ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸದ್ಯದಲ್ಲೇ ಕೇಂದ್ರ ಸಚಿವ ಸಂಪುಟಕ್ಕೆ ಭಾರಿ ಸರ್ಜರಿ: ಮನೆಗೆ ನಡೆಯಲಿದ್ದಾರೆಯೇ ಧರ್ಮೇಂದ್ರ ಪ್ರಧಾನ್‌?

PPeepal Media

Peepal Media ದೇಶ

• 2 ನಿಮಿಷದ ಓದು

ಸದ್ಯದಲ್ಲೇ ಕೇಂದ್ರ ಸಚಿವ ಸಂಪುಟಕ್ಕೆ ಭಾರಿ ಸರ್ಜರಿ: ಮನೆಗೆ ನಡೆಯಲಿದ್ದಾರೆಯೇ ಧರ್ಮೇಂದ್ರ ಪ್ರಧಾನ್‌?

ಕೇಂದ್ರ ಸಚಿವ ಸಂಪುಟದ ಭಾರಿ ಪುನರ್ರಚನೆಗೆ ತೆರೆಮರೆಯಲ್ಲಿ ಸಿದ್ಧತೆಗಳು ಅತ್ಯಂತ ವೇಗವಾಗಿ ಸಾಗುತ್ತಿವೆ. ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಈ ಬಾರಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಜೋರಾಗಿದೆ. ಇದರ ಭಾಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬರುವ ಭಾನುವಾರ ಅಥವಾ ಸೋಮವಾರದಂದು ಸಚಿವ ಸಂಪುಟ ಪುನರ್ರಚನೆ ಪ್ರಕ್ರಿಯೆ ನಡೆಯಲಿದ್ದು, ಈ ಕುರಿತು ರಾಷ್ಟ್ರಪತಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಾರಿಯ ಪುನರ್ರಚನೆಯಲ್ಲಿ ಆರ್‌ಬಿಐ (RBI) ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಪ್ರಸ್ತುತ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರನ್ನು ಮಾನವ ಸಂಪನ್ಮೂಲ ಇಲಾಖೆಗೆ (ಶಿಕ್ಷಣ ಸಚಿವಾಲಯ) ವರ್ಗಾಯಿಸುವ ಸಾಧ್ಯತೆಯಿದೆ. ಇನ್ನು ನೀಟ್ ಹಗರಣದ ವಿವಾದಕ್ಕೆ ಸಿಲುಕಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಬಹುದು ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಠಾಕ್ರೆ ಬಣದಿಂದ ಹೊರಬಂದು ಆರು ಸಂಸದರನ್ನು ಒಟ್ಟುಗೂಡಿಸಿದ ಶಿವಸೇನೆಗೆ (ಶಿಂಧೆ ಬಣ) ಉಡುಗೊರೆಯಾಗಿ ಸಂಸದ ಶ್ರೀಕಾಂತ್ ಶಿಂಧೆ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ. ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಈ ಬಾರಿ ಮರಳಿ ಸಚಿವ ಸ್ಥಾನ ಸಿಗಲಿದ್ದು, ‘ರಾಮಾಯಣ’ ಧಾರಾವಾಹಿಯ ರಾಮನ ಪಾತ್ರಧಾರಿ ಹಾಗೂ ಮೀರತ್ ಸಂಸದ ಅರುಣ್ ಗೋವಿಲ್ ಅವರನ್ನು ಸಹ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಹಣಕಾಸು ಇಲಾಖೆಯ ರಾಜ್ಯ ಸಚಿವ, ಉತ್ತರ ಪ್ರದೇಶದ ಪಂಕಜ್ ಚೌಧರಿ ಅವರನ್ನು ಸಂಪುಟದಿಂದ ಕೈಬಿಡಬಹುದು ಎನ್ನಲಾಗಿದ್ದು, ಆಪ್ (AAP) ಪಕ್ಷದಿಂದ ಬಂದಿರುವ ನಾಯಕರಾದ ರಾಘವ್ ಚಡ್ಡಾ ಅಥವಾ ಅಶೋಕ್ ಮಿತ್ತಲ್ ಅವರಲ್ಲಿ ಒಬ್ಬರಿಗೆ ಸ್ಥಾನ ಕಲ್ಪಿಸುವ ಚರ್ಚೆ ನಡೆದಿದೆ.

ಈ ಬಾರಿಯ ಪುನರ್ರಚನೆಯು ಸುಮಾರು 25 ರಿಂದ 30 ಮಂತ್ರಿಗಳ ಮೇಲೆ ನೇರ ಪ್ರಭಾವ ಬೀರಲಿದೆ ಎಂದು ಬಿಜೆಪಿ ಮೂಲಗಳು ಬಹಿರಂಗಪಡಿಸಿವೆ. ಇದರಲ್ಲಿ 8 ರಿಂದ 10 ಸಚಿವರಿಗೆ ಉದ್ವಾಸನೆ ಹಾಡುವುದು, 5 ರಿಂದ 7 ರಾಜ್ಯ ಸಚಿವರಿಗೆ ಸಂಪುಟ ದರ್ಜೆಗೆ ಬಡ್ತಿ ನೀಡುವುದು ಅಥವಾ ಪ್ರಮುಖ ಇಲಾಖೆಗಳ ಜವಾಬ್ದಾರಿ ವಹಿಸುವುದು, 10 ರಿಂದ 15 ಹೊಸ ಮುಖಗಳಿಗೆ ಅವಕಾಶ ನೀಡುವುದು ಮತ್ತು ಇನ್ನೊಂದು 10 ರಿಂದ 15 ಮಂತ್ರಿಗಳ ಇಲಾಖೆಗಳನ್ನು ಬದಲಾಯಿಸುವ ದೊಡ್ಡ ಮಟ್ಟದ ಕಸರತ್ತು ನಡೆಯಲಿದೆ. ರಾಜ್ಯಾಂಗದ ನಿಯಮಗಳ ಪ್ರಕಾರ ಕೇಂದ್ರ ಸಚಿವ ಸಂಪುಟದ ಗರಿಷ್ಠ ಸದಸ್ಯರ ಸಂಖ್ಯೆ 81 ಆಗಿರಬಹುದಾಗಿದ್ದರಿಂದ, ಹೊಸಬರಿಗೆ ಹೆಚ್ಚಿನ ಅವಕಾಶ ಸಿಗಲಿದೆ.

ಇದೇ ವೇಳೆ ತೆಲಂಗಾಣದ ಬಂಡಿ ಸಂಜಯ್ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುತ್ತಾರೆಯೇ ಎಂಬುದು ಪ್ರಶ್ನಾರ್ಥಕವಾಗಿದೆ. ಇತ್ತೀಚೆಗಷ್ಟೇ ಅವರ ಪುತ್ರ ಪೋಕ್ಸೊ (POCSO) ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾಗಿರುವುದರಿಂದ, ಬಂಡಿ ಸಂಜಯ್ ಅವರನ್ನು ಪದವಿಯಿಂದ ಮುಕ್ತಗೊಳಿಸಬೇಕು ಎಂದು ಅವರ ವಿರೋಧಿ ಬಣ ಒತ್ತಾಯಿಸುತ್ತಿದೆ. ತೆಲಂಗಾಣದಿಂದ ಸಚಿವ ಸ್ಥಾನಕ್ಕಾಗಿ ಈಟಲ ರಾಜೇಂದರ್, ಲಕ್ಷ್ಮಣ್, ಅರವಿಂದ್ ಮತ್ತು ಡಿ.ಕೆ. ಅರುಣಾ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

ಕೇಂದ್ರ ಸಚಿವ ಸಂಪುಟದ ವಿಸ್ತರಣೆಯ ಜೊತೆಗೆ ಬಿಜೆಪಿಯ ಸಾಂಸ್ಥಿಕ ಹುದ್ದೆಗಳಲ್ಲೂ ವ್ಯಾಪಕ ಬದಲಾವಣೆಗಳು ಆಗಲಿವೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ಘೋಷಿಸಲಾದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಯುವಕರು ಮತ್ತು ಒಬಿಸಿ (OBC) ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಸಮಾಜವಾದಿ ಪಕ್ಷದ ಪಿಡಿಎ (ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರು) ಘೋಷಣೆಗೆ ಕೌಂಟರ್ ನೀಡಲು ಯುಪಿ ಬಿಜೆಪಿಯಲ್ಲಿ ಈ ಬದಲಾವಣೆ ಮಾಡಲಾಗಿತ್ತು. ಇದೀಗ ಪಕ್ಷದ ರಾಷ್ಟ್ರೀಯ ನಾಯಕತ್ವವೂ ಸಹ ಇದೇ ಸೂತ್ರವನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದು, ಯುವಕರು, ಮಹಿಳೆಯರು ಮತ್ತು ಇತರ ಸಾಮಾಜಿಕ ವರ್ಗಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ತೀರ್ಮಾನಿಸಿದೆ ಎಂದು ವರದಿಯಾಗಿದೆ.

ಇತ್ತೀಚೆಗಷ್ಟೇ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರ ಅಧಿಕಾರಾವಧಿ ಮುಗಿದಿದ್ದರೂ ಅವರನ್ನು ಮರಳಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿಲ್ಲ. ಇದೇ ಮಾದರಿಯಲ್ಲಿ ಶೀಘ್ರದಲ್ಲೇ ಹಲವು ಹಿರಿಯ ನಾಯಕರನ್ನು ಸಂಘಟನಾತ್ಮಕ ಜವಾಬ್ದಾರಿಗಳಿಗೆ ಸಾಗಿಸುವ ಸಾಧ್ಯತೆಯಿದೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು