ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಮೋದಿ-ಅದಾನಿ ಏಕ್ ಹೈ’ ಜಾಕೆಟ್‌ಗಳೊಂದಿಗೆ ಸಂಸತ್ತಿನಲ್ಲಿ ವಿಶಿಷ್ಟ ಪ್ರತಿಭಟನೆ

P

Peepal Media Desk • ದೇಶ

• 1 ನಿಮಿಷದ ಓದು

‘ಮೋದಿ-ಅದಾನಿ ಏಕ್ ಹೈ’ ಜಾಕೆಟ್‌ಗಳೊಂದಿಗೆ ಸಂಸತ್ತಿನಲ್ಲಿ ವಿಶಿಷ್ಟ ಪ್ರತಿಭಟನೆ
ಉದ್ಯಮಿ ಗೌತಮ್ ಅದಾನಿ ವಿರುದ್ಧ ಇರುವ ಲಂಚದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸಂಸತ್ತಿನಲ್ಲಿ 'ಮೋದಿ-ಅದಾನಿ ಏಕ್ ಹೈ' ಜಾಕೆಟ್‌ಗಳೊಂದಿಗೆ ಸಂಸತ್ತಿನಲ್ಲಿ ವಿಶಿಷ್ಟ ಪ್ರತಿಭಟನೆ ನಡೆಸಿದ್ದು, ಇದರಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ಪಾಲ್ಗೊಂಡಿದ್ದಾರೆ

ನವದೆಹಲಿ: ಅದಾನಿ ದೋಷಾರೋಪಣೆ ವಿಚಾರದಲ್ಲಿ ವಿಶಿಷ್ಟ ಶೈಲಿಯ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಂಸದರು ಗುರುವಾರ ಸಂಸತ್ತಿನಲ್ಲಿ  ʼಮೋದಿ ಅದಾನಿ ಏಕ್ ಹೈ [ಮೋದಿ ಮತ್ತು ಅದಾನಿ ಒಂದೇ]’ ಎಂದು ಬರೆದಿರುವ ಜಾಕೆಟ್‌ಗಳನ್ನು ಧರಿಸಿ ಪ್ರತಿಭಟನೆ ನಡೆಸಿದರು.

ತನ್ನ ಸೋದರಳಿಯನ ಜೊತೆಗೂಡಿ ಲಂಚ ಕೊಟ್ಟು ವಂಚನೆ ಮಾಡಿರುವ ಆರೋಪದ ಮೇಲೆ ಯುಎಸ್ ಪ್ರಾಸಿಕ್ಯೂಟರ್‌ಗಳು ಅದಾನಿ ವಿರುದ್ಧ ದೋಷಾರೋಪಣೆ ಮಾಡಿದ್ದರು. ಅದಾನಿ ವಿರುದ್ಧದ ಈ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿವೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೇಸ್ ಸಂಸದೆ ಸಹೋದರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸಂಸದರು ʼಮೋದಿ ಅದಾನಿ ಏಕ್ ಹೈʼ ಎಂಬ ಬರಹ ಇರುವ ಕಪ್ಪು ಹಾಫ್ ಜಾಕೆಟ್‌ಗಳನ್ನು ಧರಿಸಿ ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ತಮ್ಮ ಸಾಂಕೇತಿಕ ಪ್ರತಿಭಟನೆ ನಡೆಸಿದರು.

“…ಮೋದಿ ಜೀ ಅವರು ಅದಾನಿ ಜೀ ಅವರನ್ನು ತನಿಖೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಅವರು ತನಿಖೆ ಮಾಡಿದರೆ, ಅವರು ಸ್ವತಃ ತಾವೇ ತನಿಖೆಗೆ ಒಳಪಡುತ್ತಾರೆ … ಮೋದಿ ಔರ್ ಅದಾನಿ ಏಕ್ ಹೈ. ದೋ ನಹೀ ಹೈ, ಏಕ್ ಹೈ,” ಎಂದು ಲೋಕಸಭೆಯ ಲೋಕಸಭೆ ರಾಹುಲ್ ಗಾಂಧಿ ಹೇಳಿದರು.

ಬುಧವಾರವೂ ಹಲವು ಇಂಡಿಯಾ ಬ್ಲಾಕ್ ಪಕ್ಷಗಳ ಮುಖಂಡರು ಅದಾನಿ ದೋಷಾರೋಪಣೆ ವಿಚಾರವಾಗಿ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು 
ಮತ್ತು ಈ ಬಗ್ಗೆ ಜಂಟಿ ಸಂಸದೀಯ ತನಿಖೆಗೆ ಕರೆ ನೀಡಿದರು. ರಾಹುಲ್ ಗಾಂಧಿ ಆ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿರಲಿಲ್ಲ. ಅವರು ಬೆಳಿಗ್ಗೆ ಕಾಂಗ್ರೆಸ್ ನಿಯೋಗದೊಂದಿಗೆ ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ತೆರಳಿದರು.

ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ತಮ್ಮ ಬೇಡಿಕೆಯ ಪರವಾಗಿ ಸಂಸತ್ತಿನ ಮಕರ ದ್ವಾರದಲ್ಲಿ “ಮೋದಿ ಅದಾನಿ ಏಕ್ ಹೈ” ಎಂಬ ಬ್ಯಾನರ್ ಹಿಡಿದುಕೊಂಡು ಘೋಷಣೆಗಳನ್ನು ಕೂಗಿದರು. ಪ್ರತಿಪಕ್ಷಗಳ ಈ ಪ್ರತಿಭಟನೆಯಿಂದ ಟಿಎಂಸಿ ದೂರವಿತ್ತು.

ಈ ಮಧ್ಯೆ, ಸಂಸತ್ತಿನ ಗೇಟ್‌ಗಳ ಮುಂದೆ ಪ್ರತಿಭಟನೆ ನಡೆಸದಂತೆ ಸಂಸದರಿಗೆ ಲೋಕಸಭೆ ಸೆಕ್ರೆಟರಿಯೇಟ್ ಮಂಗಳವಾರ ಸಲಹೆ ನೀಡಿದ್ದು, ಸಂಚಾರಕ್ಕೆ ಅಡ್ಡಿಯಾಗಿ ಅವರ ಸುರಕ್ಷತೆ ಮತ್ತು ಭದ್ರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ. ಮಂಗಳವಾರ ಅದೇ ಸ್ಥಳದಲ್ಲಿ ಪ್ರತಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದರು.

ಲಂಚ ಮತ್ತು ವಂಚನೆ ಆರೋಪಗಳ ಕುರಿತು ಅಮೇರಿಕಾ ನ್ಯಾಯಾಲಯದಲ್ಲಿ ಅದಾನಿಯವರ ದೋಷಾರೋಪಣೆಯು ಬಿಲಿಯನೇರ್ ಕೈಗಾರಿಕೋದ್ಯಮಿಗಳ ಸಮೂಹವನ್ನು ಒಳಗೊಂಡಿರುವ ವಿವಿಧ “ವಂಚನೆಗಳ” ಕುರಿತು ಜೆಪಿಸಿ ತನಿಖೆಯ ತನ್ನ ಬೇಡಿಕೆಯನ್ನು “ಸರ್ಜಿತಗೊಳಿಸುತ್ತದೆ” ಎಂದು ಕಾಂಗ್ರೆಸ್ ಹೇಳಿದೆ.

ಅದಾನಿಯನ್ನು ಬಂಧಿಸಬೇಕು ಎಂದು ಗಾಂಧಿ ಕಳೆದ ತಿಂಗಳು ಆಗ್ರಹಿಸಿದ್ದರು. ಅದಾನಿ ಗ್ರೂಪ್ ಎಲ್ಲಾ ಆರೋಪಗಳನ್ನು “ಆಧಾರರಹಿತ” ಎಂದು ತಳ್ಳಿಹಾಕಿದೆ.

P

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version