ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನನ್ನ ಮನೆ ಮಣಿಪುರದಲ್ಲಿದೆ, ಶಾಂತಿ ಮರುಸ್ಥಾಪಿಸಿ: ಪ್ರಧಾನಿ ಮೋದಿಗೆ ಮೀರಾಬಾಯಿ ಚಾನು ಮನವಿ

P

Peepal Media Desk • ದೇಶ

• 1 ನಿಮಿಷದ ಓದು

ನನ್ನ ಮನೆ ಮಣಿಪುರದಲ್ಲಿದೆ, ಶಾಂತಿ ಮರುಸ್ಥಾಪಿಸಿ: ಪ್ರಧಾನಿ ಮೋದಿಗೆ ಮೀರಾಬಾಯಿ ಚಾನು ಮನವಿ

ಇಂಫಾಲ್: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿಷಯದಲ್ಲಿ ಸ್ವತಃ ಪ್ರಧಾನಿ ಮೋದಿಯವರೇ ಮಧ್ಯಸ್ಥಿಕೆ ವಹಿಸಬೇಕು ಎಂದು ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಮನವಿ ಮಾಡಿಕೊಂಡಿದ್ದಾರೆ. ತಮ್ಮ ರಾಜ್ಯದಲ್ಲಿ ಎರಡು ಸಮುದಾಯಗಳ ಮಧ್ಯೆ ನಡೆಯುತ್ತಿರುವ ಘರ್ಷಣೆಯನ್ನು ಶೀಘ್ರವಾಗಿ ಪರಿಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಮಣಿಪುರದಲ್ಲಿ ಮೇ 3ರಿಂದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ಇದುವರೆಗೆ ಘರ್ಷಣೆಯಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಸ್ತುತ ಅಮೇರಿಕಾದಲ್ಲಿ ತರಬೇತಿ ಪಡೆಯುತ್ತಿರುವ ಮೀರಾಬಾಯಿ ಚಾನು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಈಶಾನ್ಯ ರಾಜ್ಯದ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಸಾಧ್ಯವಾಗುತ್ತಿಲ್ಲ, ಈ ಹಿಂಸಾಚಾರದಿಂದ ಕ್ರೀಡಾಪಟುಗಳ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾಗಿ 3 ತಿಂಗಳು ಕಳೆದಿವೆ. ಇನ್ನೂ ಇಲ್ಲಿ ಶಾಂತಿ ಸ್ಥಾಪನೆಯಾಗಿಲ್ಲ. ಈ ಸಂಘರ್ಷದಿಂದಾಗಿ ಹಲವಾರು ಆಟಗಾರರಿಗೆ ತರಬೇತಿ ಪಡೆಯಲು ಸಾಧ್ಯವಾಗಿಲ್ಲ, ಅಲ್ಲದೆ ಇದರಿಂದ ಮಕ್ಕಳ ಶಿಕ್ಷಣಕ್ಕೂ ಅಡ್ಡಿಯಾಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಇದರ ಜತೆಗೆ ಅನೇಕ ಮನೆಗಳು ನಾಶವಾಗಿವೆ ಎಂದು ಚಾನು ತನ್ನ ಟ್ವಿಟರ್ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

ಆ ವಿಡಿಯೋದಲ್ಲಿ ಅವರು “ನಾನು ಈ ವಿಡಿಯೋ ಮೂಲಕ ಗೃಹ ಸಚಿವ ಅಮಿತ್‌ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ನನ್ನ ರಾಜ್ಯದ ಸ್ಥಿತಿಯನ್ನು ನೋಡಿ ನನಗೆ ತರಬೇತಿಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ರಾಜ್ಯದಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ನಿಲ್ಲಿಸಲು ಅಗತ್ಯ ಕಠಿಣ ಕ್ರಮಗಳನ್ನು ಕೈಗೊಂಡು ಶಾಂತಿಯನ್ನು ಮರುಸ್ಥಾಪಿಸಿ” ಎಂದು ಅವರು ಕೇಳಿಕೊಂಡಿದ್ದಾರೆ.

“ಮುಂಬರುವ ವಿಶ್ವ  ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ಗೆ ತಯಾರಿ ನಡೆಸಲು ನಾನು ತರಬೇತಿಗಾಗಿ ಯುಎಸ್‌ಎ ಬಂದಿದ್ದರೂ ನನ್ನ ಮನಸ್ಸೆಲ್ಲ ಅಲ್ಲೇ ಇದೆ. ಮಣಿಪುರ ನನ್ನ ಮನೆ. ನಾನು ಪ್ರಸ್ತುತ ಅಲ್ಲಿಲ್ಲದೇ ಹೋದರೂ ಮನಸ್ಸು ಈ ಸಂಘರ್ಷ ಯಾವಾಗ ಕೊನೆಗೊಳ್ಳುವುದೋ ಎನ್ನುವುದರ ಕುರಿತಾಗಿಯೇ ಯೋಚಿಸುತ್ತಿರುತ್ತದೆ” ಎಂದಿದ್ದಾರೆ.

ಕೆಲವು ತಿಂಗಳ ಹಿಂದೆ ಒಲಂಪಿಕ್ ಪದಕ ವಿಜೇತ ಬಾಕ್ಸರ್ ಮತ್ತು ರಾಜ್ಯಸಭಾ ಸಂಸದೆ ಮೇರಿ ಕೋಮ್ ಕೂಡಾ ಪ್ರಧಾನಿ ಮತ್ತು ಗೃಹಸಚಿವರು ಸೇರಿದಂತೆ ಹಲವರಿಗೆ ಟ್ಯಾಗ್‌ ಮಾಡಿ ಈ ವಿಷಯದ ಕುರಿತು ಮನವಿ ಸಲ್ಲಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ವಿಷಯಗಳು: #india #kannada #news #peepal #peepalmedia
P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version