ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಂಸಿಡಿ ಚುನಾವಣೆ: ತೀವ್ರ ಹಣಾಹಣಿಯಲ್ಲಿ ಎಎಪಿ ಮುನ್ನಡೆ

P

Peepal Media Desk • ದೇಶ

• 1 ನಿಮಿಷದ ಓದು

ಎಂಸಿಡಿ ಚುನಾವಣೆ: ತೀವ್ರ ಹಣಾಹಣಿಯಲ್ಲಿ ಎಎಪಿ ಮುನ್ನಡೆ

ಹೊಸದಿಲ್ಲಿ: ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆಯ (ಎಂಸಿಡಿ) ಮತಗಳ ಎಣಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು, ಆಮ್ ಆದ್ಮಿ ಪಾರ್ಟಿ ಮತ್ತು ಭಾರತೀಯ ಜನತಾ ಪಕ್ಷಗಳ ನಡುವೆ ತುರುಸಿನ ಹಣಾಹಣಿ ನಡೆದಿದೆ.

ಮೊದಲ ಹಂತದ ಮತ ಎಣಿಕೆಯಲ್ಲಿ ಎಎಪಿ ಮೇಲುಗೈ ಸಾಧಿಸಿದ್ದು, 250 ಸದಸ್ಯ ಸ್ಥಾನಗಳ ಪೈಕಿ 127ರಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 115 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಂಸಿಡಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಾವುದೇ ಪಕ್ಷಕ್ಕೆ 126 ಸದಸ್ಯ ಸ್ಥಾನ ಬೇಕಾಗಿದ್ದು, ಫೊಟೋಫಿನಿಷ್ ಫಲಿತಾಂಶ ಬರುವ ನಿರೀಕ್ಷೆಯಿದೆ.

ದಿಲ್ಲಿಯಲ್ಲಿ ಈಗಾಗಲೇ ತನ್ನ ಶಕ್ತಿ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕೇವಲ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಓರ್ವ ಪಕ್ಷೇತರರು ಮುನ್ನಡೆ ಕಾಪಾಡಿಕೊಂಡಿದ್ದಾರೆ.

ಇನ್ನು ಕೆಲವೇ ಗಂಟೆಗಳಲ್ಲಿ ಅಂತಿಮ ಫಲಿತಾಂಶ ಬರುವ ನಿರೀಕ್ಷೆಯಿದ್ದು, ಒಟ್ಟು 42 ಎಣಿಕಾ ಕೇಂದ್ರಗಳಲ್ಲಿ ಮತಗಳ ಎಣಿಕೆ ಬಿಗಿಭದ್ರತೆಯಲ್ಲಿ ನಡೆಯುತ್ತಿದೆ.

ಡಿಸೆಂಬರ್ 4 ರಂದು ಎಂಸಿಡಿಗೆ ನಡೆದ ಚುನಾವಣೆಯಲ್ಲಿ ಕೇವಲ ಶೇ.50 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. 2017ರಲ್ಲಿ ಭಾರತೀಯ ಜನತಾ ಪಕ್ಷ ಆಗ ಇದ್ದ 270 ಸದಸ್ಯ ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version