ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಭಾಷಣಗಳಲ್ಲಿ 421 ಬಾರಿ ಮಂದಿರ, 758 ಬಾರಿ ‘ಮೋದಿ’ ಎಂದ ಪ್ರಧಾನಿ ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಸಿರು ಎತ್ತಿಲ್ಲ: ಖರ್ಗೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಚುನಾವಣಾ ಭಾಷಣಗಳಲ್ಲಿ 421 ಬಾರಿ ಮಂದಿರ, 758 ಬಾರಿ ‘ಮೋದಿ’ ಎಂದ ಪ್ರಧಾನಿ ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಸಿರು ಎತ್ತಿಲ್ಲ: ಖರ್ಗೆ

ಹೊಸದೆಹಲಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಚುನಾವಣಾ ಭಾಷಣದಲ್ಲಿ 421 ಬಾರಿ ‘ಮಂದಿರ’ ಹಾಗೂ 758 ಬಾರಿ ‘ಮೋದಿ’ ಎಂದು ಉಲ್ಲೇಖಿಸಿದ್ದಾರೆ ಎಂದು ಟೀಕಿಸಿದರು.

ಪಾಕಿಸ್ತಾನ ಮತ್ತು ಅಲ್ಪಸಂಖ್ಯಾತರನ್ನು 224 ಬಾರಿ ಉಲ್ಲೇಖಿಸಲಾಗಿದೆ ಎಂದು ಅವರು ನೆನಪಿಸಿದರು. ಆದರೆ ಮೋದಿ ಒಮ್ಮೆಯೂ ಹಣದುಬ್ಬರ ಮತ್ತು ನಿರುದ್ಯೋಗದ ಬಗ್ಗೆ ಪ್ರಸ್ತಾಪಿಸಲಿಲ್ಲ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರ ಗುರುವಾರ ಸಂಜೆ ಅಂತ್ಯಗೊಂಡಿದೆ. ಇದಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು. ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಪ್ರಚಾರವನ್ನು ಗಮನಿಸಿದರೆ ಕಳೆದ 15 ದಿನಗಳಲ್ಲಿ 232 ಬಾರಿ ಕಾಂಗ್ರೆಸ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅವರು 758 ಬಾರಿ ಮೋದಿ ಹೆಸರನ್ನು ಪ್ರಸ್ತಾಪಿಸಿದರೆ, 573 ಬಾರಿ ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳ ಬಗ್ಗೆ ಮಾತನಾಡಿದರು. ಆದರೆ ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಒಮ್ಮೆಯೂ ಮಾತನಾಡಲಿಲ್ಲ. ಪ್ರಮುಖ ವಿಚಾರಗಳನ್ನು ಬದಿಗಿಟ್ಟು ಪ್ರಚಾರದಲ್ಲಿ ತಮ್ಮ ಬಗ್ಗೆ ಮಾತ್ರ ಮಾತನಾಡಿರುವುದು ಇದರಿಂದ ತಿಳಿಯುತ್ತದೆ ಎಂದರು.

ಇದೇ ವೇಳೆ ಮಾತನಾಡಿದ ಖರ್ಗೆ, ಗಾಂಧಿಯವರು ಅಹಿಂಸೆಯ ರಾಜಕಾರಣ ಮಾಡಿದ್ದು ದ್ವೇಷದ ರಾಜಕಾರಣವನ್ನಲ್ಲ. ಆದರೆ ಮೋದಿಯವರ ರಾಜಕಾರಣ ದ್ವೇಷದಿಂದ ಕೂಡಿದೆ ಎಂದು ಟೀಕಿಸಿದರು. ಜಾತಿ, ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡದಂತೆ ನಿಷೇಧ ಹೇರಿದ್ದ ಚುನಾವಣಾ ಆಯೋಗ ಮೋದಿಯವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಜನರಲ್ಲಿ ಒಡಕು ಮೂಡಿಸಲು ಮಾತನಾಡಿರುವ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.

ಜೂನ್ 4ರ ಫಲಿತಾಂಶದಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಆ ನಂತರ ಬಿಜೆಪಿ ನಾಯಕರು ಗಾಂಧಿಯವರ ಪುಸ್ತಕಗಳನ್ನು ಓದಿ ಮಹಾತ್ಮರ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಲಿ ಎಂದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು