ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಡಿತರ ಅಂಗಡಗಳ ಮುಂದೆ ಮೋದಿ ಪ್ಲೆಕ್ಸ್ ಅಳವಡಿಕೆ ಸೂಚನೆ: ತಿರಸ್ಕರಿಸಿದ ಕೇರಳ ಸರ್ಕಾರ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಪಡಿತರ ಅಂಗಡಗಳ ಮುಂದೆ ಮೋದಿ ಪ್ಲೆಕ್ಸ್ ಅಳವಡಿಕೆ ಸೂಚನೆ: ತಿರಸ್ಕರಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು, ಫ್ಲೆಕ್ಸ್ಗಳನ್ನು ಮತ್ತು ಬೋರ್ಡ್‌ಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಆದರೆ, ಈ ನಿರ್ದೇಶನವನ್ನು ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಹಾಗೂ ಕೇರಳ ಮುಖ್ಯಮಂತ್ರಿ ಮತ್ತು ಪಿಣರಾಯಿ ವಿಜಯನ್ ಅವರು ಸಾಧ್ಯವಿಲ್ಲ ಎಂದಿದ್ದಾರೆ ಎಂದು ತಿರಸ್ಕರಿಸಿದ್ದಾರೆ.


ಈ ಕುರಿತು ಕೇರಳ ರಾಜ್ಯ ವಿಧಾನಸಭೆಯಲ್ಲಿ ಕೇರಳ ಸಿಎಂ ಪಿಣರಾಯ್‌ ವಿಜಯನ್ ಮಾತನಾಡಿ, ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯ ಪ್ರಚಾರದ ಗಿಮಿಕ್‌ ಆಗಿದೆ. ಇದನ್ನು ಕೇರಳದಲ್ಲಿ ಜಾರಿಗೆ ತರುವುದು ಕಷ್ಟ ಎಂದು ನಾವು ಕೇಂದ್ರಕ್ಕೆ ತಿಳಿಸುತ್ತೇವೆ. ಇದನ್ನು ಚುನಾವಣಾ ಆಯೋಗದ ಗಮನಕ್ಕೂ ತರುತ್ತೇವೆ ಎಂದರು.


ಕೇಂದ್ರ ಸರಕಾರದ ಪಿಎಂ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿನ ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ದೇಶಿಸಲಾಗಿತ್ತು. ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಪಡಿತರ ಅಂಗಡಿಗಳು ಕೇರಳದಲ್ಲಿ ಬಹಳ ಹಿಂದಿನಿಂದಲೂ ಅಸ್ತಿತ್ವದಲ್ಲಿವೆ. ಆದರೆ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗ ಈ ನಿರ್ದೇಶನವನ್ನು ನೀಡಿದೆ, ಖಂಡಿತವಾಗಿಯೂ ಇದನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವ ಉದ್ದೇಶದಿಂದ ನೀಡಿರುವುದಾಗಿದೆ ಎಂದು ಪಿಣರಾಯ್‌ ವಿಜಯನ್ ದೂರಿದ್ದಾರೆ.


ಇದಕ್ಕೂ ಮುನ್ನ 10,000 ಪಡಿತರ ಅಂಗಡಿಗಳಲ್ಲಿ ಮೋದಿ ಇರುವ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿ ವರದಿ ಸಲ್ಲಿಸುವಂತೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಕೇರಳದ ನಾಗರಿಕ ಮತ್ತು ಸರಬರಾಜು ಖಾತೆ ಸಚಿವ ಜಿ.ಆರ್‌ ಅನಿಲ್ ಸದನಕ್ಕೆ ತಿಳಿಸಿದ್ದಾರೆ. 550 ಪಡಿತರ ಅಂಗಡಿಗಳಲ್ಲಿ ಪ್ರಧಾನಿಯವರ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆಯೂ ನಿರ್ದೇಶನ ನೀಡಿದೆ ಇದಲ್ಲದೆ ಕೇಂದ್ರ ಸರ್ಕಾರದ ಬ್ರ್ಯಾಂಡಿಂಗ್ ಹೊಂದಿರುವ ಕ್ಯಾರಿ ಬ್ಯಾಗ್‌ಗಳನ್ನು ಸಹ ಗ್ರಾಹಕರಿಗೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.


ಸಾರ್ವಜನಿಕರ ಹಣದ ದುರ್ಬಳಕೆ


ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಸೆಲ್ಫೀ ಹುಚ್ಚು ಹೆಚ್ಚಾಗಿದೆ. ಪ್ರಚಾರದ ವಿಚಾರದಲ್ಲಿ ‘ಸೆಲ್ಫಿ ಪಾಯಿಂಟ್‌ಗಳು’ ಮಹತ್ವದ ಪಾತ್ರ ವಹಿಸುತ್ತಿವೆ. ಅವುಗಳನ್ನು ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಲ್ಲಿ ಇರಿಸುವಂತೆ ಈ ಮೊದಲು ನಿರ್ದೇಶನವನ್ನು ನೀಡಲಾಗಿತ್ತು. ಇವೆಲ್ಲವನ್ನೂ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗುತ್ತಿದೆ.
ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌ಗಳ ನಿರ್ಮಾಣಕ್ಕೆ ಆದೇಶ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕರ ವೆಚ್ಚದಲ್ಲಿ ಮೋದಿಯ ಪೋಟೋ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದ್ದು ವಿರೋಧಕ್ಕೆ ಕಾರಣವಾಗಿತ್ತು. ಮೋದಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿರೋಧ ವ್ಯಕ್ತಪಡಿಸಿದ್ದವು.

ವಿಷಯಗಳು: #india #news #peepal #peepalmedia #politics
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು