸತ್‌ ಮುಂಗಾರು ಅಧಿವೇಶನ: ಸಂಘಟಿತ ದಾಳಿಗೆ INDIA ಸಜ್ಜು

ಹೊಸದೆಹಲಿ: ಇಂದಿನಿಂದ ಸಂಸತ್‌ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು ಆಡಳಿತ ಮತ್ತು ವಿರೋಧಪಕ್ಷಗಳು ತಮ್ಮ ತಮ್ಮ ಆಯುಧಗಳೊಡನೆ ಸಜ್ಜುಗೊಂಡಿವೆ.

ಅಧಿವೇಶನಕ್ಕೆ ಒಂದು ವಾರದ ಹಿಂದಿನಿಂದ ನಡೆಯುತ್ತಿರುವ ರಾಜಕೀಯ ಪಕ್ಷಗಳ ಒಗ್ಗಟ್ಟು ಪ್ರದರ್ಶನ ಒಂದು ಹಂತಕ್ಕೆ ಬಂದಿದ್ದು ಈಗ ಸಂಸತ್ತಿನಲ್ಲಿ ಅದಕ್ಕೆ ವೇದಿಕೆ ಸಿದ್ಧವಾಗಿದೆ.

ನರೇಂದ್ರ ಮೋದಿ ನೇತ್ರತ್ವದ ಎನ್‌ಡಿಎ ಸರ್ಕಾರವು ಒಟ್ಟು 31 ಮಸೂದೆಗಳನ್ನು ಮಂಡಿಸಲು ತಯಾರಾಗಿದ್ದು, ಇವುಗಳಲ್ಲಿ ಕೆಲವು ಮಸೂದೆಗಳ ಜೊತೆಗೆ ಮಣಿಪುರ ಗಲಭೆಯ ವಿಷಯವೂ ಸಂಸತ್ತಿನಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.

ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು ಇದು ವಿಪಕ್ಷಗಳ ಸಂಘಟಿತ ದಾಳಿಗೆ ತುತ್ತಾಗುವ ಎಲ್ಲಾ ಸಂಭವವಿದೆ. ಇದರ ವಿರುದ್ಧ ನಿಲ್ಲುವುದಾಗಿ ಮೊನ್ನೆಯಷ್ಟೇ ಚಾಲನೆಗೆ ಬಂದ ಇಂಡಿಯಾ ಒಕ್ಕೂಟ ಹೇಳಿತ್ತು. ಹೀಗಾಗಿ ಈ ವಿಷಯವು ಸರ್ಕಾರದ ಪಾಲಿಗೆ ಬಿಸಿ ತುಪ್ಪವಾಗುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿವೆ.

ಇತ್ತ ಮೋದಿ ಕೂಡಾ ತನ್ನ ಹಳೆಯ ಗೆಳೆಯರ ಜೊತೆ ಇನ್ನಷ್ಟು ಹೊಸ ಗೆಳೆಯರನ್ನು ಸೇರಿಸಿಕೊಂಡು ತನ್ನ ತಂಡವನ್ನು ಇನ್ನಷ್ಟು ಬಲಿಷ್ಟಗೊಳಿಸಿದ್ದಾರೆ.

ಈ ಬಾರಿಯ ಅಧಿವೇಶನದಲ್ಲಿ ಒಟ್ಟು 31 ಬಿಲ್ ಮಂಡನೆ ಸಾಧ್ಯತೆ ಇದೆ. ಈ 31 ಬಿಲ್ ಲೋಕಸಭೆಯಲ್ಲಿ ಸರಾಗವಾಗಿ ಪಾಸ್ ಆಗಲಿದ್ದು ರಾಜ್ಯಸಭೆಯಲ್ಲಿ ಬಿಲ್ ಪಾಸ್ ಮಾಡಲು ವಿಪಕ್ಷಗಳು ಅಡ್ಡಿಗೆ ಯತ್ನಿಸಬಹುದು. ಸದ್ಯ ರಾಜ್ಯಸಭೆಯ ಒಟ್ಟು 238 ಸಂಸದರಿದ್ದು, ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಗಳು ಒಟ್ಟಾಗಿ 111 ಸದಸ್ಯರನ್ನು ಹೊಂದಿವೆ (ನಾಮನಿರ್ದೇಶಿತ ಸಂಸದರು ಸೇರಿದಂತೆ) ಬಿಜೆಡಿ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಟಿಡಿಪಿ ಮತ್ತು ಜೆಡಿಎಸ್ ಹೊರತುಪಡಿಸಿ ಪ್ರತಿಪಕ್ಷಗಳು 106 ಸದಸ್ಯರನ್ನ ಹೊಂದಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭಗೊಂಡು ಆಗಸ್ಟ್ 11ರ ತನಕ ಮುಂದುವರೆಯಲಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು