ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮಿತ್ರಪಕ್ಷಗಳು: ಪ್ರಧಾನಿ ನೇತ್ರತ್ವದಲ್ಲೇ ಮುಂದಿನ ಚನಾವಣೆ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

ಮೋದಿ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮಿತ್ರಪಕ್ಷಗಳು: ಪ್ರಧಾನಿ ನೇತ್ರತ್ವದಲ್ಲೇ ಮುಂದಿನ ಚನಾವಣೆ

ಹೊಸದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಎಲ್ಲಾ 39 ಘಟಕಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ನಂಬಿಕೆಯಿರುವುದಾಗಿ ಹೇಳಿವೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ.

ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ, NDA ಪಾಲುದಾರ ಪಕ್ಷಗಳು ಚುನಾವಣೆಯಲ್ಲಿ ಜಯಗಳಿಸುವ ಮತ್ತು ಸತತ ಮೂರನೇ ಅವಧಿಗೆ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ತಮ್ಮ ಸರ್ಕಾರವನ್ನು ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

“ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆ ನಡೆಯಿತು. NDA ಒಕ್ಕೂಟದ ಒಟ್ಟು 39 ಮೈತ್ರಿ ಪಕ್ಷಗಳು ಇದರಲ್ಲಿ ಭಾಗವಹಿಸಿದ್ದವು” ಎಂದು NDA ನಿರ್ಣಯದಲ್ಲಿ ತಿಳಿಸಲಾಗಿದೆ.

NDA ಮೈತ್ರಿಕೋಟವು “ಯಶಸ್ವಿ 25 ವರ್ಷಗಳನ್ನು” ಪೂರ್ಣಗೊಳಿಸಿದ ಸಂದರ್ಭದಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು ಎಂದು ಅದು ತಿಳಿಸಿದೆ.

“ಸಭೆಯಲ್ಲಿ ಎಲ್ಲಾ NDA ಘಟಕಗಳು ನರೇಂದ್ರ ಮೋದಿಯವರ ನಾಯಕತ್ವವನ್ನು ಒಪ್ಪಿಕೊಂಡಿವೆ ಮತ್ತು ಅವರ ಮುಂದಾಳತ್ವದಲ್ಲೇ ಮುಂದಿನ ಚುನಾವಣೆಯನ್ನು ಎದುರಿಸಲು ಒಪ್ಪಿಕೊಂಡಿವೆ. ಮುಂದಿನ ಬಾರಿಯೂ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ” ಎಂದು ನಿರ್ಣಯ ಹೇಳಿದೆ.

2014ರಲ್ಲಿ ಮೋದಿಯವರ ನಾಯಕತ್ವದಡಿ ಜನರಿಂದ ಪಡೆದ ಆಶೀರ್ವಾದವು 2019ರಲ್ಲಿ ʼಅನೇಕ ಪಟ್ಟುʼ ಹೆಚ್ಚಿದೆ ಎಂದು NDA ಹೇಳಿಕೊಂಡಿದೆ.

“ವಿರೋಧ ಪಕ್ಷಗಳ ಸುಳ್ಳುಗಳು, ವದಂತಿಗಳು ಮತ್ತು ಆಧಾರರಹಿತ ಆರೋಪಗಳನ್ನು ತಿರಸ್ಕರಿಸಿ, ದೇಶವು NDA ಮೈತ್ರಿಕೂಟದ ನಾಯಕತ್ವದಲ್ಲಿ ನಂಬಿಕೆ ಇಡುತ್ತಿದೆ” ಎಂದು ಬಿಜೆಪಿ ನೇತೃತ್ವದ ಮೈತ್ರಿಕೂಟ ಹೇಳಿದೆ.

“ಇಂದು ಪ್ರತಿಪಕ್ಷಗಳು ಅಸ್ತಿತ್ವದ ಮತ್ತು ಪ್ರಸ್ತುತತೆಯ ಬಿಕ್ಕಟ್ಟನ್ನು ಎದುರಿಸುತ್ತಿವೆ. ಅವು ಗೊಂದಲಕ್ಕೊಳಾಗಿ ದಿಕ್ಕು ತಪ್ಪಿವೆ” ಎಂದು ಹೇಳಲಾಗಿದೆ.

ತಮ್ಮ ಬದ್ಧತೆ, ಭಕ್ತಿ, ನಿರಂತರ ಕಠಿಣ ಪರಿಶ್ರಮ ಮತ್ತು ನಿಸ್ವಾರ್ಥ ಸಮರ್ಪಣೆಯ ಮೂಲಕ ಭಾರತವನ್ನು ಅಭೂತಪೂರ್ವ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸಿದ್ದಕ್ಕಾಗಿ ಮತ್ತು ತಮ್ಮ ದೇಶದ ಶಕ್ತಿ ಮತ್ತು ಪರಾಕ್ರಮದ ಸಾಕ್ಷಾತ್ಕಾರದ ಬಗ್ಗೆ ನಾಗರಿಕರಿಗೆ ಹೆಮ್ಮೆ ಪಡಲು ಅವಕಾಶ ನೀಡಿದ್ದಕ್ಕಾಗಿ NDA ಪಕ್ಷಗಳು ಮೋದಿಯವರನ್ನು ಶ್ಲಾಘಿಸಿದವು.

“ಈ ಅಭಿವೃದ್ಧಿಯ ಪಯಣದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಾವು ಒಂದಾಗಿದ್ದೇವೆ, ನಾವು ಒಗ್ಗಟ್ಟಾಗಿದ್ದೇವೆ ಮತ್ತು ನಾವು ಸರ್ವಾನುಮತದಿಂದ ಬದ್ಧರಾಗಿದ್ದೇವೆ” ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ವಿಷಯಗಳು: #kannada #modi #NDA #peepalmedia
PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು