ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಯುವ ಸಮೂಹ ಮೋದಿಯನ್ನು ʼನಾಲಾಯಕ್‌ʼ ಎಂದು ಡಿಸೈಡ್‌ ಮಾಡಿಯಾಗಿದೆ. ಈಗ ಹೇಳಿ ಯಾರಿಗೆ ಮತ ಹಾಕ್ತೀರಿ? ಸಿ ಎಮ್‌ ಪ್ರಶ್ನೆ

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಯುವ ಸಮೂಹ ಮೋದಿಯನ್ನು ʼನಾಲಾಯಕ್‌ʼ ಎಂದು ಡಿಸೈಡ್‌ ಮಾಡಿಯಾಗಿದೆ. ಈಗ ಹೇಳಿ ಯಾರಿಗೆ ಮತ ಹಾಕ್ತೀರಿ? ಸಿ ಎಮ್‌ ಪ್ರಶ್ನೆ

ಕೋಲಾರ (ಶಿಡ್ಲಘಟ್ಟ) ಏ 21: ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ ಪಕೋಡ ಮಾರಾಟ ಮಾಡಿ” ಅಂದ್ರು.

ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.‌

ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ BJP ಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.

ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?‌

ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ. ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ಮು ನಾವು ಮಾಡ್ತೇವೆ ಎಂದು ಘೋಷಿಸಿದರು.

ವರ್ಷಕ್ಕೆ ಒಂದೂಕಾಲು ಲಕ್ಷ ಬಂದು ಬೀಳತ್ತೆ ನಿಮಗೆ

ಹತ್ತತ್ತು ವರ್ಷ ನಿಮಗೆ ಮೋದಿಯವರಿಂದ ಸಿಕ್ಕಿದ್ದು ರಾಶಿ ರಾಶಿ ಸುಳ್ಳುಗಳು ಮತ್ತು ನಂಬಿಕೆ ದ್ರೋಹ ಮಾತ್ರ. ಆದರೆ ಈ ಬಾರಿ ನಮಗೆ ಮತ ಕೊಟ್ಟು ನೋಡಿ…

ವರ್ಷಕ್ಕೆ ಒಂದೂಕಾಲು ಲಕ್ಷ ರೂಪಾಯಿ ಮನೆ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಬಂದು ಬೀಳತ್ತೆ

ಇಡೀ ದೇಶದ ರೈತರ ಸಾಲ ಮನ್ನಾ ಆಗತ್ತೆ

ನಿರುದ್ಯೋಗಿ ಯುವಕ/ ಯುವತಿಯರಿಗೆ ಒಂದು ಲಕ್ಷ ರೂಪಾಯಿ ಕೊಡ್ತೇವೆ

ರೈತರು ಬೆಳೆದ ಬೆಳೆಗಳಿಗೆ ಖಚಿತವಾದ ಬೆಂಬಲ ಬೆಲೆ ಕೊಡುತ್ತೇವೆ

ಇಂಥಾ 25 ಗ್ಯಾರಂಟಿಗಳನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಘೋಷಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ. ಈ ಪತ್ರಗಳು ನಿಮಗೆ ಬರುತ್ತವೆ.

ಹೀಗಾಗಿ ಬಿಜೆಪಿಯ ಖಾಲಿ ಚೊಂಬಿಗೆ ಮತ ಹಾಕ್ತೀರಾ, ನಿಮ್ಮ ಜೇಬು ತುಂಬಿಸುವ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಹಣ ಹಾಕಿ ನುಡಿದಂತೆ ನಡೆಯುವ ನಮಗೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕ್ತೀರೋ ಎನ್ನುವುದನ್ನು ಯೋಚಿಸಿ ತೀರ್ಮಾನಿಸಿ ಎಂದು ಕರೆ ನೀಡಿದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು