ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ಮಾಲಿನ್ಯದ ಬಗ್ಗೆ ಮೋದಿಯವರ ಮೌನ ಅನುಮಾನ ಹುಟ್ಟಿಸುವಂತಿದೆ. ಈ ಕುರಿತು ಸಂಸತ್ತಿನಲ್ಲಿ ಚರ್ಚೆ ಆಗಬೇಕು: ರಾಹುಲ್ ಗಾಂಧಿ ಆಗ್ರಹ

PPeepal Media

Peepal Media • ದೇಶ

• 1 ನಿಮಿಷದ ಓದು

ದೆಹಲಿ ಮಾಲಿನ್ಯದ ಬಗ್ಗೆ ಮೋದಿಯವರ ಮೌನ ಅನುಮಾನ ಹುಟ್ಟಿಸುವಂತಿದೆ. ಈ ಕುರಿತು ಸಂಸತ್ತಿನಲ್ಲಿ ಚರ್ಚೆ ಆಗಬೇಕು: ರಾಹುಲ್ ಗಾಂಧಿ ಆಗ್ರಹ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತೀವ್ರಗೊಂಡಿರುವ ವಾಯು ಮಾಲಿನ್ಯದ ಬಿಕ್ಕಟ್ಟಿನ ಕುರಿತು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸದೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದು ಅನುಮಾನಗಳಿಗೆ ಎಡೆಮಾಡಿದೆ ಎಂದು ರಾಹುಲ್ ಹೇಳಿದರು. ಮಾಲಿನ್ಯವನ್ನು ನಿಯಂತ್ರಿಸಲು ತಕ್ಷಣವೇ ಕಠಿಣ ಮತ್ತು ಕಾರ್ಯಸಾಧ್ಯವಾದ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಇಂತಹ ಗಂಭೀರ ಸಮಸ್ಯೆಗೆ ಮೋದಿ ಸರ್ಕಾರ ಪ್ರತಿಕ್ರಿಯೆ ನೀಡದಿರುವುದು ಏಕೆ ಎಂದು ಅವರು ಪ್ರಶ್ನಿಸಿದರು. ಶುಕ್ರವಾರ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಮಹಿಳೆಯರೊಂದಿಗೆ ಮಾತನಾಡಿದ ನಂತರ, ರಾಹುಲ್ ಈ ಹೇಳಿಕೆಗಳ ವೀಡಿಯೊವನ್ನು ಬಿಡುಗಡೆ ಮಾಡಿದರು.

“ಮಾಲಿನ್ಯದ ಪರಿಣಾಮ ಮಕ್ಕಳ ಆರೋಗ್ಯದ ಮೇಲೆ ತೀವ್ರವಾಗಿ ಬೀಳುತ್ತಿದೆ. ನನ್ನನ್ನು ಭೇಟಿ ಮಾಡಿದ ಪ್ರತಿಯೊಬ್ಬ ಮಹಿಳೆಯೂ ಮಾಲಿನ್ಯದ ಬಗ್ಗೆಯೇ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳೆಯುವ ಮಕ್ಕಳು ವಿಷಕಾರಿ ಅನಿಲಗಳನ್ನು ಉಸಿರಾಡುತ್ತಿದ್ದಾರೆ ಎಂದು ಅವರು ಆಕ್ರೋಶ ಮತ್ತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.”

“ನೀವು ಇದನ್ನು ಏಕೆ ತುರ್ತು ಸಮಸ್ಯೆ ಎಂದು ಪರಿಗಣಿಸುತ್ತಿಲ್ಲ? ಏಕೆ ಜವಾಬ್ದಾರಿಯುತವಾಗಿ ತೆಗೆದುಕೊಳ್ಳುತ್ತಿಲ್ಲ?” ಎಂದು ಅವರು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದರು.

“ನಮ್ಮ ಮಕ್ಕಳಿಗೆ ಬೇಕಾಗಿರುವುದು ಶುದ್ಧ ಗಾಳಿ. ನೆಪಗಳು ಅಥವಾ ದಾರಿ ತಪ್ಪಿಸುವ ಕ್ರಮಗಳಲ್ಲ,” ಎಂದು ರಾಹುಲ್ ಹೇಳಿದರು.

ದೆಹಲಿಯಲ್ಲಿ ವಾಸಿಸುವ ಅತ್ಯಂತ ಬಡವರಿಂದ ಹಿಡಿದು ಅತ್ಯಂತ ಶ್ರೀಮಂತರವರೆಗೆ ಎಲ್ಲರೂ ಮಾಲಿನ್ಯದಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ರಾಹುಲ್ ತಿಳಿಸಿದರು. ಮಾಲಿನ್ಯದಿಂದ ಲಾಭ ಗಳಿಸುತ್ತಿರುವವರು ಸಂತ್ರಸ್ತರಕ್ಕಿಂತ ಹೆಚ್ಚು ಶಕ್ತಿಶಾಲಿಗಳಾಗಿರುವುದರಿಂದಲೇ ಈ ಸಮಸ್ಯೆ ತೀವ್ರಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಲುಷಿತ ಗಾಳಿಯನ್ನು ಉಸಿರಾಡಿ ದೇಶದಲ್ಲಿ ದಿನಕ್ಕೆ ಸುಮಾರು 500 ಮಕ್ಕಳು ಸಾಯುತ್ತಿದ್ದಾರೆ ಎಂದು ರಾಹುಲ್ ಹೇಳಿದರು. ಆದರೂ ಸರ್ಕಾರ ಇದನ್ನು ತುರ್ತು ವಿಷಯವಾಗಿ ಪರಿಗಣಿಸುತ್ತಿಲ್ಲ ಎಂದು ಕಿಡಿಕಾರಿದರು. ಸಂತ್ರಸ್ತರಾಗಿರುವ ಸಾಮಾನ್ಯ ಜನರಿಗೆ ಸಂಘಟಿತ ರಾಜಕೀಯ ಶಕ್ತಿ ಇಲ್ಲದ ಕಾರಣ ಸಮಸ್ಯೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಎಂದು ಅವರು ತಿಳಿಸಿದರು. ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲೇಬೇಕು ಎಂದು ಒತ್ತಾಯಿಸಿದರು.

ಈ ವೇಳೆ ರಾಹುಲ್ ಅವರೊಂದಿಗೆ ಮಾತನಾಡಿದ ಮಹಿಳೆಯೊಬ್ಬರು, “ಕಳೆದ 15 ವರ್ಷಗಳಿಂದ ದೆಹಲಿಯಲ್ಲಿ ವಾಯು ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದೆ. ಮುಂದಿನ ಹತ್ತು ವರ್ಷಗಳಲ್ಲಿ ಇದು ಇನ್ನಷ್ಟು ಹದಗೆಡಲಿದೆ. ಈಗಲೂ ಪ್ರತಿಕ್ರಿಯಿಸದಿದ್ದರೆ, ಇದೊಂದು ದುರಂತವಾಗಿ ಪರಿಣಮಿಸುತ್ತದೆ,” ಎಂದು ಆತಂಕ ವ್ಯಕ್ತಪಡಿಸಿದರು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು