ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಸ್ಲಿಂ ಮೀಸಲು: ಚಂದ್ರಬಾಬು ನಾಯ್ಡು, ದೇವೇಗೌಡ ಕುರಿತು ಮೋದಿ ಮೌನವೇಕೆ?

PPeepal Media Desk

Peepal Media Desk ದೇಶ

• 2 ನಿಮಿಷದ ಓದು

ಮುಸ್ಲಿಂ ಮೀಸಲು: ಚಂದ್ರಬಾಬು ನಾಯ್ಡು, ದೇವೇಗೌಡ ಕುರಿತು ಮೋದಿ ಮೌನವೇಕೆ?

ಹೊಸದೆಹಲಿ: ಪ್ರತಿ ಚುನಾವಣಾ ಪ್ರಚಾರದಲ್ಲೂ ಪ್ರಧಾನಿ ಮೋದಿ ಮುಸ್ಲಿಮರಿಗೆ ಮೀಸಲಾತಿ ವಿಚಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಳ ಹಂತದ ನಾಯಕರು ಮತ್ತು ಕಾರ್ಯಕರ್ತರು ಈ ಬಗ್ಗೆ ದೊಡ್ಡ ಅಪಪ್ರಚಾರ ಮಾಡುತ್ತಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ಒಪ್ಪುವುದಿಲ್ಲ ಮತ್ತು ಮುಸ್ಲಿಮರಿಗೆ ಕೋಟಾ ನೀಡುವುದಿಲ್ಲ ಎಂದು ಬಿಜೆಪಿ ಕುಟುಂಬವು ಹಠಕ್ಕೆ ಬಿದ್ದಿದೆ. ಆದರೆ, ತಜ್ಞರು ಮತ್ತು ವಿಶ್ಲೇಷಕರು ಹೇಳುವ ಪ್ರಕಾರ ಮುಸ್ಲಿಮರಿಗೆ ಮೀಸಲಾತಿ ನೀಡಿರುವುದು ಆ ವರ್ಗದ ಹಿಂದುಳಿದವರಿಗೆ ಮಾತ್ರ.

ಕರ್ನಾಟಕದಲ್ಲಿ ಮುಸ್ಲಿಮರನ್ನು ಒಬಿಸಿಗೆ ಸೇರಿಸುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತಿದೆ. ಆದಾಗ್ಯೂ, ಬಿಜೆಪಿಯ ಪ್ರಸ್ತುತ ಮಿತ್ರ ಪಕ್ಷ ಜೆಡಿ(ಎಸ್) 1994ರಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ಒದಗಿಸಿತ್ತು ಎಂದು ವಿಶ್ಲೇಷಕರು ಗಮನಸೆಳೆದಿದ್ದಾರೆ.

ಆಗ ಕರ್ನಾಟಕದ ಸಿಎಂ ಆಗಿದ್ದ ದೇವೇಗೌಡರು ಈ ಮೀಸಲಾತಿ ತಂದರು. ಇದಲ್ಲದೆ, ತೆಲುಗು ರಾಜ್ಯವಾದ ಆಂಧ್ರದಲ್ಲಿ ಬಿಜೆಪಿಯ ಮಿತ್ರ ಪಕ್ಷ ಟಿಡಿಪಿ ಕೂಡ ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುತ್ತಿದೆ. ಬುದ್ಧಿಜೀವಿಗಳು ಹೇಳುವ ಪ್ರಕಾರ ಬೇರೆಯವರತ್ತ ಬೆರಳು ತೋರಿಸುವ ಮೊದಲು ವಿಚಾರದ ವೈಚಾರಿಕತೆಯ ಬಗ್ಗೆ ಯೋಚಿಸಬೇಕು, ಚುನಾವಣೆಗಾಗಿ ರಾಜಕೀಯ ಮಾಡಿದರೆ ದೇಶದ ಒಂದು ವರ್ಗವನ್ನು ಕಡೆಗಣಿಸಿದಂತಾಗುತ್ತದೆ, ಇದು ಪ್ರಜಾಪ್ರಭುತ್ವ ದೇಶಕ್ಕೆ ಒಳ್ಳೆಯದಲ್ಲ.

ಕೆಲವು ದಿನಗಳ ಹಿಂದೆ ರಾಜಸ್ಥಾನದ ಬನ್ಸ್ವಾರಾದಲ್ಲಿ ಮೋದಿ ಕಾಂಗ್ರೆಸ್ ಮೇಲೆ ದಾಳಿ ಮಾಡುತ್ತಾ ಒಂದು ವರ್ಗದವರಿಗೆ ಹೆಚ್ಚು ಮಕ್ಕಳಿದ್ದಾರೆ ಎಂದು ಮಾತನಾಡಿದ್ದರು. ಮತ್ತೊಂದು ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಹಿಂದೂಗಳ ಸಂಪತ್ತನ್ನು ಮತ್ತೊಂದು ಗುಂಪಿಗೆ ಹಂಚುತ್ತಿದೆ ಎಂದು ಆರೋಪಿಸಿದರು.

ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಯನ್ನು ಕಸಿದುಕೊಂಡು ಇತರೆ ವರ್ಗಗಳಿಗೆ ಹಂಚಿಕೆ ಮಾಡಲಾಗುತ್ತಿದೆ ಎನ್ನುವ ಮೂಲಕ ಮೋದಿ ಜನರಲ್ಲಿ ಒಡಕು ತಂದು ವಿಷಬೀಜ ಬಿತ್ತಲು ಯತ್ನಿಸುತ್ತಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಬಹುತೇಕ ಚುನಾವಣೆಗಳಲ್ಲಿ ಯಾವುದಾದರೊಂದು ವಿಚಾರದಲ್ಲಿ ಆ ಒಂದು ವರ್ಗವನ್ನು ಮಾತ್ರ ಟಾರ್ಗೆಟ್ ಮಾಡಿ ಇತರ ವರ್ಗಗಳಲ್ಲಿ ಆತಂಕ ಮೂಡಿಸಿ ಮತ ಪಡೆಯುವುದು ಬಿಜೆಪಿ ಮತ್ತು ಪ್ರಧಾನಿ ಉದ್ದೇಶವಾಗಿದೆ ಎಂಬುದು ಟೀಕಾಕಾರರ ಆರೋಪ. ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಬಿಜೆಪಿ ಒಂದು ಗುಂಪಿನ ವಿರುದ್ಧ ತೀವ್ರ ಅಪಪ್ರಚಾರ ಮಾಡಿದೆ ಎನ್ನಲಾಗಿದೆ.

ಲಾಲು ವಿರುದ್ಧ ಟೀಕೆ, ಚಂದ್ರಬಾಬು ಬಗ್ಗೆ ಮೌನ

ಬಿಹಾರದಲ್ಲಿ ಪ್ರತಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮುಸ್ಲಿಮರಿಗೆ ಮೀಸಲಾತಿಗೆ ಆಗ್ರಹಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಪರ ಮಾಧ್ಯಮಗಳೂ ಬಿಜೆಪಿ ಪರವಾಗಿ ಅಪಪ್ರಚಾರ ಮಾಡಿ ಮುಸ್ಲಿಮರ ಮೀಸಲಾತಿ ವಿಚಾರದಲ್ಲಿ ವಿಷ ಕಾರುತ್ತಿವೆ. ಆದರೆ, ಅದೇ ರೀತಿ ಪ್ರತಿಕ್ರಿಯಿಸಿದ ಬಿಜೆಪಿಯ ಮಿತ್ರಪಕ್ಷದ ವಿಚಾರದಲ್ಲಿ ಬಿಜೆಪಿ ಮತ್ತು ಮೋದಿ ಮೌನ ವಹಿಸಿದ್ದರು. ಮಾಧ್ಯಮಗಳು ಕೂಡ ಈ ವಿಷಯದಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸಿಲ್ಲ ಎಂದು ವಿಶ್ಲೇಷಕರು ಗಮನಸೆಳೆದಿದ್ದಾರೆ.

ಮುಸ್ಲಿಮರಲ್ಲಿ ಹಿಂದುಳಿದಿರುವಿಕೆ

2006ರ ಸಾಚಾರ್ ಸಮಿತಿಯ ವರದಿಯು ಮುಸ್ಲಿಂ ಭಾರತೀಯರ ಬಹುಮಟ್ಟದ ಹಿಂದುಳಿದಿರುವಿಕೆಯನ್ನು ಎತ್ತಿ ತೋರಿಸಿದೆ. ಮುಸ್ಲಿಮರು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಹಿಂದೂಗಳಿಗಿಂತಲೂ ಹಿಂದೆ ಇದ್ದಾರೆ, ಸಾಮಾಜಿಕವಾಗಿ ಅಂಚಿನಲ್ಲಿದ್ದಾರೆ ಮತ್ತು ಶಾಲೆಗಳಲ್ಲಿ ಹಿಂದುಳಿದಿದ್ದಾರೆ, ಆರೋಗ್ಯ ರಕ್ಷಣೆ ಮತ್ತು ಭೂ ಮಾಲೀಕತ್ವದಲ್ಲಿ ಐತಿಹಾಸಿಕ ಅಸಮಾನತೆಯನ್ನು ಎದುರಿಸುತ್ತಿದ್ದಾರೆ ಎಂದಿದ್ದ ವರದಿಯ ಮಾಹಿತಿಯನ್ನು ವಿದ್ವಾಂಸರು ನೆನಪಿಸಿಕೊಂಡಿದ್ದಾರೆ. ಬಿಜೆಪಿಯಂತಹ ಹಿಂದುತ್ವವಾದಿ ಪಕ್ಷಗಳು ಮತ್ತು ಸಂಘಟನೆಗಳು ಅವರ ಯೋಗಕ್ಷೇಮಕ್ಕಾಗಿ ಪ್ರಮುಖ ಭರವಸೆಗಳನ್ನು ನೀಡುವುದನ್ನು ಬಲವಾಗಿ ವಿರೋಧಿಸುತ್ತವೆ ಮತ್ತು ಇದೇ ಕಾರಣದಿಂದಾಗಿ ಮುಸ್ಲಿಮರ ಜೀವನ ಇನ್ನೂ ಸುಧಾರಿಸುತ್ತಿಲ್ಲ ಎಂದು ವಿಶ್ಲೇಷಕರು ಹೇಳುತ್ತಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು